Homeಕರ್ನಾಟಕಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

ಬೌದ್ಧಧರ್ಮವು ಹಿಂದೂ ಧರ್ಮದ ಒಂದು ಶಾಖೆ: ಸಚಿವ ಡಾ.ಕೆ.ಸುಧಾಕರ್‌‌

- Advertisement -
- Advertisement -

“ವಿಷ್ಣುವಿನ ಅವತಾರ ಭಗವಾನ್ ಬುದ್ಧ. ನಾನು ಕೂಡ ಬುದ್ಧನ ಅನುಯಾಯಿ” ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಹೇಳಿಕೆ ನೀಡಿದ್ದು, ಈ ಕುರಿತು ವಿಡಿಯೊ ಬಿಡುಗಡೆ ಮಾಡಿದ್ದಾರೆ.

“ಬೌದ್ಧಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯರಿಗೆ ಸಲ್ಲುತ್ತದೆ” ಎಂದು ಸುಧಾ‌ಕರ್‌ ಹೇಳಿದ್ದು ಚರ್ಚೆಗೆ ಗ್ರಾಸವಾಗಿದೆ.

“ವಿಜ್ಞಾನಕ್ಕೂ ಮೊದಲು ಮಾನವ ಸಮಾಜಕ್ಕೆ ದಿಕ್ಕುದೆಸೆ ತೋರಿ ಆಚಾರ್ಯ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯ ಎಲ್ಲಾ ಸಮಾಜದ ಕಾರ್ಯಕ್ರಮಗಳಿಗೂ ನೈತಿಕ ಬಲ ತುಂಬಿ ಆಗುವಂತೆ ಮಾಡುವ ಶಕ್ತಿಯನ್ನು ಹೊಂದಿದೆ. ಇಂದು ಭಾರತೀಯ ಸಂಸ್ಕೃತಿ, ಆಚಾರ ವಿಚಾರ ವಿಶ್ವಮಾನ್ಯವಾಗಿದ್ದರೆ ಅದರ ಶ್ರೇಯ ಈ ಸಮುದಾಯಕ್ಕೆ ಸಲ್ಲಬೇಕು. ಈ ನಿಟ್ಟಿನಲ್ಲಿ ಸಾವಿರಾರು ವರ್ಷದಿಂದ ನಾಗರಿಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿರುವ ಬ್ರಾಹ್ಮಣ ಸಮುದಾಯವು ವಿಶೇಷ ಗೌರವ ಸ್ಥಾನವನ್ನು ಹೊಂದಿದೆ” ಎಂದು ಅವರು ಹೇಳಿದ್ದು ವಿವಿಧ ವೇದಿಕೆಗಳಲ್ಲಿ ವರದಿಯಾದ ಬಳಿಕ ಭಾರೀ ವಿರೋಧ ವ್ಯಕ್ತವಾಗಿತ್ತು. ಈಗ ವಿಡಿಯೊ ಮೂಲಕ ಡಾ.ಸುಧಾಕರ್‌ ಸ್ಪಷ್ಟೀಕರಣ ನೀಡಿದ್ದಾರೆ.

ಡಾ.ಕೆ.ಸುಧಾಕರ್‌ ಸ್ಪಷ್ಟನೆ ಹೀಗಿದೆ:

“ಸನಾತನ ಧರ್ಮದ ಉಳಿವಿಗಾಗಿ, ಪುನರುತ್ಥಾನಕ್ಕಾಗಿ ಜಗದ್ಗುರು ಶಂಕರಾಚಾರ್ಯರ ಕೊಡುಗೆ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮ ಒಂದರಲ್ಲಿ ನಾನು ಮಾತನಾಡುತ್ತಿರುವುದನ್ನು ತಿರುಚಿ ಬೌದ್ಧ ಮತಕ್ಕೆ, ಭಗವಾನ್ ಬುದ್ಧರಿಗೆ ಅಪಮಾನ ಎಸಗಿದ್ದೇನೆ ಎನ್ನುವಂತಹ ರೀತಿಯಲ್ಲಿ ಕೆಲವರು ಅಪಪ್ರಚಾರ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.”

“ಸನಾತನ ಹಿಂದೂ ಧರ್ಮದಲ್ಲಿ ಮಹಾ ವಿಷ್ಣುವಿನ ದಶವತಾರ ಕಲ್ಪನೆ ಇದೆ. ಮತ್ಸ್ಯಾವತಾರ, ಕೂರ್ಮಾವತಾರ, ವರಹ, ನರಸಿಂಹ, ವಾಮನ, ಪರಶುರಾಮ, ರಾಮ, ಕೃಷ್ಣ, ಬುದ್ಧ ಹಾಗೂ ಕಲ್ಕಿ. ಇವು ವಿಷ್ಣುವಿನ ದಶವತಾರಗಳು ಎಂಬುದು ಸಮಸ್ತ ಹಿಂದೂಗಳ ನಂಬಿಕೆ.”

“ಹಿಂದೂಗಳು ಪೂಜಿಸುವಂತಹ ನರಸಿಂಹ ದೇವರು, ರಾಮ, ಕೃಷ್ಣನಿಗೆ ಸಮನಾದ ಸ್ಥಾನವನ್ನು ನಾವು ಭಗವಾನ್‌ ಬುದ್ಧರಿಗೂ ಕೊಟ್ಟಿದ್ದೀವಿ. ಬುದ್ಧನನ್ನು ಸಾಕ್ಷಾತ್ ಮಹಾನ್ ವಿಷ್ಣುವಿನ ಅವತಾರವೆಂದು ನಂಬಿದ್ದೇವೆ. ಈ ರೀತಿಯ ನಂಬಿಕೆ ಉಳ್ಳವರು ಹಿಂದೂಗಳು.”

“ನಾನು ಸಹ ಬುದ್ಧನ ಅನುಯಾಯಿ. ನನ್ನ ಮನೆಗೆ ಭೇಟಿ ಕೊಟ್ಟರೆ ಗೊತ್ತಾಗುತ್ತದೆ ಅಥವಾ ಭೇಟಿ ಕೊಟ್ಟಿರುವಂತಹ ಪ್ರತಿಯೊಬ್ಬರೂ ನನ್ನ ಮನೆಯಲ್ಲಿರುವಂತಹ ಬುದ್ಧನ ಪ್ರತಿಮೆಗಳು, ಪುಸ್ತಕಗಳು, ಫೋಟೋಗಳನ್ನು ಗಮನಿಸಿದ್ದಾರೆಂದು ತಿಳಿದುಕೊಂಡಿದ್ದೇನೆ. ನಾನು ಎಂಬಿಬಿಎಸ್‌ ವ್ಯಾಸಂಗ ಮಾಡಿದ ಕಾಲೇಜು ಹೆಸರು ಕೂಡ ಗೌತಮ ಬುದ್ಧನ ಮತ್ತೊಂದು ಹೆಸರಿನದ್ದಾಗಿದೆ. ಸಿದ್ಧಾರ್ಥ ಮೆಡಿಕಲ್‌ ಕಾಲೇಜು ಎನ್ನುವುದು ನನ್ನ ಜೀವನ ಪರ್ಯಾಂತ ಹೆಮ್ಮೆ ಎನಿಸುವಂತಹ ವಿಷಯ.”

“ಬೌದ್ಧಮತ ಹಿಂದೂಧರ್ಮ ಎಂಬ ಹೆಮ್ಮರದ ಶಾಖೆ ಎಂಬುದು ಹಿಂದೂಗಳ ನಂಬಿಕೆ. ಹಿಂದೂ ಧರ್ಮ ಒಂದು ಪುಸ್ತಕವೋ, ಪ್ರವಾದಿಯೋ ಇರುವಂತಹ ಧರ್ಮ ಅಲ್ಲ. ಭಗವದ್ಗೀತೆಯಲ್ಲಿ ಶ್ರೀಕಷ್ಣ ‘ಸಂಭವಾಮಿ ಯುಗೇ ಯುಗೇ’ ಎಂದು.”

 – ಡಾ.ಕೆ.ಸುಧಾಕರ್‌‌, ಆರೋಗ್ಯ ಸಚಿವರು, ಕರ್ನಾಟಕ ಸರ್ಕಾರ

***

‘ಬೌದ್ಧಧರ್ಮವು ಹಿಂದೂ ಧರ್ಮದ ಭಾಗವಲ್ಲ’

ಬೌದ್ಧಧರ್ಮವನ್ನು ಹಿಂದೂ ಧರ್ಮದ ಒಂದು ಭಾಗ ಎಂದು ಅಪಪ್ರಚಾರ ಮಾಡುತ್ತಿರುವುದು ಮೊದಲಿನಿಂದಲೂ ನಡೆದು ಬಂದಿದೆ. ಹೀಗಾಗಿ ಸುಧಾಕರ್‌ ಅವರ ಹೇಳಿಕೆಗೆ ಅನೇಕರು ಕಟುವಾಗಿ ಟೀಕಿಸಿದ್ದಾರೆ.

“ಬುದ್ಧ ಸಾಮಾನ್ಯ ಮನುಷ್ಯನಾಗಿ ಬದುಕಿದ ದೊಡ್ಡ ಜ್ಞಾನಿ. ಮಾನವ ಜನಾಂಗಕ್ಕೆ ದಾರಿ ತೋರಿದ ಗುರು. ಯಾವ ವಿಷ್ಣುವಿನ ಅವತಾರವೂ ಅಲ್ಲ” ಎಂದು ಸ್ವಾಮಿ ಡಿ.ಎಸ್‌. ಪ್ರತಿಕ್ರಿಯೆ ನೀಡಿದ್ದಾರೆ.

“ಬುದ್ದದಮ್ಮ ವೈಜ್ಞಾನಿಕ ಹಿನ್ನೆಲೆ ಹೊಂದಿರುವ ಧರ್ಮ. ಈ ಧರ್ಮದಲ್ಲಿ ಮಾಟ, ಮಂತ್ರ, ತಂತ್ರ, ಮಂತ್ರ ಇಲ್ಲ. ಬುದ್ದ ಹೇಗೆ ಅವತಾರದಲ್ಲಿ ವಿಷ್ಣು ಆಗಲು ಸಾಧ್ಯ?” ಎಂದು ಶಿವಮೂರ್ತಿ ಎಂಬವರು ಪ್ರಶ್ನಿಸಿದ್ದಾರೆ.

ಕವಿ ಸಿದ್ದಲಿಂಗಯ್ಯನವರು ದಶಕಗಳ ಹಿಂದೆ ಬರೆದ ‘ಮಾತಿಗೆ ಮಾತು ಕೊಟ್ಟವನ’ ಹಾಡಿದ ಒಂದು ಸಾಲು ಹೀಗಿದೆ- “ದೇವರು ಇಲ್ಲ ಎಂದವನನ್ನು ದೇವರು ಮಾಡಿ ಬಿಟ್ಟರು. ಹತ್ತವತಾರ ಸುಳ್ಳೆಂದವನ ಹನ್ನೊಂದಕ್ಕೆ ಏರಿಸಿದರು…”


ಇದನ್ನೂ ಓದಿರಿ: ಸುಧಾಕರ್‌‌ ಸದನದಲ್ಲೇ ಕ್ಷಮೆ ಕೇಳಬೇಕು: ಬಿಜೆಪಿ ಶಾಸಕ ಹರ್ಷವರ್ಧನ್‌ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬುದ್ಧಿಹೀನ ಅದ್ಹೇಗೆ ಬುದ್ಧನ ಅನುಯಾಯಿಯಾಗುತ್ತಾನೆ? ಕೊಳಕ ನೀಚ ಕೋಮುವಾದಿಗಳು ಮೋದಿಯ ಅನುಯಾಯಿಗಳೆನ್ನುವುದು ಸೂಕ್ತ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...