HomeಮುಖಪುಟMANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ...

MANIPUR ELECTION RESULTS | ಸರಳ ಬಹುಮತದ ಮೂಲಕ ಮಣಿಪುರ ಬಿಜೆಪಿಯ ತೆಕ್ಕೆಗೆ; ಕಾಂಗ್ರೆಸ್ ಹೀನಾಯ ಸೋಲು!

- Advertisement -
- Advertisement -

MANIPUR ELECTION RESULTS | 60 ವಿಧಾನಸಭಾ ಕ್ಷೇತ್ರಗಳಿರುವ ಮಣಿಪುರದ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಸರಳ ಬಹುಮತ ಗಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅತಿದೊಡ್ಡ ಸೋಲನ್ನು ಅನುಭವಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಎನ್. ಲೋಕೇನ್ ಸಿಂಗ್ ಅವರು ನಂಬೋಲ್‌ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ತೌನೊಜಾಮ್ ಬಸಂತ ಕುಮಾರ್ ಸಿಂಗ್ ವಿರುದ್ಧ ಸೋಲು ಕಂಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಿರೆನ್ ಸಿಂಗ್ ಅವರು ಹೈಂಗಾಗ್‌ ಕ್ಷೇತ್ರದಲ್ಲಿ ಜಯಗಳಿಸಿದ್ದರೆ, ಉಪಮುಖ್ಯಮಂತ್ರಿ ವೈ. ಜಯ್‌ಕುಮಾರ್ ಸಿಂಗ್ ಅವರು ಉರಿಪೋಕ್‌ನಲ್ಲಿ ಬಿಜೆಪಿಯ ಖ್ವೈರಕ್‌ಪಂ ರಘುಮಣಿ ಸಿಂಗ್ ವಿರುದ್ಧ ಸೋತಿದ್ದು, ಈ ಮೂಲಕ ಎನ್‌ಪಿಪಿಗೂ ಹೊಡೆತ ಬಿದ್ದಿದೆ. ಒಟ್ಟು 60 ಕ್ಷೇತ್ರಗಳ ಮಣಿಪುರದಲ್ಲಿ ಆಡಳಿತ ನಡೆಸಲು 31 ಕ್ಷೇತ್ರಗಳ ಅಗತ್ಯವಿದೆ.

ಬಿಜೆಪಿ ರಾಜ್ಯದಲ್ಲಿ 32 ಕ್ಷೇತ್ರಗಳನ್ನು ಗೆದ್ದುಕೊಂಡು ಸರಳ ಬಹುಮತವನ್ನು ಪಡೆದುಕೊಂಡಿದೆ. ಈ ಹಿಂದಿನ ಅತ್ಯಂತ ದೊಡ್ಡ ಪಕ್ಷವಾದ ಕಾಂಗ್ರೆಸ್ 5 ಕ್ಷೇತ್ರವನ್ನು ಮಾತ್ರ ಗೆದ್ದುಕೊಂಡಿದ್ದು, ಹೀನಾಯ ಸೋಲನ್ನು ಅನುಭವಿಸಿದೆ.

ಈ ನಡುವೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು 6 ಕ್ಷೇತ್ರಗಳಲ್ಲಿ ಜಯಗಳಿಸಿದೆ.

ಬಿಜೆಪಿಯ ಜೊತೆಗೆ ಹಿಂದೆ ಮೈತ್ರಿ ಮಾಡಿಕೊಂಡಿದ್ದ ಪಕ್ಷಗಳಾದ ನಾಗಾ ಪೀಪಲ್ಸ್‌ ಫ್ರಂಟ್‌ (NPF) ಈಗಾಗಲೇ 5 ಕ್ಷೇತ್ರವನ್ನು ಗೆದ್ದುಕೊಂಡಿದೆ. ನ್ಯಾಶನಲ್‌ ಪೀಪಲ್ಸ್‌ ಪಾರ್ಟಿ (NPP) 7 ಕ್ಷೇತ್ರವನ್ನು ಗೆದ್ದುಕೊಂಡಿದ್ದು ರಾಜ್ಯದ ಎರಡನೆ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಪ್ರಮುಖ ವಿರೋಧ ಪಕ್ಷವಾಗಿ ಆಯ್ಕೆಯಾಗಿದೆ. ಈ ಹಿಂದೆ ಈ ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತ್ತು.

2017ರ ಮಣಿಪುರ ವಿಧಾನಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಬಿಜೆಪಿ 21 ಕ್ಷೇತ್ರಗಳನ್ನು ಗೆದ್ದುಕೊಂಡರೆ, NPF ಮತ್ತು NPP ತಲಾ ನಾಲ್ಕು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು. ಪಕ್ಷೇತರ ಮತ್ತು ಇತರೆ ಪಕ್ಷಗಳು ಮೂರು ಕ್ಷೇತ್ರಗಳನ್ನು ಗೆದ್ದುಕೊಂಡಿತ್ತು.


ಮಣಿಪುರದ ವಿಧಾನಸಭೆ ಚುನಾವಣೆಯ ಅಂತಿಮ ಫಲಿತಾಂಶ ಕೆಳಗಿನಂತಿದೆ.

ರಾಜ್ಯದಲ್ಲಿ 60 ಕ್ಷೇತ್ರಗಳಿದ್ದು, ಬಹುಮತಕ್ಕೆ 31 ಸ್ಥಾನಗಳ ಸಾಕಾಗುತ್ತವೆ. 

  • ಬಿಜೆಪಿ – 32 ಗೆಲುವು
  • NPP – 7 ಗೆಲುವು
  • NPF  5 ಗೆಲುವು
  • ಕಾಂಗ್ರೆಸ್5 ಗೆಲುವು
  • JDU 6 ಗೆಲುವು
  • ಪಕ್ಷೇತರ – 3 ಗೆಲುವು
  • KPA – 2 ಗೆಲುವು

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...