Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

- Advertisement -
- Advertisement -

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ ಜೊತೆಗೆ ಮಾತುಕತೆ ನಡೆಸಲು ಮನವಿ ಮಾಡಿದ್ದರು” ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ.

“ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಮೊದಲು ಮಾತುಕತೆ ನೆಡೆಸಲು ಮನವಿ ಮಾಡಿದ್ದು ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೊತೆಗೆ ಹೊರತು ಬೇರೆ ದೇಶದ ಜೊತೆಗಲ್ಲ….ಮೋದಿ ಗತ್ತು ವಿಶ್ವಕ್ಕೆ ಗೊತ್ತು” ಎಂದು ವಿಡಿಯೊ ಜೊತೆಗಿನ ಸಂದೇಶ ಪ್ರತಿಪಾದಿಸುತ್ತದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಮತ್ತು ಸಂದೇಶವನ್ನು ಹಲವಾರು ಬಳಕೆದಾರರು, ಅದರಲ್ಲೂ ಮುಖ್ಯವಾಗಿ ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹಲವಾರು ಸಂಬಂಧಪಡದ, ಹಳೆಯ ಚಿತ್ರಗಳು ಹಾಗೂ ವಿಡಿಯೊಗಳು ಹರಿದಾಡುತ್ತಿದೆ. ವಿಡಿಯೊ ಮತ್ತು ವೈರಲ್ ಸಂದೇಶದ ಬಗ್ಗೆ ನಾನುಗೌರಿ.ಕಾಂ ಬೇರೆ ಬೇರೆಯಾಗಿ ಪರಿಶೀಲನೆ ನಡೆಸಿದೆ.

  • ವೈರಲ್ ವಿಡಿಯೊ 2021 ರ ಡಿಸೆಂಬರ್‌ 6ರದ್ದಾಗಿದೆ

ವೈರಲ್ ಸಂದೇಶ ಜೊತೆಗೆ ಹರಿದಾಡುತ್ತಿರುವ ವಿಡಿಯೊವನ್ನು ಕೆಲವು ಕೀವರ್ಡ್‌ಗಳ ಮೂಲಕ ಹುಡುಕಾಡಿದಾಗ ಈ ವಿಡಿಯೊ 2021 ರ ಡಿಸೆಂಬರ್‌ 6 ರಂದು ಮಾಡಿರುವ ವಿಡಿಯೊ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು 2021 ರ ಡಿಸೆಂಬರ್‌ 6ರಂದು ನಡೆಸಿದ್ದರು. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ನಿರೀಕ್ಷೆಗಳನ್ನು ಚರ್ಚಿಸಿದ್ದರು. ಈ ಭೇಟಿಯ ಸಂದಂರ್ಭದಲ್ಲಿ ಮಾಡಲಾಗಿರುವ ವೀಡಿಯೊ ಇದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

  • ವೈರಲ್‌ ಸಂದೇಶ ಸುಳ್ಳಾಗಿದ್ದು, ಇದಕ್ಕೆ ಯಾವುದೇ ಆಧಾರವಿಲ್ಲ.

ವಿಡಿಯೊ ಜೊತೆಗೆ ಹರಿಡಾಡುತ್ತಿರುವ ಸಂದೇಶವು, “ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು” ಎಂದು ಪ್ರತಿಪಾದಿಸುತ್ತದೆ.

ವೈರಲ್ ಸಂದೇಶದಲ್ಲಿ ಹೇಳಿರುವಂತೆ, ಯುದ್ಧ ಪ್ರಾರಂಭವಾದ ನಂತರ ರಷ್ಯಾ ಅಧ್ಯಕ್ಷ ಪ್ರಧಾಮಿ ಮೋದಿ ಜೊತಗೆ ಮಾತುಕತೆಗೆ ವಿನಂತಿಸಿಯೆ ಇಲ್ಲ. ಈ ಬಗ್ಗೆ ಯಾವುದೇ ಸುದ್ದಿಗಳು ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಪುಟಿನ್‌ ಈ ರೀತಿಯಾಗಿ ವಿನಂತಿಸಿದ್ದರೆ ವಿಶ್ವದ ಹಲವು ಮಾಧ್ಯಮಗಳು ವರದಿ ಮಾಡಿರುತ್ತಿದ್ದವು. ಆದರೆ ನಾನುಗೌರಿ.ಕಾಂಗೆ ಈ ರೀತಿಯ ಯಾವುದೆ ಸುದ್ದಿ ಲಭ್ಯವಾಗಿಲ್ಲ.

ಆದರೆ ರಷ್ಯಾ-ಉಕ್ರೇನ್‌ ಯದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಪುಟಿನ್‌ಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಜೊತೆಗೆ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಎರಡು ಸಭೆಯಲ್ಲೂ ಭಾರತ ತಟಸ್ಥ ನೀತಿಯನ್ನು ಅನುಸರಿಸಿದೆ.

ಪುಟಿನ್‌ ಪ್ರಧಾನಿ ಮೋದಿಗೆ ಕರೆ ಮಾಡಿರುವ ಯಾವುದೆ ಸುದ್ದಿ ಲಭ್ಯವಾಗಿಲ್ಲ, ಬದಲಾಗಿ ಮೋದಿಯೆ ಪುಟಿನ್‌ಗೆ ಕರೆ ಮಾಡಿದ್ದರು.

ಒಟ್ಟಿನಲ್ಲಿ ವೈರಲ್‌ ವಿಡಿಯೊ ಮತ್ತು ಸಂದೇಶ ಹೇಳುವಂತೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅದರ ಜೊತೆಗೆ ವೈರಲ್‌ ಆಗಿರುವ ವಿಡಿಯೊ 2021 ರ ಡಿಸೆಂಬರ್‌ 6ರಂದು ನಡೆದ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯದ್ದಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಆದರೂ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದಿದೆ. ಯುದ್ದದಿಂದಾಗಿ 14 ಮಕ್ಕಳು ಸೇರಿದಂತೆ 352 ಉಕ್ರೇನಿಯನ್ ನಾಗರಿಕರು ಮೃತಪಟ್ಟಿದ್ದು, 1,684 ಮಂದಿಗೆ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧೀಕೃತವಾಗಿ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದ ನಂತರ ಸಂಬಂಧಪಡದ ಹಲವು ಹಳೆಯ ವಿಡಿಯೊ ಹಾಗೂ ಚಿತ್ರಗಳು ಹರಿದಾಡುತ್ತಿದೆ. ಇವುಗಳನ್ನು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್‌ ಮಾಡಿದೆ. ಇದನ್ನು ನೀವು ಇಲ್ಲಿ   ನೋಡಬಹುದು. ಅಲ್ಲದೆ ಇತರ ಫ್ಯಾಕ್ಟ್‌ಚೆಕ್‌ ಲೇಖನಗಳಿಗೆ ನಮ್ಮ ಏನ್‌ಸುದ್ದಿ.ಕಾಂ ವೆಬ್‌ಸೈಟ್‌ಅನ್ನು ನೀವು ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...