Homeಕರ್ನಾಟಕಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌, ಸುಲ್ಲಿ ಡೀಲ್ಸ್‌ ವಿಕೃತಿ: ದೆಹಲಿ ಪೊಲೀಸರಿಂದ ಚಾರ್ಜ್‌ಶೀಟ್‌‌ ಸಲ್ಲಿಕೆ

ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟಗಳ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

- Advertisement -
- Advertisement -

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಚಾರಿತ್ರ್ಯ ಹರಣ ಮಾಡಲು ಸೃಷ್ಟಿಸಲಾಗಿದ್ದ “ಬುಲ್ಲಿ ಬಾಯಿ” ಮತ್ತು “ಸುಲ್ಲಿ ಡೀಲ್ಸ್” ಆಪ್‌ಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸುದೀರ್ಘವಾದ ಚಾರ್ಜ್‌‌ಶೀಟ್ ಸಲ್ಲಿಸಿದ್ದಾರೆ.

ದೆಹಲಿ ಪೊಲೀಸ್ ವಿಶೇಷ ಕೋಶದ ಇಂಟೆಲಿಜೆನ್ಸ್ ಫ್ಯೂಷನ್ ಮತ್ತು ಸ್ಟ್ರಾಟೆಜಿಕ್ ಆಪರೇಷನ್ಸ್ (IFSO) ಘಟಕವು ಪ್ರಕರಣಗಳ ತನಿಖೆ ಮಾಡುತ್ತಿದೆ.

ಸುಲ್ಲಿ ಡೀಲ್ಸ್ ಮೊಬೈಲ್ ಅಪ್ಲಿಕೇಶನ್ ವಿಕೃತಿಯು ಜುಲೈ 2021ರಲ್ಲಿ ಬೆಳಕಿಗೆ ಬಂದಿತ್ತು. ಮುಸ್ಲಿಂ ಮಹಿಳೆಯರ ಫೋಟೋಗಳನ್ನು ಪೋಸ್ಟ್‌ ಮಾಡಿ, ಹರಾಜಿಗೆ ಇಡಲಾಗಿತ್ತು. ಆರು ತಿಂಗಳ ಬಳಿಕ ಇಂಥದ್ದೇ ವಿಕೃತಿ ಮೆರೆಯಲಾಗಿತ್ತು.

ಪತ್ರಕರ್ತೆಯೊಬ್ಬರು ದೆಹಲಿ ಪೊಲೀಸರಿಗೆ ದೂರು ನೀಡಿ, “ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ” ಎಂದು ತಿಳಿಸಿದರು. ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಕಿರುಕುಳ ನೀಡಲು ಉದ್ದೇಶಿಸಲಾಗಿದ್ದ ಬುಲ್ಲಿ ಬಾಯ್‌ ಅಪ್ಲಿಕೇಷನ್‌ ಬೆಳಕಿಗೆ ಬಂತು. ಮತ್ತೊಮ್ಮೆ ಯುಎಸ್ ಮೂಲದ ಗಿಟ್‌ಹಬ್ ಪ್ಲಾಟ್‌ಫಾರ್ಮ್‌ನಲ್ಲಿ ಅಪ್ಲಿಕೇಷನ್‌ ರಚಿಸಲಾಗಿತ್ತು.

ಇದನ್ನೂ ಓದಿರಿ: ಬುಲ್ಲಿ ಬಾಯ್ ಪ್ರಕರಣದ ಆರೋಪಿಗಳು ಸುಲ್ಲಿ ಡೀಲ್ಸ್‌ನಲ್ಲಿಯೂ ಭಾಗಿಯಾಗಿದ್ದಾರೆ: ಪೊಲೀಸರು

ಬುಲ್ಲಿ ಬಾಯ್‌ ಅಪ್ಲಿಕೇಶನ್ ರಚಿಸಿದ ನೀರಜ್ ಬಿಷ್ಣೋಯ್ ಎಂಬಾತನನ್ನು ಪ್ರಮುಖ ಆರೋಪಿಯಾಗಿ ಗುರುತಿಸಿ ಜನವರಿ 6ರಂದು ಬಂಧಿಸಲಾಯಿತು. ಸುಲ್ಲಿ ಡೀಲ್ಸ್ ಅಪ್ಲಿಕೇಶನ್‌ನ ಸೃಷ್ಟಿಕರ್ತ ಓಂಕಾರೇಶ್ವರ್ ಠಾಕೂರ್ ಎಂದು ಗುರುತಿಸಿ ಜನವರಿ 8 ರಂದು ದೆಹಲಿ ಪೊಲೀಸರು ಬಂಧಿಸಿದರು.

ಮೂಲಗಳ ಪ್ರಕಾರ, ಮಾರ್ಚ್ 4ರಂದು ದೆಹಲಿಯ ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. ಬುಲ್ಲಿ ಬಾಯ್‌‌ ಪ್ರಕರಣದಲ್ಲಿ 2,000 ಪುಟ, ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ 700 ಪುಟ ಚಾರ್ಜ್‌‌ಶೀಟ್ ಬರೆಯಲಾಗಿದೆ.

ಸುಲ್ಲಿ ಡೀಲ್ಸ್ ಪ್ರಕರಣದಲ್ಲಿ ದೆಹಲಿ ಪೊಲೀಸರ ಸೈಬರ್ ಕ್ರೈಂ ಘಟಕವು ಜುಲೈ 8 ರಂದು ಐಪಿಸಿ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕೆ ಶಿಕ್ಷೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ.

ಅದಾಗ್ಯೂ ಸೆಕ್ಷನ್ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಸಾಮರಸ್ಯ ಕಾಪಾಡುವಲ್ಲಿ ಪೂರ್ವಗ್ರಹ ಹೊಂದಿರುವುದು), 153 ಬಿ (ರಾಷ್ಟ್ರೀಯ ಏಕತೆಗೆ ಸಂಬಂಧಿಸಿದ ಪೂರ್ವಗ್ರಹಗಳು, ಆರೋಪಗಳು, ಸಮರ್ಥನೆಗಳು), 354ಎ(3) (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಶಿಕ್ಷೆ) ಐಟಿ ಕಾಯ್ದೆಯ ಸೆಕ್ಷನ್ 66, 67 ಅಡಿ ಚಾರ್ಜ್‌‌ಶೀಟ್ ಸಲ್ಲಿಕೆಯಾಗಿದೆ.

ಪತ್ರಕರ್ತರು, ಸಮಾಜ ಸೇವಕರು, ವಿದ್ಯಾರ್ಥಿಗಳು, ಪ್ರಸಿದ್ಧ ವ್ಯಕ್ತಿಗಳು ಸೇರಿದಂತೆ ಹಲವಾರು ಮಹಿಳೆಯರ ಚಿತ್ರಗಳನ್ನು ಬುಲ್ಲಿ ಬಾಯ್‌ ಅಪ್ಲಿಕೇಷನ್‌ನಲ್ಲಿ ಪೋಸ್ಟ್‌‌ ಮಾಡಿ ಅವಹೇಳನಕಾರಿ ಬರೆದು ಹರಾಜಿಗಿಡಲಾಗಿತ್ತು.

ಆರೋಪಿ ನೀರಜ್ ಬಿಷ್ಣೋಯ್ ವಿರುದ್ಧ 153ಎ, 153ಬಿ, 354ಎ, 509 ಚಾರ್ಜ್ ಶೀಟ್‌ ಸಲ್ಲಿಕೆಯಾಗಿದೆ. ಬಿಷ್ಣೋಯ್ ಅಸ್ಸಾಂನ ಜೋರ್ಹತ್ ಗ್ರಾಮದ ನಿವಾಸಿಯಾಗಿದ್ದು, ಬಿ.ಟೆಕ್, ಕಂಪ್ಯೂಟರ್ ಸೈನ್ಸ್‌ ವ್ಯಾಸಂಗ ಮಾಡುತ್ತಿದ್ದನು. ಬಿಷ್ಣೋಯ್ ಬಂಧನದ ಎರಡು ದಿನಗಳ ನಂತರ, 25 ವರ್ಷದ ಓಂಕಾರೇಶ್ವರ್‌‌ ಠಾಕೂರ್‌ನನ್ನು ಮಧ್ಯಪ್ರದೇಶದ ಇಂದೋರ್‌ನಿಂದ ಬಂಧಿಸಲಾಯಿತು.


ಇದನ್ನೂ ಓದಿರಿ: ಬುಲ್ಲಿ ಬಾಯ್‌‌ ಪ್ರಕರಣ ಬಿಚ್ಚಿಟ್ಟ ‘ಟ್ರ್ಯಾಡ್ಸ್’ ‘ರಾಯ್ತಾಸ್‌’ ಬಲಪಂಥೀಯ ಗುಂಪುಗಳ ಘರ್ಷಣೆ: ಏನಿದು ವಿವಾದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...