Homeಕರ್ನಾಟಕಹರ್ಷನ ಕುಟುಂಬಕ್ಕೆ ಎಂಎಲ್‌ಎ ಟಿಕೆಟ್ ನೀಡಿ: ಜನರ ಆಗ್ರಹ

ಹರ್ಷನ ಕುಟುಂಬಕ್ಕೆ ಎಂಎಲ್‌ಎ ಟಿಕೆಟ್ ನೀಡಿ: ಜನರ ಆಗ್ರಹ

- Advertisement -
- Advertisement -

ರಾಜಕಾರಣಿಗಳು ಬಡವರ ಮಕ್ಕಳನ್ನು ತಮ್ಮ ರಾಜಕಾರಣಕ್ಕೆ ಬಳಸಿಕೊಂಡು, ತಮ್ಮ ಮಕ್ಕಳನ್ನು ಮಾತ್ರ ಸುಖವಾಗಿ ಬೆಳೆಸುತ್ತಾರೆಂಬ ಕೂಗು ಎಲ್ಲೆಡೆ ಕೇಳಿಬರುತ್ತಿದೆ.

ಹಿಂದುತ್ವದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಯುವಕರ್‍ಯಾರಾದರೂ ಮೃತರಾದರೆ ಅವರ ಹೆಸರಲ್ಲಿ ರಾಜಕಾರಣ ಮಾಡುತ್ತಿರುವುದು ನಡೆಯುತ್ತಿದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ‘ಮೃತ ವ್ಯಕ್ತಿಯ ಕುಟುಂಬದ ಸದಸ್ಯರಿಗೆಯೇ ಎಂಎಲ್‌ಎ ಟಿಕೆಟ್ ನೀಡಬೇಕು’ ಎಂಬ ಆಗ್ರಹ ಕೇಳಿಬಂದಿದೆ.

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲೆಡೆ ಹಿಂದುತ್ವ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹರ್ಷನ ಸಾವಿಗೆ ನ್ಯಾಯ ದೊರಕಿಸಿಕೊಡಲು ಒತ್ತಾಯಿಸಿವೆ. ಇತ್ತ ಮತ್ತೊಂದೆಡೆ ‘ಹರ್ಷನ ತಾಯಿ ಅಥವಾ ಸಹೋದರಿಗೆ ಟಿಕೆಟ್‌ ನೀಡುವ ಮೂಲಕ ಹರ್ಷನ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂಬ ಆಗ್ರಹ ಕೇಳಿಬರುತ್ತಿದೆ.

ಹರ್ಷ ಕುಟುಂಬಕ್ಕೆ ಕೇವಲ ಆರ್ಥಿಕ ನೆರವು ನೀಡುವುದಷ್ಟೇ ಅಲ್ಲ, ಬಡವರ ಮಕ್ಕಳು ರಾಜಕಾರಣದ ಕಾರಣಕ್ಕೆ ಸಾವಿಗೀಡಾಗುತ್ತಿದ್ದಾರೆ. ಅಂತಹ ಕುಟುಂಬ ಸದಸ್ಯರಿಗೆ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಲಾಗುತ್ತಿದೆ.

“ನಮ್ಮ ಹರ್ಷ ದೇಶಕ್ಕಾಗಿ ಪ್ರಾಣವನ್ನೇ ಕೊಟ್ಟಿದ್ದಾನೆ. ಬಿಜೆಪಿಗೆ ಹರ್ಷನ ಅಕ್ಕ ಹಾಗೂ ತಾಯಿಗೆ ಶಿವಮೊಗ್ಗದಲ್ಲಿ ಎಂಎಲ್‌ಎ ಟಿಕೆಟ್‌ ಕೊಡುವುದು ಕಷ್ಟವೇ? ಬಡವರ ಮನೆಗೂ ಎಂಎಲ್‌ಎ ಟಿಕೆಟ್ ಕೊಡಿ ನಾವೇ ಗೆಲ್ಲಿಸುತ್ತೇವೆ” ಎಂದು ಜನರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ.

“ಬಿಜೆಪಿ ತನ್ನ ನಿಜವಾದ ದೇಶಭಕ್ತಿ ತೋರಿಸಲು ಉತ್ತಮವಾದ ಅವಕಾಶ ಇದು” ಎಂದು ಪ್ರಗತ್ ಕೆ.ಆರ್‌. ಪೋಸ್ಟ್ ಮಾಡಿದ್ದಾರೆ.

ಹರ್ಷ ಅವರ ತಾಯಿ ಆಸ್ಪತ್ರೆಗೆ ತೆರಳಿ ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸುತ್ತಿರುವ ವಿಡಿಯೊವನ್ನು ಹಂಚಿಕೊಂಡಿರುವ ಪ್ರಗತ್‌, “ನಾವು ಸುಮ್ ಸುಮ್ಮನೇ ಹೇಳ್ತಿಲ್ಲ. ಮನೆಯಲ್ಲಿ ಮಗನ ಸಾವಾದರೂ ಈ ಮಹಾತಾಯಿ ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ತೆರಳಿದ್ದಾರೆ. ಇಂತವರಿಂದ ನಿಜವಾದ ಜನಸೇವೆಯನ್ನು ನಾವು ನಿರೀಕ್ಷಿಸಬಹುದು” ಎಂದು ಬರೆದಿದ್ದಾರೆ.


ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ, ಮೃತನ ಪೋನ್ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...