ಧರ್ಮಸ್ಥಳದಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಹತ್ಯೆಗೈದ ಬಜರಂಗದಳ ಮುಖಂಡನನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯನವರು ಆರೋಪಿಸಿದ್ದಾರೆ. ಈ ಕೂಡಲೇ ದಲಿತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, “ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗದಳದ ನಾಯಕನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ ಮಣಿಯದೆ ಕೊಲೆ ಆರೋಪಿಯನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.
ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ @BJP4Karnataka ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ.@CMofKarnataka
ಅವರು,
ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.
2/2— Siddaramaiah (@siddaramaiah) February 25, 2022
ಹಿಂದುಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿಯು ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಫೆಬ್ರವರಿ 23 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಕನ್ಯಾಡಿಯ ಕೃಷ್ಣ ಎಂಬ ಬಜರಂಗದಳದ ಮುಖಂಡ ಅದೇ ಗ್ರಾಮದ ದಿನೇಶ್ ಎಂಬ ದಲಿತ ಯುವಕನ ಮೇಲೆ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದನು. ಆ ದೃಶ್ಯಗಳು ಸಿಸಿಕ್ಯಾಮರದಲ್ಲಿ ದಾಖಲಾಗಿದ್ದು, 45 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆನಂತರ ಫೆಬ್ರವರಿ 24 ರಂದು ಆಸ್ಪತ್ರೆಗೆ ಸೇರಿಸಲಾಯಿತಾದರೂ ಫೆಬ್ರವರಿ 25 ರಂದು ದಿನೇಶ್ ಸಾವನಪ್ಪಿದ್ದ.
ಈ ಕುರಿತು ಮೃತನ ತಾಯಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೂ ಆರೋಪಿಯನ್ನು ಬಂಧಿಸಲಾಗಿಲ್ಲ.
ಇದನ್ನೂ ಓದಿ; ಧರ್ಮಸ್ಥಳದಲ್ಲಿ ಬಜರಂಗದಳ ಮುಖಂಡನಿಂದ ದಲಿತ ಯುವಕನ ಹತ್ಯೆ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪಾದಯಾತ್ರೆ


