Homeಕರ್ನಾಟಕ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

- Advertisement -
- Advertisement -

ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದ (ಬಿಫೆಸ್) 13 ಆವೃತ್ತಿ ಗುರುವಾರ ಸಂಜೆ ಉದ್ಘಾಟನೆಯಾಗಿದ್ದು, ಕಾರ್ಯಕ್ರಮದಲ್ಲಿ ವಿ.ಡಿ.ಸಾವರ್ಕರ್‌ ಕಟೌಟ್‌‌ ಪ್ರದರ್ಶಿಸಲಾಗಿದೆ.

ಕರ್ನಾಟಕ ಚಲನಚಿತ್ರ ಅಕಾಡೆಮಿ ವತಿಯಿಂದ ನಡೆಯುತ್ತಿರುವ ಬಿಫೆಸ್‌ 13 ಆವೃತ್ತಿಯ ಉದ್ಘಾಟನಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಈ ಸಂದರ್ಭದಲ್ಲಿ ಸಾವರ್ಕರ್‌ ಕಟೌಟ್‌ಅನ್ನು ಉಕ್ಕಿನ ಮನುಷ್ಯ ಸರ್ದಾರ್‌ ವಲ್ಲಭಭಾಯಿ ಪಟೇಲ್ ಕಟೌಟ್‌ ಜೊತೆಯಲ್ಲಿ ಪ್ರದರ್ಶಿಸಲಾಗಿದೆ.

ಸಾವರ್ಕರ್‌ ಬಲಪಂಥೀಯ ಪಡೆಯ ಐಕಾನ್‌. ಜೊತೆಗೆ ಬ್ರಿಟಿಷರಿಗೆ ಹಲವು ಭಾರಿ ಸಾವರ್ಕರ್‌ ಕ್ಷಮಾಪಣಾ ಪತ್ರ ಬರೆದಿರುವುದು ಮತ್ತೆ ಮತ್ತೆ ಚರ್ಚೆಯಾಗುತ್ತಿದೆ. ರಾಷ್ಟ್ರಪಿತ ಗಾಂಧೀಜಿಯವರ ಹತ್ಯೆಯ ಜೊತೆಗೂ ಸಾವರ್ಕರ್‌ ಹೆಸರು ತಳುಕು ಹಾಕಿಕೊಂಡಿದೆ. ಇತ್ತೀಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವರ್ಕರ್‌ ಕುರಿತು ಪೋಸ್ಟ್‌ ಹಾಕಿದ್ದನ್ನು ಹಲವು ಕನ್ನಡಿಗರು ಕಟುವಾಗಿ ಟೀಕಿಸಿದ್ದರು. ಆದರೀಗ ಬಿಜೆಪಿ ನೇತೃತ್ವದ ಸರ್ಕಾರ ಸಾವರ್ಕರ್‌ ಪ್ರೇಮವನ್ನು ಮತ್ತೆ ಪ್ರದರ್ಶಿಸಿದೆ.

ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ (ಜಿಕೆವಿಕೆ) ಗುರುವಾರ ಸಂಜೆ 4.30ಕ್ಕೆ ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರ ರಾಷ್ಟ್ರೀಯ ಸಮಾವೇಶ ಭವನದಲ್ಲಿ ಉದ್ಘಾಟನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಜೆ ಆರು ಗಂಟೆಯ ಬಳಿಕ ಕಾರ್ಯಕ್ರಮ ಚಾಲನೆ ಪಡೆಯಿತು.

ಇದನ್ನೂ ಓದಿರಿ: ಸಾವರ್ಕರ್‌ಗೆ ಮೆಚ್ಚುಗೆ ಸೂಚಿಸಿದ ಸಿಎಂಗೆ ರಾಜ್ಯದ ಜನತೆಯಿಂದ ಇತಿಹಾಸ ಪಾಠ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಸಿಎಂ ಅವರನ್ನು ಕರೆಯುವ ಮುನ್ನ ಮುಖ್ಯಮಂತ್ರಿಯವರ ಕುರಿತು ಒಂದು ಕಿರು ವಿಡಿಯೊ ಪ್ರದರ್ಶಿಸಿ ಪರಿಚಯಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ನಟಿ ಡಾ.ಭಾರತೀ ವಿಷ್ಣುವರ್ಧನ್‌, ಮಲಯಾಳಂ ನಿರ್ದೇಶಕ ಪ್ರಿಯದರ್ಶನ್ ಅವರ ಕುರಿತೂ ಕಿರು ವಿಡಿಯೊ ಪ್ರದರ್ಶಿಸಲಾಯಿತು. ಸಚಿವ ಮುನಿರತ್ನ, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ನಿರ್ಮಾಪಕ ರಾಕ್‌ಲೈಕ್‌ ವೆಂಕಟೇಶ್‌, ಅಶ್ವಿನಿ ಪುನಿತ್‌ ರಾಜ್‌ಕುಮಾರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್‌, ವಾರ್ತಾ ಇಲಾಖೆಯ ಆಯಕ್ತ ಪಿ.ಎಸ್‌.ಹರ್ಷ, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನಿಲ್ ಪುರಾಣಿಕ್‌ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ಸುಮಾರು 20 ನಿಮಿಷಗಳ ಕಾಲ ಬಸವರಾಜು ಬೊಮ್ಮಾಯಿಯವರು ಮಾತನಾಡಿದರು. ನಂತರ ಕಾರ್ಯಕ್ರಮದಲ್ಲಿ ಹಾಜರಿದ್ದ ಅತಿಥಿಗಳು ಮಾತನಾಡಿದರು.

ಉದ್ಘಾಟನೆಯ ಬಳಿಕ ಮುಖ್ಯಮಂತ್ರಿ ಹಾಗೂ ಇತರರು ತೆರಳಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ನೀಡಲಾಯಿತು. ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಮೊದಲ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗ ಬೆಳೆದುಬಂದ ಹಾದಿಯ ಕುರಿತು ಪ್ರದರ್ಶಿಸಲಾಯಿತು. ಎರಡನೆಯದರಲ್ಲಿ  ಪುನೀತ್‌ ರಾಜ್‌ಕುಮಾರ್‌ ಅಭಿನಯದ ವಿವಿಧ ಚಿತ್ರಗೀತೆಗಗಳಿಗೆ ನೃತ್ಯ ಮಾಡಲಾಯಿತು. ಆ ಮೂಲಕ ಪುನೀತ್ ರಾಜ್‌ಕುಮಾರ್‌ ಅವರಿಗೆ ಗೌರವ ಸಲ್ಲಿಸಲಾಯಿತು.

ಮೂರನೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾದರಿ ವ್ಯಕ್ತಿಗಳ (ರೋಲ್‌ ಮಾಡೆಲ್‌) ಕುರಿತು ನೃತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿ, ಗಾಂಧೀಜಿ, ಝಾನ್ಸಿರಾಣಿ ಲಕ್ಷ್ಮೀಬಾಯಿ, ಸೈರಾ ನರಸಿಂಹರೆಡ್ಡೆ, ಸುಭಾಷ್ ಚಂದ್ರ ಬೋಸ್‌, ಒನಕೆ ಓಬವ್ವ ಸೇರಿದಂತೆ ಹಲವರನ್ನು ಸ್ಮರಿಸಲಾಯಿತು.

ಇದನ್ನೂ ಓದಿರಿ: ಸಾವರ್ಕರ್‌‌ ಕ್ಷಮಾಪಣೆಗೆ ಗಾಂಧಿ ಸಲಹೆ ನೀಡಿದ್ದರೆಂಬುದು ಹಾಸ್ಯಾಸ್ಪದ: ರಾಜಮೋಹನ್ ಗಾಂಧಿ

ಮಾದರಿ ವ್ಯಕ್ತಿತ್ವಗಳ ಪೈಕಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಇರಲಿಲ್ಲ. ಈ ಪ್ರದರ್ಶನದ ಅಂತ್ಯದಲ್ಲಿ ಎಲ್ಲ ಕಲಾವಿದರು ಒಟ್ಟಿಗೆ ವೇದಿಕೆ ಮೇಲೆ ನಿಂತಾಗ ನೃತ್ಯ ತಂಡವು ಸರ್ದಾರ್ ವಲ್ಲಭಬಾಯಿ ಪಟೇಲ್‌ ಮತ್ತು ವಿ.ಡಿ.ಸಾವರ್ಕರ್‌ ಅವರ ಸುಮಾರು ಹತ್ತು ಅಡಿ ಎತ್ತರದ ಕಟೌಟ್ ಪ್ರದರ್ಶಿಸಿತು.

ಬಿಜೆಪಿ ತನ್ನ ಹಿಡನ್ ಅಜೆಂಡಾಗಳನ್ನು ತುರುಕಲು ಪ್ರತಿಷ್ಟಿತ ಚಲನಚಿತ್ರೋತ್ಸವವನ್ನು ಬಳಸುತ್ತಿದೆಯೇ ಎಂದು ಕೇಳಲು ಅಕಾಡೆಮಿಯ ಅಧ್ಯಕ್ಷ ಸುನೀಲ್‌ ಪುರಾಣಿಕ್ ಅವರನ್ನು ‘ನಾನುಗೌರಿ.ಕಾಂ’ ಸಂಪರ್ಕಿಸಿತು.

‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ ಸುನಿಲ್‌ ಪುರಾಣಿಕ್‌, “ನಮ್ಮ ವೀರ ಸಾವರ್ಕರ್‌ ಏನು ಭಯೋತ್ಪಾದಕನೆ? ಆಜಾದಿ ಕಾ ಅಮೃತ ಮಹೋತ್ಸವ ಎಂದು ಕಾರ್ಯಕ್ರಮ ಮಾಡುತ್ತಿದ್ದೇವೆ. ಭಗತ್‌ಸಿಂಗ್‌, ವೀರ ಸಾವರ್ಕರ್‌, ಚಂದ್ರಶೇಖರ್‌ ಆಜಾದ್ ಮೊದಲಾದವರನ್ನು ಸ್ಮರಿಸಲಾಗಿದೆ” ಎಂದು ತಿಳಿಸಿದರು.

ಅಂಬೇಡ್ಕರ್‌ ಅವರನ್ನೇಕೆ ವೇದಿಕೆ ಮೇಲೆ ತರಲಿಲ್ಲ ಎಂದು ಕೇಳಿದ್ದಕ್ಕೆ, “ಆಜಾದಿ ಕಾ ಅಮೃತ ಮಹೋತ್ಸವ ಮಾಡುತ್ತಿದ್ದೇವೆ.  ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರನ್ನು ಸ್ಮರಿಸಿದ್ದೇವೆ. ಅಂಬೇಡ್ಕರ್‌ ಅವರು ಬರೆದ ಸಂವಿಧಾನದಲ್ಲೇ ನಾವು ಬದುಕುತ್ತಿದ್ದೇವೆ” ಎಂದು ಹೇಳಿದರು.

ಶಿವಾಜಿಯನ್ನು ವೇದಿಕೆ ಮೇಲೆ ತಂದಿದ್ದರ ಕುರಿತು ಪ್ರಶ್ನಿಸಿದಾಗ, “ಸಂಗೊಳ್ಳಿ ರಾಯಣ್ಣ, ಝಾನ್ಸಿರಾಣಿ ಲಕ್ಷ್ಮೀಬಾಯಿ ಅವರಂತೆ ಶಿವಾಜಿಯೂ ಕೂಡ ಹೋರಾಟಗಾರ. ಭಾರತೀಯತೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಹೋರಾಡಿದ ವ್ಯಕ್ತಿಯನ್ನು ನೀವು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಅನ್ನುತ್ತೀರಾ?” ಎಂದು ಪ್ರಶ್ನಿಸಿದರು.

ಟಿಪ್ಪು ಅವರನ್ನೇಕೆ ಕೈ ಬಿಟ್ಟಿದ್ದೀರಿ ಎಂದಿದ್ದಕ್ಕೆ, “ಹತ್ತು ನಿಮಿಷದಲ್ಲಿ ಎಷ್ಟು ಜನರನ್ನು ತೋರಿಸಲು ಆಗುತ್ತದೆ. ಟಿಪ್ಪು ನನ್ನ ದೃಷ್ಟಿಯಲ್ಲಿ ವಿವಾದಾತ್ಮಕ ವ್ಯಕ್ತಿ” ಎಂದು ತಿಳಿಸಿದರು. ಶಿವಾಜಿಯೂ ಕೂಡ ವಿವಾದಾತ್ಮಕ ವ್ಯಕ್ತಿಯಲ್ಲವೇ, ಕನ್ನಡಿಗರಿಗೆ ಶಿವಾಜಿಯಿಂದ ಅನ್ಯಾಯವಾಗಿಲ್ಲವೇ ಎಂದರೆ, “ನಮ್ಮ ದೃಷ್ಟಿಯಲ್ಲಿ ಶಿವಾಜಿ ಅಪ್ರತಿಮ ದೇಶಭಕ್ತ. ನೀವು ದೇಶಭಕ್ತಿ, ದೇಶ ಅಂತಾ ಮಾತನಾಡಿ, ಅಥವಾ ಕನ್ನಡ ಪ್ರೇಮ, ಮರಾಠಿ ಅಂತ ಮಾತನಾಡಿ. ಆರು ಲಕ್ಷ ಜನ ಸ್ವಾತಂತ್ರ್ಯ ಹೋರಾಟಗಾರರಿದ್ದಾರೆ. ಹತ್ತು ನಿಮಿಷದಲ್ಲಿ ಎಲ್ಲರನ್ನೂ ತೋರಿಸಲು ಆಗುತ್ತಾ?” ಎಂದು ಕೇಳಿದರು.


ಇದನ್ನೂ ಓದಿರಿ: ‘BIFFes’ ಎಂಬ ಅಂತಾರಾಷ್ಟ್ರೀಯ, Sorry ‘ಕನ್ನಡ ಅಂತಾರಾಷ್ಟ್ರೀಯ ಸಿನಿಮೋತ್ಸವ!’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗಜ್ಯೋತಿ ಬಸವಣ್ಣನವರ ಕರ್ನಾಟಕ ಈಗ ಬಲಪಂಥೀಯರ ಮುಷ್ಠಿ ಯಲ್ಲಿ, ಅವರ ತತ್ವಾಧರಿತ
    ಕಾರ್ಯ ಕ್ರಮಗಳನ್ನು ಸಿಕ್ಕ ಸಿಕ್ಕ ವೇದಿಕೆಗಳನ್ನು ಉಪಯೋಗಿಸಿ ಕೊಂಡು ತರಾತುರಿ ಯಲ್ಲಿ ಜಾರಿಗೆ ತರುವುದು ಅವರ ಹುನ್ನಾರ. ಇವರ ದರ್ಬಾರು ತಾತ್ಕಾಲಿಕವಾಗಬೇಕು. ಅದಕ್ಕೆ ಮತದಾರರು ಕಾರಣವಾಗಬೇಕು.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...