Homeಮುಖಪುಟಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಸಮಸ್ಯೆ ಮೀಸಲಾತಿಯಲ್ಲಿಲ್ಲ, ಬದಲಿಗೆ NEET ನಲ್ಲಿದೆ: ನೀಟ್ ರದ್ಧತಿಗೆ ಕನ್ನಡಿಗರ ಆಗ್ರಹ

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು.

- Advertisement -
- Advertisement -

ರಷ್ಯಾ ಉಕ್ರೇನ್ ಮೇಲೆ ಯುದ್ದ ಸಾರಿದ್ದು, ಕನ್ನಡಿಗ ವೈದ್ಯ ವಿದ್ಯಾರ್ಥಿಯ ಸಾವು ಕನ್ನಡಿಗರನ್ನು ಕೆರಳಿಸಿದೆ. ಅಲ್ಲದೆ ಪ್ರತಿಭಾವಂತ ಕನ್ನಡಿಗರೇಕೆ ವಿದ್ಯಾಭ್ಯಾಸಕ್ಕೆ ವಿದೇಶಗಳಿಗೆ ಹೋಗಿ ಬಲಿಯಾಗಬೇಕು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಈ ಹಿನ್ನೆಲೆಯಲ್ಲಿ NEET ಪರೀಕ್ಷೆ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದ್ದು, ಕೂಡಲೇ ಅದನ್ನು ರದ್ದಗೊಳಿಸಬೇಕೆಂಬ ಗಟ್ಟಿ ದನಿ ಕೇಳಿಬಂದಿದೆ.

ಇಂದು ಕನ್ನಡಿಗರು ನೀಟ್ ವಿರುದ್ಧ ಟ್ವಿಟರ್‌ನಲ್ಲಿ ಅಭಿಯಾನ ನಡೆಸಿದ್ದಾರೆ. “ಒಂದೆಡೆ ಸೀಟಿಗೆ ಕೋಟಿಗಟ್ಟಲೆ ಹಣ ಬಾಚುವ ಕ್ಯಾಪಿಟೇಷನ್ ಲಾಬಿ, ಇನ್ನೊಂದೆಡೆ ಕನ್ನಡಿಗರ ಹಕ್ಕುಗಳನ್ನು ಕಸಿಯುತ್ತಿರುವ ನೀಟ್ ಎಂಬ ಷಡ್ಯಂತ್ರ. ಬಲಿಯಾಗುತ್ತಿರುವುದು ಕನ್ನಡಿಗರು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಿಡಿಕಾರಿದೆ.

ಕರ್ನಾಟಕವು ಭಾರತದಲ್ಲಿಯೇ ಅತಿ ಹೆಚ್ಚು MBBS ಕಾಲೇಜುಗಳು ಮತ್ತು ಸೀಟುಗಳನ್ನು ಹೊಂದಿದೆ. ಆದರೆ #NEET ನಿಂದಾಗಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ಗ್ರಾಮೀಣ ಮತ್ತು ಕಡಿಮೆ ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳು ತಮ್ಮ ವೈದ್ಯಕೀಯ ಅಧ್ಯಯನದ ಕನಸನ್ನು ನನಸಾಗಿಸಲು ಇರುವ ಏಕೈಕ ಮಾರ್ಗವೆಂದರೆ ನೀಟ್ ರದ್ದುಗೊಳಿಸಬೇಕು ಎಂದು ಚೇತನ್ ಜೀರಾಳ್ ಟ್ವೀಟ್ ಮಾಡಿದ್ದಾರೆ.

ಲಕ್ಷಾಂತರ ರೂಪಾಯಿ ದುಡ್ಡುಕೊಟ್ಟು ಟ್ಯೂಶನ್ ಕೊಡಿಸಲು ಆಗುವ ಶ್ರೀಮಂತರಿಗೆ ಮಾತ್ರ ಅನುಕೂಲವಾಗುವಂತಹಾ NEET ಪರೀಕ್ಷಾ ವ್ಯವಸ್ತೆಯನ್ನು ಕರ್ನಾಟಕ ಕೈಬಿಡಬೇಕು. #BanNeet ಎಂದು ಅರುಣ್ ಜಾವಗಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ 3200 MBBS ಸೀಟುಗಳೊಂದಿಗೆ 20 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. 3200 ಸೀಟುಗಳಲ್ಲಿ ಸುಮಾರು 480 ಸೀಟುಗಳನ್ನು ಕೇಂದ್ರೀಯ ಕೋಟಾಕ್ಕೆ ನೀಡಲಾಗಿದೆ. ಕಟ್ಟಡ ನಮ್ಮದು, ಸೌಲಭ್ಯಗಳು ನಮ್ಮದು, ಅಧ್ಯಾಪಕರು ನಮ್ಮದು, ವಿಶ್ವವಿದ್ಯಾಲಯ ನಮ್ಮದು. ನಾವು ನಮ್ಮ ಸ್ಥಾನಗಳನ್ನು ಇತರರಿಗೆ ಏಕೆ ನೀಡಬೇಕು? ಎಂದು ಟ್ವಿಟರ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಶೇ.95 ಅಂಕ ಪಡೆದ ಎಸ್ಸಿ ಎಸ್ಟಿ ವಿದ್ಯಾರ್ಥಿಗಳೂ ಸಹ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಮೀಸಲಾತಿಯನ್ನು ದೂಷಿಸುವುದನ್ನು ನಿಲ್ಲಿಸಿ ಮತ್ತು ನೀಟ್ ಅನ್ನು ದೂಷಿಸಿ. ಸಮಸ್ಯೆ ಪರಿಹಾರಕ್ಕೆ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಮೆಗಳ ಬದಲಿಗೆ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿ. ಕ್ಯಾಪಿಟೇಶನ್ ಮಾಫಿಯಾವನ್ನು ನಿಯಂತ್ರಿಸಿ ಎಂದು ಚೇತನ್ ಕೃಷ್ಣ ಒತ್ತಾಯಿಸಿದ್ದಾರೆ.

7245 ಮೆಡಿಕಲ್ ಸೀಟುಗಳು ಇರುವ ಕರ್ನಾಟಕದಿಂದ ಅತಿ ಹೆಚ್ಚು ಸೀಟುಗಳನ್ನು ಬೇರೆ ರಾಜ್ಯಗಳಿಗೆ ಹಂಚುವ ವ್ಯವಸ್ಥೆಯೇ ನೀಟ್. ಒಂದು ದೇಶ, ಒಂದು ಪರೀಕ್ಷೆ ಹೆಸರಲ್ಲಿ ಒಕ್ಕೂಟ ಸರ್ಕಾರ ಕನ್ನಡದ ಮಕ್ಕಳ ಹಕ್ಕನ್ನು ಕಸಿದಿದೆ.‌ ಅದರ ಪರಿಣಾಮವಾಗಿಯೇ ಕನ್ನಡದ ಮಕ್ಕಳು ಹೊರದೇಶಗಳಿಗೆ ಹೋಗುವಂತಾಗಿದೆ. #BanNeet #RIPNaveen ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ  ಟ್ವೀಟ್ ಮಾಡಿದ್ದಾರೆ.

NEET ಎಂಬುದು ಪದೇ ಪದೇ ಬಡವರ ವಿರೋಧಿ, ಒಕ್ಕೂಟ ವ್ಯವಸ್ಥೆಯ ವಿರೋಧಿ ಎಂಬುದನ್ನು ಸಾಬೀತುಪಡಿಸಿದೆ. ಇದರಿಂದ ನಗರದ ಶ್ರೀಮಂತರಿಗೆ ಮಾತ್ರ ಲಾಭ. ಗ್ರಾಮೀಣ, ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಅರ್ಹ ಅವಕಾಶಗಳಿಂದ ವಂಚಿತರಾಗಿದ್ದಾರೆ. ಒಟ್ಟಾಗಿ ನಿಂತು ಈ ದಬ್ಬಾಳಿಕೆ ವಿರುದ್ಧ ಹೋರಾಡುವ ಸಮಯ ಇದಾಗಿದೆ. ನೀಟ್ ರದ್ದುಗೊಳಿಸೋಣ ಎಂದು ಶ್ರುತಿ ಮರುಳಪ್ಪ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಕೇಂದ್ರ ಸರ್ಕಾರ ಮತ್ತು ಗೋದಿ ಮಿಡಿಯಾಗಳಿಗೆ ಛೀಮಾರಿ ಹಾಕುತ್ತಿರುವ ಉಕ್ರೇನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...