Homeಮುಖಪುಟದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

- Advertisement -
- Advertisement -

ದೆಹಲಿ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಗೆ ಹಿಜಾಬ್ ತೆಗೆಯುವಂತೆ ಶಿಕ್ಷಕರೊಬ್ಬರು ಹೇಳಿಕೊಂಡಿದ್ದಾರೆ ಎಂಬ ಆರೋಪದ ನಡುವೆ, ರಾಜ್ಯದ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಈ ವಿವಾದದ ಬಗ್ಗೆ ಮಾತನಾಡಿದ್ದು, “ದೆಹಲಿಯಲ್ಲಿ ಇಂತಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ” ಎಂದು ಹೇಳಿದ್ದಾರೆ.

ಹಿಜಾಬ್ ವಿಚಾರವನ್ನು ಒಂದು ವಿಭಾಗದ ಜನರು ರಾಜಕೀಯಗೊಳಿಸುತ್ತಿದ್ದಾರೆ ಮತ್ತು ದೆಹಲಿ ಶಿಕ್ಷಣ ಇಲಾಖೆಯು ಅಂತಹ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಸೋಡಿಯಾ, “ಎಎಪಿ ಸರ್ಕಾರವು ಎಲ್ಲಾ ಸಂಪ್ರದಾಯಗಳನ್ನು ಗೌರವಿಸುತ್ತದೆ. ಎಲ್ಲಾ ಧರ್ಮಗಳು ಮತ್ತು ಜಾತಿಗಳ ವಿದ್ಯಾರ್ಥಿಗಳನ್ನು ತನ್ನ ಶಾಲೆಗಳಲ್ಲಿ ಗೌರವದಿಂದ ನಡೆಸಿಕೊಳ್ಳಲಾಗುತ್ತದೆ. ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳ ಹಕ್ಕುಗಳನ್ನು ಉಲ್ಲಂಘಿಸಿದರೆ ಆಯೋಗ ಸುಮ್ಮನೇ ಕೂರಲ್ಲ: ಮಾಧ್ಯಮಗಳಿಗೆ ಎಚ್ಚರಿಕೆ

“ನಮ್ಮ ಶಾಲೆಗಳಲ್ಲಿ ಎಲ್ಲಾ ಧರ್ಮಗಳು ಮತ್ತು ಜಾತಿಗಳ ವಿದ್ಯಾರ್ಥಿಗಳನ್ನು ಘನತೆಯಿಂದ ನಡೆಸಿಕೊಳ್ಳಲಾಗುತ್ತದೆ. ನಮ್ಮ ಕಡೆಯಿಂದ ಹಿಜಾಬ್ ಧರಿಸಲು ಯಾವುದೇ ನಿರ್ಬಂಧವಿಲ್ಲ” ಎಂದು ರಾಜ್ಯದ ಶಿಕ್ಷಣ ಖಾತೆಯನ್ನು ಹೊಂದಿರುವ ಸಿಸೋಡಿಯಾ ತಿಳಿಸಿದ್ದಾರೆ.

ಮುಸ್ತಫಾಬಾದ್‌ನಲ್ಲಿರುವ ದೆಹಲಿಯ ಸರ್ಕಾರಿ ಶಾಲೆಯ ಅಪ್ರಾಪ್ತ ಬಾಲಕಿಯೊಬ್ಬರು, ಶಾಲೆಯಲ್ಲಿ ತನ್ನ ಸ್ಕಾರ್ಫ್ ಅನ್ನು ತೆಗೆದುಹಾಕಲು ಕೇಳಿಕೊಳ್ಳಲಾಗಿದೆ ಎಂದು ಆರೋಪಿಸಿದ ನಂತರ ಸಿಸೋಡಿಯಾ ಅವರ ಈ ಹೇಳಿಕೆಗಳು ಬಂದಿವೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಬಾಲಕಿ ಈ ಆರೋಪ ಮಾಡಿದ್ದರು ಎಂದು ವರದಿಯಾಗಿದೆ.

ಹಿಜಾಬ್ ಧರಿಸಿರುವ ಬಾಲಕಿಯೊಬ್ಬರು, “ಶಿಕ್ಷಕರು ಈ ಸ್ಕಾರ್ಫ್ ಧರಿಸಿ ತರಗತಿಗೆ ಬರಬೇಡಿ ಎಂದು ಹೇಳಿದರು. ನಿಮ್ಮ ತಾಯಿಯಂತೆ ಆಗಬೇಡಿ ಮತ್ತು ಸ್ಕಾರ್ಫ್ ಧರಿಸಿ ಶಾಲೆಗೆ ಬರಬೇಡಿ. ಶಾಲೆಯಲ್ಲಿ ಎರಡು-ಮೂರು ಹುಡುಗಿಯರಿಗೂ ಸ್ಕಾರ್ಫ್ ಅನ್ನು ತೆಗೆದುಹಾಕಲು ಹೇಳಲಾಗಿದೆ” ಎಂದು ಆರೋಪಿಸಿದ್ದಾರೆ.

ವಿವಾದದ ಬಗ್ಗೆ ಶಾಲಾ ಅಧಿಕಾರಿಗಳು ಬಾಲಕಿಯ ಪೋಷಕರೊಂದಿಗೆ ಚರ್ಚಿಸಿ, ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಮುಕ್ತಾಯ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...