Homeಅಂತರಾಷ್ಟ್ರೀಯಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

ಏನು ಸಿಗುತ್ತೊ ಅದರಲ್ಲಿ ಹತ್ತಿ ಕಿವ್‌‌ ತೊರೆಯಿರಿ: ಭಾರತೀಯ ಪ್ರಜೆಗಳಿಗೆ ಸರ್ಕಾರ ಸೂಚನೆ

- Advertisement -
- Advertisement -

ರಷ್ಯಾ ಸೇನೆ ಉಕ್ರೇನ್‌ ಮೇಲೆ ತನ್ನ ದಾಳಿಯನ್ನು ಮುಂದುವರೆಸುತ್ತಿರುವ ಮಧ್ಯೆ, ಭಾರತವು ತನ್ನ ಎಲ್ಲಾ ನಾಗರಿಕರನ್ನು ‘ತುರ್ತಾಗಿ ರೈಲುಗಳು ಅಥವಾ ಲಭ್ಯವಿರುವ ಯಾವುದೇ ವಿಧಾನಗಳ ಮೂಲಕ’ ಉಕ್ರೇನ್ ರಾಜಧಾನಿ ಕೈವ್‌ನಿಂದ ತೊರೆಯುವಂತೆ ಒತ್ತಾಯಿಸಿದೆ. ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸುತ್ತಿದ್ದಂತೆ, ಇದೂವರೆಗೂ ಉಕ್ರೇನ್ನಲ್ಲಿ 352 ನಾಗರೀಕರು ಸಾವನ್ನಪ್ಪಿದ್ದು, 1,684 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಬಗ್ಗೆ ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆಗೆ ಟ್ವೀಟ್ ಮಾಡಿರುವ ಉಕ್ರೇನ್‌ನ ಕೈವ್‌ನಲ್ಲಿರುವ ಭಾರತದ ರಾಯಭಾರ ಕಚೇರಿ, “ಕೈವ್‌ನಲ್ಲಿರುವ ಭಾರತೀಯರಿಗೆ ಸಲಹೆ… ಲಭ್ಯವಿರುವ ರೈಲುಗಳ ಮೂಲಕ ಅಥವಾ ಲಭ್ಯವಿರುವ ಯಾವುದೇ ಇತರ ವಿಧಾನಗಳ ಮೂಲಕ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯ ಪ್ರಜೆಗಳಿಗೆ ಇಂದು ತುರ್ತಾಗಿ ಕೈವ್ ತೊರೆಯುವಂತೆ ಸೂಚಿಸಲಾಗಿದೆ” ಎಂದು ಹೇಳಿದೆ.

ಕೈವ್‌ನ ವಾಯುವ್ಯ ರಸ್ತೆಗಳಲ್ಲಿ ರಷ್ಯಾದ ಮಿಲಿಟರಿ ವಾಹನಗಳ ದೀರ್ಘ ಬೆಂಗಾವಲುಗಳ ಉಪಗ್ರಹ ಚಿತ್ರಗಳು ಹೊರಹೊಮ್ಮಿದ ಗಂಟೆಗಳ ನಂತರ ಈ ಸಲಹೆಯನ್ನು ಭಾರತೀಯ ರಾಯಭಾರಿ ಕಚೇರಿ ಈ ಪೋಸ್ಟ್ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಅಮೆರಿಕಾ ಮೂಲದ ಬಾಹ್ಯಾಕಾಶ ತಂತ್ರಜ್ಞಾನ ಕಂಪನಿ ಬಿಡುಗಡೆ ಮಾಡಿದ ಈ ಚಿತ್ರಗಳಲ್ಲಿ ನೂರಾರು ಟ್ಯಾಂಕ್‌ಗಳು, ಫಿರಂಗಿಗಳು, ಶಸ್ತ್ರಸಜ್ಜಿತ ಲಾಜಿಸ್ಟಿಕ್ ವಾಹನಗಳು ಕಾಣುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಭಾರತೀಯ ರಾಯಭಾರಿಯ ಈ ನಡೆಯನ್ನು ವಿರೋಧಿಸಿರುವ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ, “ಸಾವು-ಬದುಕಿನ ನಡುವೆ ಇರುವ ಸಾವಿರಾರು ಭಾರತೀಯರಿಗೆ ‘ಸಹಾಯ’ ಮಾಡುವ ಬದಲು ‘ಆತ್ಮನಿರ್ಭರ ಸಲಹೆ’ ಮಾತ್ರ ನೀಡುವುದೇ? ಕಳೆದ 5 ದಿನಗಳಿಂದ ಉಕ್ರೇನ್‌ನಲ್ಲಿ ಮೋದಿ ಸರ್ಕಾರ ಸಾವಿರಾರು ಮಕ್ಕಳನ್ನು ಇಲ್ಲಿಂದ ಅಲ್ಲಿಗೆ ಓಡಿಸುತ್ತಿದೆಯೇ? ಇಂತಹ ವಿನಾಶದಿಂದ ಹೊರಬರುವುದು ಹೇಗೆ, ಅಷ್ಟು ದೂರವನ್ನು ಹೇಗೆ ಕ್ರಮಿಸುವುದು ಮತ್ತು ಎಲ್ಲಿಗೆ ಹೋಗಬೇಕು? ಮಕ್ಕಳ ಬದುಕಿನೊಂದಿಗೆ ಎಷ್ಟು ದಿನ ಆಟವಾಡುತ್ತಿದ್ದೀರಿ?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಬಿಕ್ಕಟ್ಟು: 352 ಉಕ್ರೇನಿಯನ್ ನಾಗರಿಕರು ಸಾವು, 1,684 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಸುಮಾರು 16,000 ಭಾರತೀಯ ವಿದ್ಯಾರ್ಥಿಗಳು ಇನ್ನೂ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕಳೆದ ಗುರುವಾರ ರಷ್ಯಾದ ದಾಳಿ ಪ್ರಾರಂಭವಾದಾಗಿನಿಂದ ಅವರು ಅಡಗಿರುವ ಭೂಗತ ಬಂಕರ್‌ಗಳು, ಮೆಟ್ರೋ ನಿಲ್ದಾಣಗಳು ಮತ್ತು ಬಾಂಬ್ ಶೆಲ್ಟರ್‌ಗಳ ಫೋಟೊ ಮತ್ತು ವಿಡಿಯೊಗಳನ್ನು ಅನೇಕ ವಿದ್ಯಾರ್ಥಿಗಳು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಇಲ್ಲಿಯವರೆಗೆ ಸುಮಾರು 8,000 ಭಾರತೀಯ ಪ್ರಜೆಗಳು ಉಕ್ರೇನ್‌ನಿಂದ ತೆರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.

ಸೋಮವಾರ, ರಾಯಭಾರ ಕಚೇರಿಯು ಕೈವ್‌ನಲ್ಲಿರುವ ರೈಲ್ವೆ ನಿಲ್ದಾಣಕ್ಕೆ ಹೋಗಲು ವಿದ್ಯಾರ್ಥಿಗಳನ್ನು ಕೇಳಿತ್ತು. ಅಲ್ಲಿ ಜನರನ್ನು ಪಶ್ಚಿಮ ಪ್ರದೇಶಕ್ಕೆ ಕರೆದೊಯ್ಯಲು ಉಕ್ರೇನ್ ವಿಶೇಷ ಸ್ಥಳಾಂತರಿಸುವ ರೈಲುಗಳನ್ನು ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಪಾಸ್‌ಪೋರ್ಟ್, ಸಾಕಷ್ಟು ನಗದು ಮತ್ತು ಬೆಚ್ಚಗಿನ ಬಟ್ಟೆಗಳನ್ನು ತೆಗೆದುಕೊಂಡು ಹೋಗುವಂತೆ ಕೇಳಲಾಗಿತ್ತು.

“ಎಲ್ಲಾ ಭಾರತೀಯ ಪ್ರಜೆಗಳು ಹಾಗೂ ವಿದ್ಯಾರ್ಥಿಗಳು ಶಾಂತಿಯುತವಾಗಿ ಮತ್ತು ಒಗ್ಗಟ್ಟಿನಿಂದ ಇರುವಂತೆ ನಾವು ಪ್ರಾಮಾಣಿಕವಾಗಿ ವಿನಂತಿಸುತ್ತೇವೆ. ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಇರಬಹುದಾದ್ದರಿಂದ ಎಲ್ಲಾ ಭಾರತೀಯ ವಿದ್ಯಾರ್ಥಿಗಳು ತಾಳ್ಮೆ ಮತ್ತು ಸಂಯಮದಿಂದಿರಬೇಕು. ಆಕ್ರಮಣಕಾರಿ ನಡವಳಿಕೆಯನ್ನು ಪ್ರದರ್ಶಿಸಬಾರದು” ಎಂದು ಸಲಹೆ ನೀಡಿತ್ತು.

ಇದನ್ನೂ ಓದಿ: ’ಬಿಡಾಡಿ ದನಗಳ ಸಂರಕ್ಷಣೆಯಲ್ಲಿ ಅದ್ಭುತ ಕೆಲಸ ಮಾಡಿದ್ದೇವೆ’- ಉತ್ತರ ಪ್ರದೇಶ ಸರ್ಕಾರ

ಈ ಮಧ್ಯೆ, ಅನೇಕ ವಿದ್ಯಾರ್ಥಿಗಳು ತಮ್ಮನ್ನು ರೈಲು ಹತ್ತಲು ಅನುಮತಿಸಲಿಲ್ಲ ಅಥವಾ ಅಧಿಕಾರಿಗಳು ತಮ್ಮೊಂದಿಗೆ ಕೆಟ್ಟದಾಗಿ ನಡೆಸಿಕೊಂಡರು ಎಂದು ದೂರಿದ್ದಾರೆ.

ಆದಾಗ್ಯೂ, ಕಳೆದ ವಾರದಿಂದ ರಾಯಭಾರ ಕಚೇರಿಯ ಬಳಿ ನೆಲೆಸಿರುವ ಸುಮಾರು 400 ವಿದ್ಯಾರ್ಥಿಗಳು ಸೇರಿದಂತೆ ಸೋಮವಾರ ಕೈವ್‌ನಿಂದ ಪಶ್ಚಿಮ ಉಕ್ರೇನ್ ಕಡೆಗೆ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳ ಸ್ಥಳಾಂತರ ಮಾಡಲಾಗಿದೆ ಎಂದು ರಾಯಭಾರ ಕಚೇರಿ ಖಚಿತಪಡಿಸಿದೆ ಎಂದು ಸರ್ಕಾರಿ ಮೂಲಗಳು ಹೇಳಿಕೊಂಡಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಭಾರತೀಯ ವಿದ್ಯಾರ್ಥಿಗಳನ್ನು ಹಂಗೇರಿ, ಪೋಲೆಂಡ್, ರೊಮೇನಿಯಾ, ಸ್ಲೋವಾಕ್ ಗಣರಾಜ್ಯಕ್ಕೆ ಸ್ಥಳಾಂತರಿಸಲಾಗುತ್ತಿದೆ. ಈ ಎಲ್ಲಾ ದೇಶಗಳು ಉಕ್ರೇನ್‌ನೊಂದಿಗೆ ಗಡಿಯನ್ನು ಹಂಚಿಕೊಡಿದ್ದು, ಅಲ್ಲಿಂದ ಅವರನ್ನು ಆಪರೇಷನ್ ಗಂಗಾ ಅಡಿಯಲ್ಲಿ ಭಾರತಕ್ಕೆ ಸ್ಥಳಾಂತರಿಸಲಾಗುತ್ತದೆ ಎನ್ನಲಾಗಿದೆ.

ರಷ್ಯಾ ಒಕ್ಕೂಟದಿಂದ ಉಕ್ರೇನ್ ಬೇರ್ಪಟ್ಟ ನಂತರ, ಅಮೆರಿಕಾ ನೇತೃತ್ವದ NATO ಜೊತೆಗೆ ಸೇರಿಕೊಕೊಳ್ಳಲು ಯತ್ನಿಸುತ್ತಿದೆ. ಅದಕ್ಕಾಗಿ, ಅಮೆರಿಕಾ ಸಾಕಷ್ಟು ಯುದ್ದ ಶಸ್ತ್ರಾಸ್ತ್ರಗಳನ್ನು ಉಕ್ರೇನ್‌ನಲ್ಲಿ ಶೇಖರಣೆ ಮಾಡಿದೆ. ಇದು ರಷ್ಯಾ ವಿರುದ್ದದ ಷಡ್ಯಂತ್ರದ ಭಾಗವಾಗಿದ್ದು, ಉಕ್ರೇನ್ನಲ್ಲಿ ನ್ಯಾಟೋ ನೆಲೆಗೂಡುವುದನ್ನು ರಷ್ಯಾ ವಿರೋಧಿಸಿತ್ತು ಮತ್ತು ಯುದ್ದಾಸ್ತ್ರಗಳನ್ನು ಹಿಂಪಡೆಯುವಂತೆ ಹಲವು ತಿಂಗಳಿನಿಂದ ನ್ಯಾಟೋಗೆ ಹೇಳುತ್ತಲೇ ಇತ್ತು. ಕೊನೆಗೆ ಕಳೆದ ಗುರುವಾರ ಬೆಳಿಗ್ಗೆ ರಷ್ಯಾ ಸೇನೆ ಉಕ್ರೇನ್ ವಿರುದ್ಧ ಮಿಲಿಟರಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಮುರುಘ ಶರಣರು ಸೇರಿದಂತೆ ಹಲವು ಸ್ವಾಮೀಜಿಗಳು ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...