Homeಮುಖಪುಟಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

- Advertisement -
- Advertisement -

ಮಾಜಿ ರಕ್ಷಣಾ ಸಚಿವ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಪಣಜಿ ವಿಧಾನಸಭಾ ಕ್ಷೇತ್ರದಿಂದ 800 ಮತಗಳಿಂದ ಸೋಲು ಅನುಭವಿಸಿದ್ದಾರೆ. ಉತ್ಪಲ್ ಪರಿಕ್ಕರ್ 2022 ರ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಪಣಜಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಈ ಕ್ಷೇತ್ರದಿಂದ ಬಿಜೆಪಿಯ ಅಟಾನಾಸಿಯೊ ಮಾನ್ಸೆರೇಟ್ (ಬಾಬುಶ್‌) ಗೆದ್ದಿದ್ದಾರೆ. ಆದರೆ, ಕಡಿಮೆ ಅಂತರದಿಂದ ಗೆದ್ದಿರುವ ಕಾರಣ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿಲ್ಲ. ಬಿಜೆಪಿ ಬೆಂಬಲಿಗರು ತನಗೆ ಮತ ಹಾಕಲಿಲ್ಲ ಎಂದು ಆರೋಪ ವ್ಯಕ್ತಪಡಿಸಿದ್ದಾರೆ.

ಉತ್ಪಲ್ ಪರಿಕ್ಕರ್ ಅವರು ಭಾರತದ ಮಾಜಿ ರಕ್ಷಣಾ ಸಚಿವ ಮತ್ತು ಗೋವಾ ಮುಖ್ಯಮಂತ್ರಿ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರರಾಗಿದ್ದಾರೆ. ಉತ್ಪಲ್ ತಮ್ಮ ತಂದೆಯ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಪಣಜಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಪಣಜಿಯಲ್ಲಿ ಟಿಕೆಟ್ ನೀಡದ ಕಾರಣ ಈ ಹಿಂದೆ ಬಿಜೆಪಿಯಿಂದ ಹೊರ ಬಂದಿದ್ದರು.

ಇದನ್ನೂ ಓದಿ: Uttar Pradesh Elections Result | ಉತ್ತರ ಪ್ರದೇಶ: ರೈತ ಹೋರಾಟದ ಕೇಂದ್ರ ಲಖಿಂಪುರದ 8 ಕ್ಷೇತ್ರದಲ್ಲಿ 6 BJP ಮುನ್ನಡೆ | Live

ಮೂರು ಬಾರಿ ಗೋವಾದ ಮುಖ್ಯಮಂತ್ರಿಯಾಗಿದ್ದ ಮನೋಹರ್ ಪರಿಕ್ಕರ್ ಅವರು 25 ವರ್ಷಗಳ ಕಾಲ ಪಣಜಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. 2019 ರಲ್ಲಿ ಅವರ ಮರಣದ ನಂತರ ನಡೆದ ಉಪಚುನಾವಣೆಯಲ್ಲಿ, ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಅವರ ಬಹುಕಾಲದ ಪ್ರತಿಸ್ಪರ್ಧಿ ಮಾನ್ಸೆರೇಟ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದರು. ಬಳಿಕ ಮಾನ್ಸೆರೇಟ್ ಬಿಜೆಪಿಗೆ ಪಕ್ಷಾಂತರವಾದರು.

ಶಿವಸೇನೆ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ (ಎಎಪಿ) ಉತ್ಪಲ್ ಪರಿಕ್ಕರ್ ಅವರನ್ನು ಬಹಿರಂಗವಾಗಿ ಬೆಂಬಲಿಸಿತ್ತು. ಶಿವಸೇನೆಯ ಸಂಜಯ್ ರಾವುತ್ ಅವರು ಉತ್ಪಲ್ ಪರಿಕ್ಕರ್ ಅವರ ತಂದೆಗೆ ಗೌರವ ಸಲ್ಲಿಸುವ ಸಲುವಾಗಿ ಬಿಜೆಪಿಯೇತರ ಪಕ್ಷಗಳಿಗೆ ಅಭ್ಯರ್ಥಿಯನ್ನು ಕಣಕ್ಕಿಳಿಸದಂತೆ ಮನವಿ ಮಾಡಿದ್ದರು.

ಬಿಜೆಪಿಯು ಗೋವಾದ 40 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಮುನ್ನಡೆಯೊಂದಿಗೆ ಗೆಲುವಿನತ್ತ ಸಾಗುತ್ತಿದೆ. ಈಗಾಗಲೇ ವಿಜೇತರಾಗಿ ಹೊರಹೊಮ್ಮಿದ ಮೂವರು ಸ್ವತಂತ್ರ ಅಭ್ಯರ್ಥಿಗಳು ಬಿಜೆಪಿಗೆ ಬೆಂಬಲ ನೀಡುವುದಾಗಿ ವಾಗ್ದಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.


ಇದನ್ನೂ ಓದಿ: ಅತಂತ್ರ ವಿಧಾನಸಭೆಯತ್ತ ಗೋವಾ: ಯಾರಿಗೂ ಬಹುಮತವಿಲ್ಲದಿದ್ದರೂ ಬಿಜೆಪಿ ಮೇಲುಗೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...