Homeಕರ್ನಾಟಕಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಉಕ್ರೇನ್‌ನಿಂದ ಬಂದಿರುವ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು?: ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ

- Advertisement -
- Advertisement -

ಉಕ್ರೇನ್ ದೇಶದಿಂದ ವಾಪಸ್ ಬಂದಿರುವ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್.ಡಿ. ಕುಮಾರಸ್ವಾಮಿ, “‘ಆಪರೇಷನ್ ಗಂಗಾ’ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್ʼನಿಂದ ವಿದ್ಯಾರ್ಥಿಗಳನ್ನು ಏರ್ʼಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು..? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ” ಎಂದಿದ್ದಾರೆ.

“ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು..? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್‌ಗೆ ಕಳುಹಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

“ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ’ ಎಂದು ಆಗ್ರಹಿಸಿದ್ದಾರೆ.

“2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50 ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ..? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ 50% ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ..? ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ವೈದ್ಯೋ ನಾರಾಯಣೋ ಹರಿಃʼ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ʼಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ.ʼ ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು” ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.

ಇತ್ತೀಚೆಗೆ ಉಕ್ರೇನ್‌ನಿಂದ ಹಿಂದಿರುಗುವ ಭಾರತೀಯ ವೈದ್ಯಕೀಯ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸುವಂತೆ ಭಾರತೀಯ ವೈದ್ಯಕೀಯ ಸಂಘ ಮತ್ತು ಛತ್ತೀಸ್‌ಗಢದ ಆರೋಗ್ಯ ಸಚಿವ ಟಿ.ಎಸ್. ಸಿಂಗ್ ದೇವ್ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು.


ಇದನ್ನೂ ಓದಿ: ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...