Homeಕರ್ನಾಟಕನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

ನಟ ಚೇತನ್‌ಗೆ ಜಾಮೀನು ಮಂಜೂರು, ಆದರೂ ಸದ್ಯಕ್ಕೆ ಬಿಡುಗಡೆಯಿಲ್ಲ!

- Advertisement -
- Advertisement -

ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರ ಕುರಿತು ಮಾಡಿದ ಟ್ವೀಟ್‌ಗೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್‌ ಅವರಿಗೆ ಜಾಮೀನು ದೊರೆತಿದೆ. ಆದರೂ ಕೆಲವು ತಾಂತ್ರಿಕೆ ಕಾರಣಗಳಿಗೆ ಅವರ ಬಿಡುಗಡೆಯಾಗಿಲ್ಲ.

ಹಿಜಾಬ್ ವಿಚಾರದ ಕುರಿತಂತೆ ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ, “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಗೊಂದಲದ ಹೇಳಿಕೆಯನ್ನು ನೀಡಿದ್ದರು. ಈಗ ಅದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ ಹಿಜಾಬ್‌ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿ, ಹಳೆಯ ಟ್ವೀಟ್‌ ಅನ್ನು ಲಗತ್ತಿಸಿದ್ದರು.

ಇದನ್ನೂ ಓದಿ: ನಟ, ಸಾಮಾಜಿಕ ಹೋರಾಟಗಾರ ಚೇತನ್‌ಗೆ ಜಾಮೀನು

ಚೇತನ್‌ ಅವರ ಈ ಟ್ವೀಟಿನ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ.ಎಸ್.ರವಿ ಅವರ ದೂರಿನ ಅನ್ವಯ ಚೇತನ್‌ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿತ್ತು.

“ನನ್ನ ಸರಹದ್ದಿನ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಆಗಿದ್ದಾಗೇ ಸಾಮಾಜಿಕ ಜಾಲತಾಣಗಳ ಪರಿಶೀಲನೆ ನಡೆಸುತ್ತಿದ್ದ ಸಮಯದಲ್ಲಿ ಹೀಗೆ ಐದಾರು ದಿನಗಳ ಮುಂಚೆ ಟಿಟ್ವರ್‌ನಲ್ಲಿ ನಮ್ಮ ಠಾಣಾ ಸರಹದ್ದಿನಲ್ಲಿ ವಾಸವಿರುವ ಚೇತನ್‌ಕುಮಾರ್‌ ಅಹಿಂಸಾ ರವರು ಮಾಡಿರುವ ಟ್ವೀಟ್‌ ಅವಲೋಕಿಸಲಾಗಿದೆ” ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಚೇತನ್‌ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 23ರ ಬುಧವಾರದಂದು ನಡೆಸಿ, ಆದೇಶವನ್ನು ಫೆಬ್ರವರಿ 25ರ ಶುಕ್ರವಾರದಂದು ಕಾಯ್ದಿರಿಸಲಾಗಿತ್ತು. ಈ ಬಗ್ಗೆ ಚೇತನ್ ಪತ್ನಿ ಮೇಘ ಅವರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದು, “ಜಾಮೀನು ಆದೇಶ ಶುಕ್ರವಾರ 05:40 ಕ್ಕೆ ಸ್ವೀಕರಿಸಿದ್ದೇವೆ. ಆದರೆ ತಾಂತ್ರಿಕ ಕಾರಣಕ್ಕೆ ಬಿಡುಗಡೆ ಆದೇಶ ಇನ್ನೂ ಜಾರಿಯಾಗಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ನಟ ಚೇತನ್ ಟ್ವೀಟ್‌ನಲ್ಲಿ ತಪ್ಪೇನಿದೆ? ದನಿಯೆತ್ತಿದ ನಟಿ ರಮ್ಯಾ ದಿವ್ಯಸ್ಪಂದನ

ಶುಕ್ರವಾರ ಸಂಜೆ ಜಾಮೀನು ಆದೇಶ ಸಿಕ್ಕಿರುವುದರಿಂದ, ಶನಿವಾರ ಮತ್ತು ರವಿವಾರ ನ್ಯಾಯಾಲಯಕ್ಕೆ ರಜೆ ಇರುತ್ತದೆ. ಹೀಗಾಗಿ ಮುಂದಿನ ಪ್ರಕ್ರಿಯೆಯು ಸೋಮವಾರಕ್ಕೆ ಮುಂದುವರೆಸಲಾಗುತ್ತದೆ. ಆದ್ದರಿಂದ ಚೇತನ್ ಸೋಮವಾರದವರೆಗೆ ನ್ಯಾಯಾಂಗ ಬಂಧನದಲ್ಲಿ ಇರುತ್ತಾರೆ ಎಂದು ಮೇಘ ಹೇಳಿದ್ದಾರೆ.

“ಒಂದು ದಿನದ ಸ್ವಾತಂತ್ರ್ಯ ಕಸಿದುಕೊಂಡರು ಅದು ಹಲವು ದಿನಗಳಿಗೆ ಸಮ” ಎಂಬ ಸುಪ್ರೀಂ ಕೋರ್ಟ್ ಹೇಳಿಕೆಯನ್ನು ಉಲ್ಲೇಖಿಸಿರುವ ಮೇಘ ಅವರು, “ಚೇತನ್ ಬಿಡುಗಡೆ ಇನ್ನು ವಿಳಂಬವಾಗುವುದಿಲ್ಲ ಎಂಬ ಭರವಸೆ ನನಗಿದೆ, ನಿರಂತರವಾಗಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

ನಟ ಚೇತನ್ ಅವರು ತನ್ನ ಹಳೆಯ ಟ್ವೀಟ್‌ನಲ್ಲಿ, “ಈ ವಾರ ಕರ್ನಾಟಕದ ಹೈಕೋರ್ಟ್ ನ್ಯಾಯಮೂರ್ತಿ ದೀಕ್ಷಿತ್ ಅವರು ಅತ್ಯಾಚಾರದ ಆರೋಪಿ ರಾಕೇಶ್‌ ಬಿ. ಅವರಿಗೆ ಬಂಧನ ಪೂರ್ವ ಜಾಮೀನು ಮಂಜೂರು ಮಾಡಿ ‘ಅತ್ಯಾಚಾರದ ನಂತರ ಮಲಗುವುದು ಒಬ್ಬ ಭಾರತೀಯ ಮಹಿಳೆಗೆ ನಾಚಿಕೆಗೇಡಿನ ಸಂಗತಿ; ಅಂತಹ ಸಮಯದಲ್ಲಿ ಮಹಿಳೆಯರು ಪ್ರತಿಕ್ರಿಸುವ ರೀತಿ ಅದಲ್ಲ’ ಎಂದಿದ್ದಾರೆ. 21ನೇ ಶತಮಾನದಲ್ಲೂ ಕೂಡ ನ್ಯಾಯಮೂರ್ತಿ ದೀಕ್ಷಿತ್‌ ಅವರ ಈ ಸ್ತ್ರೀ ದ್ವೇಷ, ನಾಚಿಗೆಗೇಡಿನ ಸಂಗತಿ” ಎಂದು ಹೇಳಿದ್ದರು. ಈ ಟ್ವೀಟ್‌ನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ:  ನಟ ಚೇತನ್‌‌ ಎತ್ತಿರುವ ಮೌಲಿಕ ಪ್ರಶ್ನೆಗಳು ಮತ್ತು ಕನ್ನಡ ಚಿತ್ರರಂಗದ ಮೌನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...