ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ವಿರುದ್ಧ ಕಿಡಿ ಕಾರಿರುವ ಬಿಹಾರ ವಿಪಕ್ಷ ನಾಯಕ ತೇಜಸ್ವಿ ಪ್ರಸಾದ್ ಯಾದವ್, ಮುಸ್ಲಿಮರಿಂದ ಮತದಾನದ ಹಕ್ಕನ್ನು ಹಿಂಪಡೆಯಲು ಯಾರಿಗೂ ಸಾಧ್ಯವಿಲ್ಲ ಎಂದು ಬಿಹಾರ ವಿಧಾನಸಭೆಯಲ್ಲಿ ಬುಧವಾರ ಹೇಳಿದ್ದಾರೆ.
ಸಮಾಜದಲ್ಲಿ ಶಾಂತಿ ವ್ಯವಸ್ತೆಗೆ ಆರ್‌ಎಸ್‌ಎಸ್ ಭಂಗ ತರುತ್ತಿದೆ ಎಂದು ಆರೋಪಿಸಿರುವ ಅವರು, ”ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಹಿಂದೂ, ಮುಸ್ಲಿಂ, ಸಿಖ್, ಕ್ರೈಸ್ತ, ಜೈನ, ಬೌದ್ಧ ಎಲ್ಲ ಧರ್ಮದ ಜನರು ದೇಶಕ್ಕಾಗಿ ಹೋರಾಡುತ್ತಿದ್ದರು. ಆದರೆ ಆರ್‌ಎಸ್‌ಎಸ್ ಸ್ವಾತಂತ್ರ್ಯಕ್ಕಾಗಿ ಹೋರಾಡಲಿಲ್ಲ. ಈ ಸಂಸ್ಥೆಗೆ ನಮ್ಮ ತ್ರಿವರ್ಣ ಧ್ವಜದ ಮೇಲೆ ನಂಬಿಕೆ ಇಲ್ಲ” ಎಂದು ಆರೋಪಿಸಿದ್ದಾರೆ.
“ನಾಗ್ಪುರದ ಆರ್‌ಎಸ್‌ಎಸ್ ಪ್ರಧಾನ ಕಛೇರಿಯಲ್ಲಿ ಒಮ್ಮೆಯೂ ರಾಷ್ಟ್ರಧ್ವಜವನ್ನು ಹಾರಿಸಿಲ್ಲ. RSS ಸಿದ್ಧಾಂತ ಹೊಂದಿರುವ ಲಾಲ್ ಕೃಷ್ಣ ಅಡ್ವಾಣಿ ತಮ್ಮ ಕೋಮುವಾದಿ ಗುರಿ ಸಾಧಿಸಲು ಬಿಹಾರಕ್ಕೆ ಬಂದಿದ್ದರು. ಲಾಲು ಪ್ರಸಾದ್ ಯಾದವ್ ಅವರ ಗುರಿಯನ್ನು ನಾಶಪಡಿಸಿದಲ್ಲದೇ, ಅವರನ್ನು ಬಂಧಿಸಿದ್ದರು. ಬಿಹಾರದಲ್ಲಿ ನಾವು ಲಾಲು ಪ್ರಸಾದ್ ಯಾದವ್ ಅವರ ಸೈನ್ಯ. ಮುಸ್ಲಿಮರಿಂದ ಮತದಾನದ ಹಕ್ಕನ್ನು ಹಿಂತೆಗೆದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ
“नीतीश जी के एक विधायक ने कहा मुसलमानो के वोटिंग राइट्स ले लो। इस देश की आज़ादी के लिए सब लोगों ने क़ुर्बानी दी- हिंदू, मुस्लिम, सिख, ईसाई। बस RSS ने नहीं दी। किसी के माई के लाल में दम नहीं जो मुसलमान भाइयों से उनका अधिकार छीन सके”- @yadavtejashwi 👏
— Rohini Singh (@rohini_sgh) March 2, 2022
ಮುಸ್ಲಿಮರಿಂದ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಸರ್ಕಾರವನ್ನು ಒತ್ತಾಯಿಸಿದ್ದ ಬಿಜೆಪಿ ನಾಯಕ ಹರಿಭೂಷಣ್ ಠಾಕೂರ್ ವಿರುದ್ಧವೂ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ.
“ಯಾರೂ ದೇಶದ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ನಾನು ಮೊದಲು ಸ್ಪಷ್ಟಪಡಿಸುತ್ತೇನೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನಮ್ಮೊಂದಿಗೆ ಇದ್ದಾಗ, ಅವರು ಅಂತಹ ಅಂಶಗಳ ವಿರುದ್ಧ ಎಚ್ಚರಿಕೆ ನೀಡುತ್ತಿದ್ದರು” ಎಂದು ವಿಧಾನಸಭೆಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿಯಿಂದ ವಿವಿಧ ವರ್ಗದವರಿಗೆ ಕಲ್ಯಾಣ ಯೋಜನೆ ಜಾರಿಗೆ ಸಹಾಯ: ತೇಜಸ್ವಿ ಯಾದವ್


