Homeಕರ್ನಾಟಕನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

- Advertisement -
- Advertisement -

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್‌ ಅವರಿಗೆ ಜಾಮೀನು ದೊರೆತಿದೆ.

ಚೇತನ್‌ ಅಹಿಂಸಾ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ಏನಿದು ಪ್ರಕರಣ?

ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಸಾಮಾಜಿಕ ಕಾರ್ಯಕರ್ತ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು. “ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು. ಜೊತೆಗೆ ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಹಳೆಯ ಟ್ವೀಟ್‌ನಲ್ಲಿ ನಟ ಚೇತನ್‌, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ- “ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿಯಲ್ಲ ಅದು” ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಾಂಗದ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

“ಈ ರೀತಿ ಗಲಭೆ ಉಂಟಾಗಿ ನಮ್ಮ ರಾಜ್ಯದ ಹಾಗೂ ದೇಶದ ಸಮಗ್ರತೆಯು ನಾಶವಾಗಲೆಂದು ಪ್ರಚೋದಿಸಿರುತ್ತಾರೆ. ಹೀಗೆ ಭಾರತದ ಅನೇಕ ವರ್ಗಗಳ ಮತ್ತು ಕೋಮುಗಳ ನಡುವೆ ವೈರತ್ವ, ದ್ವೇಷ, ವೈಮಸ್ಸು ಉಂಟು ಮಾಡಿರುತ್ತಾರೆ. ಚೇತನ್‌ ಅವರು ಈ ರೀತಿಯ ಟ್ವೀಟ್‌ಗಳನ್ನು ಮಾಡಿ ಸಮಾಜದಲ್ಲಿ ಶಾಂತಿಭಂಗವನ್ನು ಉಂಟು ಮಾಡಿ ಜನರನ್ನು ಉದ್ರೇಕಿಸಲು ಉದ್ದೇಶಿಸಿದ್ದಾರೆ” ಎಂದು ದೂರಲಾಗಿದೆ.

“ನ್ಯಾಯಮೂರ್ತಿಯವರಿಗೆ ಅವಮಾನ ಮಾಡುವ, ಸದರಿ ನ್ಯಾಯಮೂರ್ತಿಯವರು ನ್ಯಾಯಾಲಯದಲ್ಲಿ ಹಿಜಾಬ್ ಪ್ರಕರಣದ ವಿಚಾರಣೆಯನ್ನು ಕೈಬಿಡುವಂತೆ ಮಾಡುವ ಅಥವಾ ಅವರುಗಳು ನಿಷ್ಪಕ್ಷಪಾತ ವಿಚಾರಣೆ ಮತ್ತು ನ್ಯಾಯನಿರ್ಣಯ ಮಾಡುವುದರಿಂದ ಹಿಂದೆ ಸರಿಯುವಂತೆ ಮಾಡುವ ಉದ್ದೇಶವನ್ನು ಟ್ವೀಟ್ ಹೊಂದಿದೆ. ಆದ್ದರಿಂದ ಚೇತನ್‌ ಅವರ ಮೇಲೆ ಕಾನೂನು ರೀತಿ ಕ್ರಮ ಜರುಗಿಸಲು ಕೋರುತ್ತೇನೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚೇತನ್ ಅವರ ಮೇಲೆ ಐಪಿಸಿ ಕಲಂ 154ರ ಅಡಿಯಲ್ಲಿ ಕ್ರಮ ಜರುಗಿಸಲಾಗಿದ್ದು, ಸೆಕ್ಷನ್‌ 504, 505 (2) ಪ್ರಕರಣ ದಾಖಲಿಸಲಾಗಿತ್ತು.


ಇದನ್ನೂ ಓದಿರಿ: ಧರ್ಮಸ್ಥಳ: ಬಜರಂಗದಳ ಮುಖಂಡನಿಂದ ದಲಿತ ಕಾರ್ಮಿಕನ ಹತ್ಯೆ – ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....