Homeಮುಖಪುಟಯುಪಿ-ವಾರಣಾಸಿಯ ‘ಇವಿಎಂ ಕಳ್ಳತನ’ ವಿವಾದ: ಅಧಿಕಾರಿ ಅಮಾನತು ಸಾಧ್ಯತೆ

ಯುಪಿ-ವಾರಣಾಸಿಯ ‘ಇವಿಎಂ ಕಳ್ಳತನ’ ವಿವಾದ: ಅಧಿಕಾರಿ ಅಮಾನತು ಸಾಧ್ಯತೆ

- Advertisement -
- Advertisement -

ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ತರಬೇತಿ ಇವಿಎಂಗಳ ಸಾಗಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕುರಿತು ವಾರಣಾಸಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌.ಕೆ. ಸಿಂಗ್ ವಿರುದ್ಧ ಕ್ರಮಕ್ಕೆ ಭಾರತೀಯ ಚುನಾವಣಾ ಆಯೋಗ ಆದೇಶಿಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ ತಿಳಿಸಿವೆ. ನಿನ್ನೆ ಆಗಿರುವ ತಪ್ಪನ್ನು ನಗರ ಪೊಲೀಸ್ ಕಮಿಷನರ್ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: ಗೋವಾ: ಅಧಿಕಾರಕ್ಕಾಗಿ ಟಿಎಂಸಿ ಮಿತ್ರ ಪಕ್ಷ ಎಂಜಿಪಿ ಜೊತೆ ಚರ್ಚೆ ಆರಂಭಿಸಿದ ಬಿಜೆಪಿ!

ಎನ್‌.ಕೆ. ಸಿಂಗ್ ಅವರ ಮೇಲಾಧಿಕಾರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ ಅವರು ಇಂದು ನೀಡಿರುವ ಹೇಳಿಕೆಯಲ್ಲಿ,“ಇವಿಎಂಗಳನ್ನು ಇಂದು ಬೆಳಿಗ್ಗೆ ಸ್ಥಳಾಂತರಿಸಬೇಕಾಗಿತ್ತು. ಆದರೆ ಈಗ ಅಮಾನತುಗೊಂಡಿರುವ ಅಧಿಕಾರಿ, ಯಾರಿಗೂ ತಿಳಿಸದೆ ಹಿಂದಿನ ರಾತ್ರಿ ಅವುಗಳನ್ನು ಹೊರತೆಗೆದಿದ್ದಾರೆ” ಎಂದು ತಿಳಿಸಿದ್ದಾರೆ.

ವಾರಣಾಸಿಯಲ್ಲಿ ನಿನ್ನೆ ಪಕ್ಷದ ಕಾರ್ಯಕರ್ತರು ಮತದಾನ ಯಂತ್ರಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಅಡ್ಡಗಟ್ಟಿದ ನಂತರ ಸಮಾಜವಾದಿ ಪಕ್ಷವು “ಮತದಾನವನ್ನು ಕದಿಯಾಲಾಗುತ್ತಿದೆ” ಎಂದು ಆರೋಪಿಸಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು 2017 ರಲ್ಲಿ ಸುಮಾರು 50 ಸ್ಥಾನಗಳನ್ನು ಬಿಜೆಪಿ 5000 ಕ್ಕಿಂತ ಕಡಿಮೆ ಮತಗಳ ಅಂತರದಿಂದ ಗೆದ್ದುಕೊಂಡಿತ್ತು ಎಂದು ಗಮನಸೆಳೆದಿದ್ದರು. ವಿವಿಧ ಜಿಲ್ಲೆಗಳಿಂದ ಇವಿಎಂ ಅನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಬರುತ್ತಿದ್ದು, ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದರು.

ಇದನ್ನೂ ಓದಿ: Poll of Exit polls 2022: ಉತ್ತರ ಪ್ರದೇಶದಲ್ಲಿ ಬಿಜೆಪಿ, ಪಂಜಾಬ್‌ನಲ್ಲಿ ಆಪ್ ಅಧಿಕ್ಕಾರಕ್ಕೇರುವ ಸಾಧ್ಯತೆ

ಇಂದು, ಸಮಾಜವಾದಿ ಪಕ್ಷವು ವಾರಣಾಸಿಯ ಕಮಿಷನರ್ ದೀಪಕ್ ಅಗರ್ವಾಲ್ ಅವರು ಕರ್ತವ್ಯದಲ್ಲಿ ಲೋಪವಾಗಿರುವುದನ್ನು ಒಪ್ಪಿಕೊಂಡಿರುವ ವೀಡಿಯೊವನ್ನು ಟ್ವೀಟ್ ಮಾಡಿದೆ. ಆದರೆ, ಅಗರ್ವಾಲ್ ಅವರು ವಿಡಿಯೊದಲ್ಲಿ ನಿರ್ದಿಷ್ಟ ಲೋಪಗಳನ್ನು ಉಲ್ಲೇಖಿಸಿಲ್ಲ. ಪ್ರಸ್ತುತ ಯಂತ್ರಗಳು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿತ್ತು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

“ನೀವು ಇವಿಎಂಗಳ ಕೊಂಡೊಯ್ಯುದರ ಪ್ರೋಟೋಕಾಲ್ ಬಗ್ಗೆ ಮಾತನಾಡಿದರೆ, ಪ್ರೋಟೋಕಾಲ್‌ನಲ್ಲಿ ಲೋಪವಾಗಿದೆ, ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ನಾನು ನಿಮಗೆ ಖಾತರಿ ನೀಡಬಲ್ಲೆ, ಮತದಾನದಲ್ಲಿ ಬಳಸುವ ಯಂತ್ರಗಳನ್ನು ತೆಗೆದುಕೊಂಡು ಹೋಗುವುದು ಅಸಾಧ್ಯ” ಎಂದು ಅವರು ವೀಡಿಯೊದಲ್ಲಿ ಹೇಳಿರುವುದು ಕೇಳಿಬರುತ್ತಿದೆ.

ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಸಮಾಜವಾದಿ ಪಕ್ಷವು ಪ್ರೋಟೋಕಾಲ್ ಅನ್ನು ಅನುಸರಿಸಿಲ್ಲ ಎಂದು ಒಪ್ಪಿಕೊಳ್ಳಲಾಗಿದೆ ಎಂದು ಹೇಳಿದೆ.

“ತರಬೇತಿ ಅಥವಾ ಮೀಸಲು ವಿದ್ಯುನ್ಮಾನ ಮತಯಂತ್ರಗಳನ್ನು ಸ್ಥಳಾಂತರಿಸಿದಾಗ, ಅಭ್ಯರ್ಥಿಗಳು ಅಥವಾ ಪಕ್ಷದ ಕಾರ್ಯಕರ್ತರಿಗೆ ತಿಳಿಸಬೇಕು ಮತ್ತು ಇದನ್ನು ಮಾಡಲಾಗಿಲ್ಲ” ಎಂದು ಅಖಿಲೇಶ್‌ ಯಾದವ್‌ ಹೇಳಿದ್ದಾರೆ.

ವಿವಾದದ ಬಗ್ಗೆ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ನ್ಯಾಯಾಲಯಕ್ಕೆ ಹೋಗುವುದಾಗಿ ಹೇಳಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....