Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!

- Advertisement -
- Advertisement -

ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ ಬೇಡಿಕೆಯಿಡುವುದನ್ನು ಕೇಳಬಹುದಾಗಿದೆ.

ಇದನ್ನು ನ್ಯೂಸ್18 ಕನ್ನಡ ವರದಿ ಮಾಡಿದ್ದು, “ನಾನು ಸರ್ಕಾರಿ ಉದ್ಯೋಗಿಯಾಗಿದ್ದರಿಂದ ನನ್ನ ಡಿಮ್ಯಾಂಡ್ ಗಳು ಇವತ್ತೇ ಈಡೇರಬೇಕೆಂದು ವರ ಹೇಳಿದ್ದಾನೆ. ಇಲ್ಲವಾದ್ರೆ ನಾವು ವಾಪಸ್ ಹೋಗುತ್ತೇವೆ. ವರದಕ್ಷಿಣೆ ನೀಡಲು ಆಗದಿದ್ರೆ, ನಿಮ್ಮ ಯೋಗ್ಯತೆಗೆ ಹೊಂದುವ ಜನರ ಜೊತೆ ಸಂಬಂಧ ಬೆಳೆಸಬೇಕು ಎಂದು ಸೊಕ್ಕಿನ ಮಾತುಗಳನ್ನು ಆಡಿದ್ದಾನೆ” ತನ್ನ ವೆಬ್‌ಸೈಟ್‌ನಲ್ಲಿ ವರದಿ ಮಾಡಿದೆ.

ನ್ಯೂಸ್ 18 ಕನ್ನಡದ ಟ್ವಿಟರ್ ಮತ್ತು ಲೇಖನದ ಆರ್ಕೈವ್ ಲಿಂಕ್‌ಅನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವಿಡಿಯೊದಲ್ಲಿ ಮಾತನಾಡಿರುವ ವರನೂ, “ನನಗೆ ಇದುವರೆಗೂ ಕ್ಯಾಶ್ ಸಿಕ್ಕಿಲ್ಲ. ಮಾತುಕತೆಯಂತೆ ತೀರ್ಮಾನಿಸಿದ್ದ ಯಾವ ವಸ್ತುಗಳು ಇನ್ನು ನಮಗೆ ಸೇರಿಲ್ಲ. ಒಂದು ಚೈನ್ ಸಹ ಕೊಡ್ತೀವಿ ಅಂತ ಹೇಳಿದ್ದರು. ಅದನ್ನು ಸಹ ಕೊಟ್ಟಿಲ್ಲ. ಕೊಟ್ಟ ಮಾತನ್ನು ತಪ್ಪಿದ್ದಾರೆ” ಎಂದು ಹೇಳಿದ್ದಾರೆ.

ಇದೇ ವೇಳೆ ವಿಡಿಯೋ ಮಾಡುತ್ತಿರುವ ವ್ಯಕ್ತಿ, “ನೀವೆಲ್ಲ ಓದಿದವರು. ಹೀಗೆ ಬಹಿರಂಗವಾಗಿ ವರದಕ್ಷಿಣೆ ಕೇಳೋದು ಎಷ್ಟು ಸರಿ” ಎಂದು ಪ್ರಶ್ನೆ ಮಾಡುತ್ತಾರೆ. ಆದರೆ ವರ ಮಾತ್ರ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳುತ್ತಾನೆ. ಅದಕ್ಕೆ, ನಿಮಗೆ ಹಣ ಬೇಕಿದ್ರೆ ಇಲ್ಲಿಗೆ ಯಾಕೆ ಬರಬೇಕಿತ್ತು ಎಂದು ವ್ಯಕ್ತಿ ಪ್ರಶ್ನೆ ಮಾಡುತ್ತಾರೆ. ಈ ವೇಳೆ ವರನೂ ಫೋನ್‌ ಮಾಡಿದಾಗ ಎಲ್ಲವೂ ರೆಡಿ ಇದೆ ಬನ್ನಿ ಅಂತ  ಹೇಳಿದ್ದಾರೆ. ಆದ್ರೆ ಈಗ ಇಲ್ಲ ಅಂತ ಹೇಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಮನವೊಲಿಸಲು ಮುಂದಾದ ವಧು

ಈ ವೇಳೆ ಪಕ್ಕದಲ್ಲಿ ನಿಂತಿದ್ದ ವಧು, ನಿಮಗೆ ಒಂದು ಲಕ್ಷ ನಗದು ಮತ್ತು ಚಿನ್ನ ಸಹ ಸಿಗುತ್ತೆ ಎಂದು ಮನವೊಲಿಸಲು ಪ್ರಯತ್ನ ಮಾಡೋದನ್ನು ಕಾಣಬಹುದು. ಕೊನೆಗೆ ವರ ನಾನು ನಮ್ಮ ತಂದೆ ಜೊತೆ ಮಾತನಾಡಬೇಕು ಎಂದು ವೇದಿಕೆಯಿಂದ ಕೆಳಗೆ ಇಳಿಯುತ್ತಾನೆ.

ಐಪಿಎಸ್ ಅಧಿಕಾರಿ ದೀಪಾಂಶು ಕಬ್ರಾ ಕೂಡ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಸುದ್ದಿಯನ್ನು ಹಲವು ಮುಖ್ಯವಾಹಿನಿಯ ಮಾಧ್ಯಮಗಳೂ ಕೂಡ ವೀಡಿಯೊ ಬಗ್ಗೆ ವರದಿಗಳನ್ನು ಪ್ರಕಟಿಸಿವೆ.

ತಾನು ಕೇಳಿದ್ದಕಿಂತ ಕಡಿಮೆ ವರದಕ್ಷಿಣೆ ನೀಡಿದ ಕಾರಣಕ್ಕೆ ವರನು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಪ್ರತಿಪಾದಿಸಿ The Indian ExpressZee NewsNDTVDNA IndiaTimes of IndiaLokmatIndia.comIBC 24News18 Kannada ಕೂಡ ವೀಡಿಯೊ ಬಗ್ಗೆ ವರದಿ ಮಾಡಿವೆ.

 

 

ಅಂತರಾಷ್ಟ್ರೀಯ ಮಹಿಳಾ ದಿನದ ದಿನದಂದು The Times of India ಕೂಡ ವರದಿಯನ್ನು ಮಾಡಿದ್ದು, “ನೀವು ಅವರಿಗೆ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತೀರಾ” ಎಂಬ ಪ್ರಶ್ನೆಯನ್ನು ಹಾಕಿದೆ. “ತನ್ನ ಮದುವೆಗಾಗಿ ಅಲಂಕೃತಗೊಂಡ ವರನ ಪಕ್ಕದಲ್ಲಿ ಕುಳಿತು ಹಸನ್ಮುಖಿಯಾಗಿ ಕಂಗೊಳಿಸಬೇಕಿದ್ದ ಅವಳು, ವರದಕ್ಷಿಣೆಯ ಸಾಧನವಾಗಿದ್ದಾಳೆ. ಹಾಗಾಗಿ ಅವನು ಅವಳನ್ನು ತನ್ನ ಹೆಂಡತಿಯಾಗಿ ಸ್ವೀಕರಿಸುತ್ತಾನೆ. ಆತ ತಾನು ಗಂಡು ಎನ್ನುವ ಅಹಂನಿಂದಾಗಿ ದರ್ಪ ತೋರಿಸುತ್ತಿದ್ದಾನೆ. ಇದು 2022 ರಲ್ಲಿ ಭಾರತದ ಕೆಲವು ಮಹಿಳೆಯರ ಸ್ಥಿತಿಯಾಗಿದೆ. ಇದನ್ನು ನೀವು ಸಮ್ಮತಿಸುವಿರಾ?” ಎಂದು ವರದಿ ಮಾಡಿದೆ.

 

ಈ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವೈರಲ್ ಆಗಿರುವ ಕಾರಣ ಮತ್ತುಸುದ್ದಿ ಮಾಧ್ಯಮಗಳು ವರದಿ ಮಾಡಿವೆ, ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂದು ವರದಿಯಲ್ಲಿ ಹೇಳಿಲ್ಲ. ಈ ಹಿನ್ನಲೆಯಲ್ಲಿ ಇದರ ಸತ್ಯಾಸತ್ಯೆಗಳನ್ನು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್:

ಕೀ ವರ್ಡ್ ಸಹಾಯದ ಮೂಲಕ ಸುದ್ದಿಯ ವಿವರಗಳನ್ನು ಸರ್ಚ್ ಮಾಡಲಾಗಿದ್ದು, ಈ ವೀಡಿಯೊವನ್ನು ಫೆಬ್ರವರಿ 25 ರಂದು ‘ದಿವ್ಯ ವಿಕ್ರಮ್‘ ಎಂಬ ಫೇಸ್‌ಬುಕ್ ಪುಟದಿಂದ ಪೋಸ್ಟ್ ಮಾಡಲಾಗಿದೆ ಮತ್ತು 70 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ . ಈ ಫೇಸ್‌ಬುಕ್ ಅಕೌಂಟ್‌ನಿಂದ ಇಂತಹ ಅನೇಕ ವೀಡಿಯೊಗಳನ್ನು ಪೋಸ್ಟ್ ಮಾಡಿರುವುದು ಕಂಡುಬಂದಿದೆ.

‘ವಿಕ್ರಮ್ ಮಿಶ್ರಾ’ ಎಂಬ ವ್ಯಕ್ತಿಯು ಈ ವಿಡಿಯೊವನ್ನು ಕ್ರಿಯೇಟ್ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕ ನಂತರ ಅವರನ್ನು ಸಂಪರ್ಕಿಸಲಾಗಿದ್ದು, ಅವರು ತಮ್ಮ ತಂಡದೊಂದಿಗೆ ‘ಜೈ ಮಿಥಿಲಾ’ ಎಂಬ ಚಾನಲ್ ಅನ್ನು ನಡೆಸುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮದುವೆಯ ವಿಡಿಯೋದಲ್ಲಿ ಕಾಣುತ್ತಿರುವ ವಧು ಮತ್ತು ವರ ಇಬ್ಬರೂ ಕಲಾವಿದರು (ನಟರು). ಅವರ ಹೆಸರು ಅಮಿತ್ ಮತ್ತು ರಾಣಿ ಎಂದು ತಿಳಿಸಿದ್ದಾರೆ.

ವಿಕ್ರಮ್ ಮಿಶ್ರಾ ಅವರ ಸಹಾಯದಿಂದ ಅಮಿತ್ ಮತ್ತು ರಾಣಿ ಅವರನ್ನು ಸಂಪರ್ಕಿಸಿದಾಗ, ತಾವು ನಟರಾಗಿದ್ದು, ಅಂತಹ ಅನೇಕ ವೀಡಿಯೊಗಳಲ್ಲಿ ಕಲಾವಿದರಾಗಿ ಕೆಲಸ ಮಾಡಿದ್ದೇವೆ ಎಂದು ದೃಢಪಡಿಸಿದ್ದಾರೆ.

ಈ ವಿಡಿಯೋವನ್ನು ಕೇವಲ ತಮ್ಮ ನಟನೆಯ ಸಾಮರ್ಥ್ಯವನ್ನು ನಿರೂಪಿಸಲು ತಾವೇ ಸ್ವತಃ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಅವರ ವೀಡಿಯೊವನ್ನು ನೈಜ ಘಟನೆ ಎಂದು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ನಿಜವಲ್ಲ. ಅಮಿತ್ ಮತ್ತು ರಾಣಿ ಪರಸ್ಪರ ಮದುವೆಯಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಆಲ್ಟ್‌ ನ್ಯೂಸ್‌ ತನ್ನ ವರದಿಯಲ್ಲಿ ಹೇಳಿದೆ.

ವಿಡಿಯೊವನ್ನುಮಾಡಿದ್ದು ನಟನೆಗಾಗಿ 

ಮಾರ್ಚ್ 8 ರಂದು ‘ದಿವ್ಯ ವಿಕ್ರಮ್’ ಫೇಸ್‌ಬುಕ್ ಅಕೌಂಟ್‌ನಿಂದ ಅಮಿತ್ ಮತ್ತು ರಾಣಿಯ ಎರಡು ವೀಡಿಯೊಗಳನ್ನು ಪೋಸ್ಟ್ ಮಾಡಲಾಗಿದೆ. ಮೊದಲ ವೀಡಿಯೊದಲ್ಲಿ, ವರನು  ಮದುವೆ ಮಂಟಪಕ್ಕೆ ಕುಡಿದ ಅಮಲಿನಲ್ಲಿ ಬರುತ್ತಾನೆ ಆಗ ವಧು ಮದುವೆಯಾಗಲು  ನಿರಾಕರಿಸುತ್ತಾಳೆ. ಎರಡನೇ ವಿಡಿಯೊದಲ್ಲಿ ವಧು ಮತ್ತು ವರ ಪರಸ್ಪರ ಸಂತೋಷದಿಂದ ಹಾರ ಬದಲಾಯಿಸಿಕೊಳ್ಳುವ ಮೂಲಕ ಮದುವೆ ಆಗುವುದನ್ನು ಕಾಣಬಹುದು. ಇದೊಂದು ನಟನೆಯ ವಿಡಿಯೊ ಆಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ ಕೇವಲ ತಮ್ಮ ನಟನೆಯ ಹವ್ಯಾಸಕ್ಕಾಗಿ ಮಾಡಲಾದ ವಿಡಿಯೊವನ್ನು ಸಾಮಾಜಿಕ ಮಾದ್ಯಗಳಲ್ಲಿ ವೈರಲ್ ಮಾಡುವ ಮೂಲಕ ನೈಜ ಘಟನೆ ಎಂದು ಬಿಂಬಿಸಲಾಗಿದೆ. ಅದೂ ಸಾಲದು ಎಂಬಂತೆ ಇದನ್ನು ನ್ಯೂಸ್‌18 ಕನ್ನಡದಂತಹ ಮುಖ್ಯವಾಹಿನಿಗಳು ಕೂಡ ಗಂಭೀರ ಸ್ವರೂಪದ ಸುದ್ದಿ ಎಂಬಂತೆ ವರದಿ ಮಾಡಿವೆ. ಆದರೆ ಇದು ಸತ್ಯ ಘಟನೆಯಲ್ಲ ಇದೊಂದು ನಟನೆಯ ವಿಡಿಯೊ ಆಗಿದೆ.

ಕೃಪೆ : ಆಲ್ಟ್‌ನ್ಯೂಸ್

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ, ಅದು ನಕಲಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...