Homeಮುಖಪುಟ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್...

‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕ ಭೂಪೇಶ್ ಚೌಬೆ ಅವರು, ರಾಜ್ಯದ ಸೋನಭದ್ರಾದಲ್ಲಿ ಇತ್ತಿಚೆಗೆ ನಡೆದ ಸಾರ್ವಜನಿಕ ಸಭೆಯ ವೇದಿಕೆಯೆ ಮೇಲೆ ತಾನು ಕುಳಿತ ಕುರ್ಚಿಯಲ್ಲಿ ನಿಂತು ಕಿವಿ ಹಿಡಿದು ಬಸ್ಕಿ ಹೊಡೆದು, “ಕಳೆದ ಐದು ವರ್ಷಗಳಲ್ಲಿ ತಿಳಿದೋ ಅಥವಾ ತಿಳಿಯದೆಯೋ ಮಾಡಿದ ತಪ್ಪುಗಳನ್ನು ಕ್ಷಮಿಸಿ” ಎಂದು ಜನರನ್ನು ಕೇಳಿಕೊಂಡಿದ್ದಾರೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೇ 7 ರಂದು ಏಳನೇ ಹಂತದಲ್ಲಿ ಮತದಾನ ನಡೆಯಲಿರುವ ಸೋನ್‌ಭದ್ರದ ರಾಬರ್ಟ್ಸ್‌ಗಂಜ್ ವಿಧಾನಸಭಾ ಕ್ಷೇತ್ರದಿಂದ ಭೂಪೇಶ್ ಚೌಬೆ ಕಣದಲ್ಲಿದ್ದಾರೆ. ವೇದಿಕೆಯಲ್ಲಿದ್ದ ಇತರ ಜನರು ಅವರು ಬಸ್ಕಿ ಹೊಡೆಯದಂತೆ ತಡೆಯುತ್ತಿದ್ದರೂ ಅವರು ಅದನ್ನು ಮುಂದುವರೆಸಿದ್ದರು.

2017ರ ಚುನಾವಣೆಯಲ್ಲಿ ನೀವೆಲ್ಲರೂ ಆಶೀರ್ವಾದ ನೀಡಿದ್ದೀರಿ. ಅದೇ ರೀತಿ ಈ ಬಾರಿಯೂ ರಾಬರ್ಟ್ಸ್‌ಗಂಜ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಲು ನಿಮ್ಮ ಆಶೀರ್ವಾದ ನೀಡಿ ಎಂದು ಚೌಬೆ ಜನರನ್ನು ಕೋರಿದ್ದಾರೆ.

“ಬಿಜೆಪಿಯ ಕೆಲವು ತಳಮಟ್ಟದ ಕಾರ್ಯಕರ್ತರು ಇತ್ತೀಚೆಗೆ ಪ್ರಚಾರದ ಸಮಯದಲ್ಲಿ ಚೌಬೆ ವಿರುದ್ಧ ಅಸಮಾಧಾನಗೊಂಡಿದ್ದರು. ಚೌಬೆ ಅವರು ನಮ್ಮ ಕೈಗೆ ಸಿಗುತ್ತಿಲ್ಲ, 2017 ರ ಚುನಾವಣೆ ಗೆದ್ದ ನಂತರ ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ.

“ಅವರನ್ನು ಸಮಾಧಾನಪಡಿಸಲು ಚೌಬೆ ವೇದಿಕೆ ಮೇಲೆ ಬಸ್ಕಿ ಹೊಡೆದಿದ್ದಾರೆ” ಎಂದು ಸಭೆಯಲ್ಲಿದ್ದ ಸ್ಥಳೀಯರೊಬ್ಬರು ಹೇಳಿದ್ದಾರೆ. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸ್ಥಳೀಯ ಬಿಜೆಪಿ ಮುಖಂಡ ಭಾನು ಪ್ರತಾಪ್ ಭಾಗವಹಿಸಿದ್ದರು.

ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಿ ಮತ ಯಾಚಿಸುವಾಗ ಮಾತನಾಡಿದ ಭಾನು ಪ್ರತಾಪ್‌, “ಯುಪಿ ವಿಧಾನಸಭಾ ಚುನಾವಣೆಯ ಮೂರು ಹಂತಗಳಲ್ಲಿ, ಎಸ್‌ಪಿ ಮತ್ತು ಬಿಎಸ್‌ಪಿ ಅರ್ಧದಷ್ಟು ನಾಶವಾಗಿದೆ. ಏಳನೇ ಹಂತದಲ್ಲಿ ಇವು ಸಂಪೂರ್ಣವಾಗಿ ನಾಶವಾಗುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 2004ರ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ 18 ಪೊಲೀಸರ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...