Homeಕರ್ನಾಟಕಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಇಂದು ರಾಜ್ಯ ಬಜೆಟ್: ಈ ವರ್ಷದ ಆಯವ್ಯಯಕ್ಕೆ ಜನಸಾಮಾನ್ಯರ ನಿರೀಕ್ಷೆಗಳೇನು?

ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ.

- Advertisement -
- Advertisement -

ಇಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಪೂರ್ಣ ಪ್ರಮಾಣದ ಬಜೆಟ್ ಅನ್ನು ಅಧಿವೇಶನದಲ್ಲಿ ಮಂಡಿಸಲಿದ್ದಾರೆ. ಮುಂದಿನ ವರ್ಷ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಚುನಾವಣೆ ದೃಷ್ಟಿಕೋನದಿಂದ ಮತ್ತು ಕೊರೊನಾದಿಂದ ಈಗಾಗಲೇ ಪಾತಾಳಕ್ಕೆ ಕುಸಿದಿರುವ ರಾಜ್ಯದ ಆರ್ಥಿಕತೆ ಸುಧಾರಿಸುವ ನಿಟ್ಟಿನಿಂದಲೂ ಈ ವರ್ಷದ ಬಜೆಟ್ ಮೇಲೆ ಜನಸಾಮಾನ್ಯರಿಗೆ ಸಾಕಷ್ಟು ನಿರೀಕ್ಷೆಗಳಿವೆ.

ರೈತರ ಸಂಕಷ್ಟಗಳು

ಕಳೆದ ಹಲವು ವರ್ಷಗಳಿಂದ ರಾಜ್ಯದಲ್ಲಿ ಅಕಾಲಿಕ ಮಳೆ ತೀರಾ ಸಾಮಾನ್ಯವಾದ ಸಂಗತಿ ಎಂಬಂತಾಗಿದೆ. 2021 ರಿಂದ ಈವರೆಗೆ ಅಕಾಲಿಕ ಮಳೆಗೆ ರಾಣಿಬೆನ್ನೂರಿನಲ್ಲಿ 892.3 ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದ ಹತ್ತಿ, ಭತ್ತ, ಶೇಂಗಾ, ಜೋಳ ಸೇರಿದಂತೆ ನಾನಾ ಬೆಳೆಗಳು ನಾಶವಾಗಿವೆ. ಧಾರವಾಡ ಜಿಲ್ಲೆಯಲ್ಲಿ 90 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಭಿತ್ತನೆ ಮಾಡಲಾಗಿದ್ದ ನಾನಾ ಬೆಳೆಗಳು ಕೈಗೆಟುಕದಂತಾಗಿದೆ. ಗದಗ, ಲಕ್ಷ್ಮೇಶ್ವರ ಭಾಗದಲ್ಲಿ ನೂರಾರು ಹೆಕ್ಟೇರ್‌ನಲ್ಲಿ ಬೆಳೆಯಲಾಗಿದ್ದ ಶೇಂಗಾ, ಈರುಳ್ಳಿ ಮತ್ತು ಜೋಳವೂ ಮಣ್ಣು ಪಾಲಾಗಿದೆ. ಇನ್ನೂ ಮಲೆನಾಡಿನ ಭಾಗದಲ್ಲಿ ಅಡಿಕೆ ಬೆಳೆಗಾರರು ಕೋಟ್ಯಾಂತರ ರೂ. ನಷ್ಟ ಅನುಭವಿಸಿದ್ದಾರೆ. ರಾಜ್ಯದ ಇತರೆ ಭಾಗದಲ್ಲಿರುವ ರೈತರ ಸಮಸ್ಯೆಯೂ ಇದಕ್ಕಿಂತ ಭಿನ್ನವಾಗೇನು ಇಲ್ಲ.

ಈ ನಡುವೆ ರೈತರಿಗೆ ರಾಜ್ಯ ಸರ್ಕಾರ ಸರಿಯಾದ ಸಮಯಕ್ಕೆ ವಿದ್ಯುತ್ ನೀಡಲಾಗುತ್ತಿಲ್ಲ. ಗೊಬ್ಬರ ಬಿತ್ತನೆ ಬೀಜದ ಬೆಲೆ ಇಳಿಕೆ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿನ ಸಾಲಮನ್ನಾ ಸೇರಿದಂತೆ ರಾಜ್ಯದ ಬಜೆಟ್ ಮೇಲೆ ರೈತರಿಗೆ ಸಾಕಷ್ಟು ನಿರೀಕ್ಷೆ ಮತ್ತು ಬೇಡಿಕೆಗಳಿವೆ. ಆದರೆ, ರಾಜ್ಯ ಸರ್ಕಾರ ರೈತರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲಿದೆ ಎಂಬುದು ಬಜೆಟ್ ನಂತರ ಸ್ಪಷ್ಟವಾಗಲಿದೆ.

ಕಾರ್ಮಿಕರ ಕೂಗು

ಕೊರೊನಾ ಕಾರಣದಿಂದಾಗಿ ಅಸಂಘಟಿತ ಕಾರ್ಮಿಕ ವಲಯ ಸಾಕಷ್ಟು ಸಮಸ್ಯೆಯನ್ನು ಸಾಕಷ್ಟು ಸಾವು-ನೋವುಗಳನ್ನು ಎದುರಿಸಿದೆ. ಈ ವಿಭಾಗದಲ್ಲಿನ ನಿರುದ್ಯೋಗ ಸಮಸ್ಯೆ ಈವರೆಗೆ ಬಗೆಹರಿದಂತೆ ಕಂಡುಬಂದಿಲ್ಲ. ಅಲ್ಲದೆ, ಕಾರ್ಮಿಕ ಇಲಾಖೆ ಕೊರೊನಾ ಸಂದರ್ಭದಲ್ಲಿ ಅಸಂಘಟಿತ ವಲಯಕ್ಕೆ ಉತ್ತಮ ನೆರವನ್ನೂ ನೀಡಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ.

ಸೂಕ್ತ ಕೆಲಸ ಮತ್ತು ಕೂಲಿ ಇಲ್ಲದೆ ದಿನಗೂಲಿಗಳು ಮತ್ತು ಕಟ್ಟಡ ಕಾರ್ಮಿಕರು ಕಂಗಾಲಾಗಿದ್ದಾರೆ. ನರೇಗ ಕಾರ್ಮಿಕರಿಗೆ ಅನುದಾನ ಸಾಲುತ್ತಿಲ್ಲ. ವಸತಿ ರಹಿತ ಕಾರ್ಮಿಕರಿಗೆ ಸೂರು ನೀಡುವುದಕ್ಕೆಂದೆ ಕೇಂದ್ರ-ರಾಜ್ಯ ಸರ್ಕಾರಗಳ ನಾನಾ ಯೋಜನೆಗಳು ಇವೆ. ಆದರೆ, ಸೂರು ಮಾತ್ರ ಖಚಿತವಾಗುತ್ತಿಲ್ಲ ಎನ್ನಲಾಗಿದೆ. ಹೀಗಾಗಿ ಈ ವರ್ಷದ ಬಜೆಟ್‌ನಲ್ಲಿ ಅಸಂಘಟಿತ ವಲಯಕ್ಕೆ ಸರ್ಕಾರದ ಕೊಡುಗೆ ಏನು? ಎಂಬುದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಸಣ್ಣ-ಮಧ್ಯಮ ಉದ್ಯಮಗಳ ನಿರೀಕ್ಷೆ

ರಾಜ್ಯದಲ್ಲಿ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುವ ಕ್ಷೇತ್ರಗಳ ಪೈಕಿ ಸಣ್ಣ-ಮದ್ಯಮ ಉದ್ಯಮಗಳ ಪಾತ್ರ ದೊಡ್ಡದು. ಆದರೆ, ಜಿಎಸ್‌ಟಿ ಜಾರಿಯಿಂದಾಗಿ ಅನೇಕ ಸಣ್ಣ ಉದ್ಯಮಗಳು ಅವನತಿಯೆಡೆಗೆ ದೂಡಿತ್ತು. ಇನ್ನೂ ಕೊರೊನಾದಿಂದ ಉಂಟಾಗಿದ್ದ ಆರ್ಥಿಕ ಸಂಕಷ್ಟದಿಂದ ಈವರೆಗೆ ಅನೇಕ ಉದ್ಯಮಗಳು ಚೇತರಿಸಿಕೊಂಡಿಲ್ಲ. ಹೀಗಾಗಿ ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳ ಚೇತರಿಕೆಗೆ ರಾಜ್ಯ ಸರ್ಕಾರ ಯಾವ ಪ್ಯಾಕೇಜ್ ಘೋಷಿಸಲಿದೆ? ಎಂಬುದೂ ಸಹ ಕುತೂಹಲಕ್ಕೆ ಕಾರಣಾಗಿದೆ.

ಜನ ಸಾಮಾನ್ಯರ ಬೇಡಿಕೆ ಏನು?

ರಾಜ್ಯದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಶಿಕ್ಷಿತ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಮತ್ತೊಂದೆಡೆ ದಿನೋಪಯೋಗಿ ವಸ್ತುಗಳ ಬೆಲೆ ದಿನೇ ದಿನೇ ಏರುತ್ತಿದ್ದು ಕೆಳ ಮತ್ತು ಮಧ್ಯಮ ವರ್ಗದ ಜನ ಬದುಕುವುದೇ ದುಸ್ಥರವಾಗಿದೆ. ಪೆಟ್ರೋಲ್ ಬೆಲೆಯಲ್ಲೂ ಸಹ ಪಂಚರಾಜ್ಯಗಳ ಚುನಾವಣೆ ಬಳಿಕ ಏರಿಕೆ ಕಾಣಲಿದೆ ಎನ್ನಲಾಗುತ್ತಿದೆ. ಇದು ನಿಜವಾದರೆ ಜನ ಸಾಮಾನ್ಯರು ಮತ್ತಷ್ಟು ಸಂಕಷ್ಟಕ್ಕೆ ಒಳಗಾಗುವುದು ಖಚಿತ. ಈ ಹಿಂದೆ ಪೆಟ್ರೋಲ್ ಬೆಲೆ ಲೀಟರ್‌ಗೆ 94 ರೂ ಆಗುತ್ತದೆ ಎಂದು ಬೊಮ್ಮಾಯಿ ಹೇಳಿದ್ದರು. ಆದರೆ 100 ರೂಗಿಂತ ಕೆಳಗೆ ಇಳಿದಿಲ್ಲ. ಇದನ್ನು ಹೇಗೆ ಎದುರಿಸುತ್ತಾರೆ ಕಾದು ನೋಡಬೇಕಿದೆ.

ಹೀಗಾಗಿ ರಾಜ್ಯ ಸರ್ಕಾರ ಉದ್ಯೋಗ ಸೃಷ್ಟಿಗೆ ಯಾವ ಕ್ರಮ ತೆಗೆದುಕೊಳ್ಳಲಿದೆ? ಬೆಲೆ ನಿಯಂತ್ರಣಕ್ಕೆ ಮುಂದಾಗಲಿದೆಯೇ? ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಇಳಿಸಲಿದೆಯೇ? ಇದರ ಜೊತೆಗೆ ಯಾವೆಲ್ಲಾ ಅಗತ್ಯ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಲಿದೆ? ಎಂದು ಜನ ಕುತೂಹಲದಿಂದ ಕಾದು ಕುಳಿತಿದ್ದಾರೆ.


ಇದನ್ನೂ ಓದಿ: ‘ಬಿಫೆಸ್‌’ನಲ್ಲಿ ಸಾವರ್ಕರ್‌ ಪ್ರತ್ಯಕ್ಷ; ಮಾದರಿ ವ್ಯಕ್ತಿಗಳ ಪೈಕಿ ‘ಅಂಬೇಡ್ಕರ್‌’ ನಾಪತ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanna nireekshe government aasthi mathe vaapaas barutha antha..,. Aaspathre, vidyasamsthegala fees kadime aagbahuda illa devasthanagalu hechhagbahuda

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...