Homeಮುಖಪುಟಯುಪಿ ಚುನಾವಣೆ: ಮತದಾನ ಜಾಗೃತಿ ಮೂಡಿಸಲು ಪಿಂಕ್ ಸ್ಕೂಟಿ ರ್‍ಯಾಲಿ ನಡೆಸಿದ ಶಿಕ್ಷಕಿಯರು

ಯುಪಿ ಚುನಾವಣೆ: ಮತದಾನ ಜಾಗೃತಿ ಮೂಡಿಸಲು ಪಿಂಕ್ ಸ್ಕೂಟಿ ರ್‍ಯಾಲಿ ನಡೆಸಿದ ಶಿಕ್ಷಕಿಯರು

- Advertisement -
- Advertisement -

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಐದನೇ ಹಂತದ ಮತದಾನಕ್ಕೆ ಮುನ್ನ, ಮತದಾನದ ಹಕ್ಕನ್ನು ಚಲಾಯಿಸಲು ಜನರಲ್ಲಿ ಜಾಗೃತಿ ಮೂಡಿಸಲು ವಾರಣಾಸಿಯ ಶಿಕ್ಷಕಿಯರು ವಾರಣಾಸಿಯಲ್ಲಿ ‘ಪಿಂಕ್ ಸ್ಕೂಟಿ ರ್‍ಯಾಲಿ’ ನಡೆಸಿದ್ದಾರೆ.

ಇಡೀ ಜಿಲ್ಲೆಯ ಶಿಕ್ಷಕಿಯರು ಪಿಂಕ್ ಸ್ಕೂಟಿ ರ್‍ಯಾಲಿಯಲ್ಲಿ ಭಾಗವಹಿಸಿದ್ದರು. ಜಾಗೃತಿ ರ್‍ಯಾಲಿಯಲ್ಲಿ ಭಾಗವಹಿಸಿದ್ದ ಎಲ್ಲಾ ಮಹಿಳೆಯರು ಗುಲಾಬಿ ಬಣ್ಣದ ಬಟ್ಟೆಗಳನ್ನು ಧರಿಸಿ ಮತದಾರರಿಗೆ, ವಿಶೇಷವಾಗಿ ಮಹಿಳಾ ಮತದಾರರಿಗೆ ಮತದಾನದ ಶಕ್ತಿಯ ಬಗ್ಗೆ ಅರಿವು ಮೂಡಿಸಲು ಪ್ರಯತ್ನಿಸಿದರು. ಅತ್ಯಧಿಕ ಸಂಖ್ಯೆಯಲ್ಲಿ ಮತ ಚಲಾಯಿಸಲು ಕರೆ ನೀಡಿದ್ದಾರೆ.

ವಾರಣಾಸಿಯ ಪೊಲೀಸ್ ಲೈನ್ ಕ್ರಾಸ್‌ರೋಡ್‌ನಿಂದ ಪ್ರಾರಂಭವಾದ ಈ ಸ್ಕೂಟಿ ರ್‍ಯಾಲಿ ಸುಮಾರು 10 ಕಿಲೋಮೀಟರ್‌ಗಳನ್ನು ಕ್ರಮಿಸಿ ಕೊನೆಗೊಂಡಿತ್ತು. ‌ಪೋಸ್ಟರ್‌ಗಳು, ಭಿತ್ತಿಪತ್ರಗಳನ್ನು ಹಿಡಿದು ಘೊಷಣೆ ಕೂಗುತ್ತಾ ಜಾಗೃತಿ ಮೂಡಿಸಲು ಪ್ರಯತ್ನಿಸಿದ್ದಾರೆ.

ಇದನ್ನೂ ಓದಿ: ಬಹುಜನ ಭಾರತ; ಬಿಜೆಪಿಗೆ ಉಳಿಗಾಲವಿಲ್ಲವೇ ಯುಪಿಯಲ್ಲಿ?

 

ಶಿಕ್ಷಕರೊಬ್ಬರು ಎಎನ್‌ಐ ಜೊತೆ ಮಾತನಾಡುತ್ತಾ, “ಮಹಿಳಾ ಮತದಾರರು ಸಾಮಾನ್ಯವಾಗಿ ಕಡಿಮೆ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ. ಆದ್ದರಿಂದ ಮಹಿಳೆಯರನ್ನು ಹೊರಗೆ ಬಂದು ಮತದಾನ ಮಾಡಲು ಪ್ರೇರೇಪಿಸಲು ಈ ರ್‍ಯಾಲಿ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಮತ್ತೊಬ್ಬ ಶಿಕ್ಷಕಿ,”ನಾವೆಲ್ಲರೂ ಸಮಾನರು. ಮಹಿಳೆಯರಿಗೆ ಮತದಾನದಲ್ಲಿ ಭಾಗವಹಿಸುವ ಹಕ್ಕಿದೆ ಎಂಬುದನ್ನು ನಾವು ಈ ರ‍್ಯಾಲಿಯ ಮೂಲಕ ತಿಳಿಸಲು ಬಯಸುತ್ತೇವೆ. ಅವರು ಸಾಧ್ಯವಾದಷ್ಟು ಸಂಖ್ಯೆಯಲ್ಲಿ ಮತ ಚಲಾಯಿಸಬೇಕು” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಕ್ತಾಯಗೊಂಡಿವೆ. ಉಳಿದ ಮೂರು ಹಂತಗಳು ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಯುಪಿ ಸಿಎಂ ರ್‍ಯಾಲಿ ನಡೆಯುವ ಮೈದಾನಕ್ಕೆ ಬಿಡಾಡಿ ದನಗಳನ್ನು ಬಿಟ್ಟ ರೈತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...