Homeಮುಖಪುಟಮಣಿಪುರ ಚುನಾವಣೆ: ಕೊನೆಯ ಹಂತದ ಮತದಾನ, 92 ಅಭ್ಯರ್ಥಿಗಳು ಕಣದಲ್ಲಿ

ಮಣಿಪುರ ಚುನಾವಣೆ: ಕೊನೆಯ ಹಂತದ ಮತದಾನ, 92 ಅಭ್ಯರ್ಥಿಗಳು ಕಣದಲ್ಲಿ

- Advertisement -
- Advertisement -

ಮಣಿಪುರದಲ್ಲಿ ಎರಡನೇ ಮತ್ತು ಕೊನೆಯ ಹಂತದ ವಿಧಾನಸಭಾ ಚುನಾವಣೆ ಇಂದು (ಶನಿವಾರ) ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದು, ಈ ಕೊನೆಯ ಹಂತದಲ್ಲಿ 6 ಜಿಲ್ಲೆಗಳ 22 ವಿಧಾನಸಭಾ ಕ್ಷೇತ್ರಗಳಲ್ಲಿ 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೌಬಲ್, ಚಾಂಡೆಲ್, ಉಖ್ರುಲ್, ಸೇನಾಪತಿ, ತಮೆಂಗ್ಲಾಂಗ್ ಮತ್ತು ಜಿರಿಬಾಮ್ ಜಿಲ್ಲೆಗಳಲ್ಲಿ ಈ ಹಂತದಲ್ಲಿ ಒಟ್ಟು 8.38 ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಆಡಳಿತಾರೂಢ ಬಿಜೆಪಿ ಕಠಿಣ ಸವಾಲು ಎದುರಿಸುತ್ತಿರುವ ತೌಬಲ್ ಜಿಲ್ಲೆ ಮತ್ತು ನಾಗಾ ಪ್ರಾಬಲ್ಯದ ಗುಡ್ಡಗಾಡು ಪ್ರದೇಶಗಳಲ್ಲಿಯೂ ಮತದಾನ ನಡೆಯಲಿದೆ. ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ಕೊರೊನಾ ಸುರಕ್ಷತಾ ಮಾರ್ಗಸೂಚಿಗಳನ್ನು ಒಳಗೊಂಡಿರುವ 1,247 ಮತಗಟ್ಟೆಗಳಲ್ಲಿ ಮತದಾನ ನಡೆಸಲು ಎಲ್ಲಾ ವ್ಯವಸ್ಥೆಗಳು ಜಾರಿಯಲ್ಲಿವೆ ಎಂದು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ರಾಜೇಶ್ ಅಗರ್ವಾಲ್ ಶುಕ್ರವಾರ ತಿಳಿಸಿದ್ದರು.

ಇದನ್ನೂ ಓದಿ: ‘ನನ್ನನ್ನು ಕ್ಷಮಿಸಿ’: ವೇದಿಕೆ ಮೇಲೆಯೆ ಕಿವಿ ಹಿಡಿದು ‘ಬಸ್ಕಿ’ ಹೊಡೆದ ಯುಪಿ ಬಿಜೆಪಿ ಶಾಸಕ ಭೂಪೇಶ್ ಚೌಬೆ

ಬಿಜೆಪಿ 22 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಕಾಂಗ್ರೆಸ್ (18), ನ್ಯಾಷನಲ್ ಪೀಪಲ್ಸ್ ಪಾರ್ಟಿ (11), ಜನತಾ ದಳ (ಯುನೈಟೆಡ್) ಮತ್ತು ನಾಗಾ ಪೀಪಲ್ಸ್ ಫ್ರಂಟ್‌ನ ತಲಾ 10 ಅಭ್ಯರ್ಥಿಗಳು ಸೇರಿದಂತೆ 92 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಶನಿವಾರ ನಿರ್ಧಾರವಾಗಲಿದೆ.

ಬೆಳಗ್ಗೆ 9 ಗಂಟೆಯವರೆಗೆ ಶೇಕಡಾ 11.40 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಕಾಂಗ್ರೆಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಒಕ್ರಾಮ್ ಇಬೋಬಿ ಸಿಂಗ್ ಅವರು ತೌಬಲ್‌ನ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ. ಒಕ್ರಾಮ್ ಇಬೋಬಿ ಸಿಂಗ್ ತೌಬಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಎಎನ್‌ಐ ಜೊತೆ ಮಾತನಾಡಿರುವ ಅವರು, ಈ ಬಾರಿ ತೌಬಲ್‌ನಲ್ಲಿ ನಾವು 10 ರಲ್ಲಿ 9 ಸ್ಥಾನಗಳನ್ನು ಗೆಲ್ಲುತ್ತೇವೆ. ಮಣಿಪುರದಲ್ಲಿ ಸಂಪೂರ್ಣ ಬಹುಮತದಿಂದ ಗೆಲ್ಲಲಿದ್ದೇವೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ.

2017 ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.  ಬಿಜೆಪಿ 21 ಸ್ಥಾನಗಳನ್ನು ಪಡೆದಿತ್ತು.  ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್‌ಪಿಪಿ) ಮತ್ತು ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ತಲಾ ನಾಲ್ಕು ಸ್ಥಾನಗಳನ್ನು ಗಳಿಸಿದರೆ, ಲೋಕ ಜನಶಕ್ತಿ ಪಕ್ಷ (ಎಲ್‌ಜೆಪಿ) ಒಂದು ಕ್ಷೇತ್ರವನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಬಿಜೆಪಿ 36.28 ರಷ್ಟು ಮತಗಳನ್ನು ಪಡೆದರೆ, ಕಾಂಗ್ರೆಸ್ 35.11 ರಷ್ಟು ಮತಗಳನ್ನು ಪಡೆದಿತ್ತು. ನಂತರ, ಬಿಜೆಪಿ ಎನ್. ಬಿರೇನ್ ಸಿಂಗ್ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್‌ಪಿಪಿ, ಎನ್‌ಪಿಎಫ್ ಮತ್ತು ಎಲ್‌ಜೆಪಿ ಜೊತೆ ಮೈತ್ರಿ ಮಾಡಿಕೊಂಡಿತ್ತು.


ಇದನ್ನೂ ಓದಿ: ಯುಪಿ ಚುನಾವಣೆ: ಅಯೋಧ್ಯೆಯಲ್ಲಿ ಬದಿಗೆ ಸರಿದ ರಾಮಮಂದಿರ; ವ್ಯಾಪಾರಿಗಳ ಕೂಗು ಮುನ್ನಲೆಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗದ ವಿರುದ್ಧ ಟೀಕೆ ಆರೋಪ: ಸಿಜೆಪಿ ವಕ್ತಾರ ಸೌರವ್ ದಾಸ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್‌ನಲ್ಲಿ ಪಿಐಎಲ್

ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...