Goa Election Results | 40 ವಿಧಾನಸಭಾ ಕ್ಷೇತ್ರವಿರುವ ಗೊವಾದ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಆದರೆ ಬಿಜೆಪಿ ರಾಜ್ಯದ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಸಮೀಕ್ಷೆಗಳು ಹೇಳಿದ್ದ ಹಿನ್ನಲೆಯಲ್ಲಿ ಆಡಳಿತರೂಢ ಪಕ್ಷವಾದ ಬಿಜೆಪಿ ತನ್ನ ಮಾಜಿ ಮಿತ್ರ ಪಕ್ಷವಾದ ಮಹಾರಾಷ್ಟ್ರವಾದಿ ಗೋಮಾಂತಕ್ ಪಕ್ಷ(ಎಂಜಿಪಿ) ಜೊತೆಗೆ ಕಳೆದ ಎರಡು ದಿನಗಳಿಂದ ಮಾತುಕತೆ ನಡೆಸುತ್ತಿತ್ತು.
ಚುನಾವಣೆಯಲ್ಲಿ ಬಿಜೆಪಿಯ ಹಿರಿಯ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಬಿಜೆಪಿಗೆ ರಾಜೀನಾಮೆ ನೀಡಿ ಪಕ್ಷೇತರವಾಗಿ ಸ್ಪರ್ಧಿಸಿದ್ದರೂ, ಅಲ್ಪ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ.
ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅತ್ಯಂತ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಅದಕ್ಕೆ ಅಧಿಕಾರ ಹಿಡಿಯಲು ಆಗಿರಲಿಲ್ಲ. ಕೊನೆಗೆ ಕಾಂಗ್ರೆಸ್‌ನ ಮುಕ್ಕಾಲು ಪಾಲು ಶಾಸಕರು ಪಕ್ಷಾಂತರವಾಗಿದ್ದರು.
40 ಕ್ಷೇತ್ರಗಳಿರುವ ರಾಜ್ಯದಲ್ಲಿ ಬಹುಮತಕ್ಕೆ 21 ಕ್ಷೇತ್ರಗಳ ಅಗತ್ಯವಿದೆ. ಚುನಾವಣೆಯಲ್ಲಿ ಬಿಜೆಪಿ 20 ಕ್ಷೇತ್ರಗಳನ್ನು ಗೆದ್ದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಾಂಗ್ರೆಸ್ 11 ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಅವರ ಮೈತ್ರಿ ಪಕ್ಷವಾದ ಗೋವಾ ಫಾರ್ವರ್ಡ್ (MFP) ಪಕ್ಷ 1 ಕ್ಷೇತ್ರವನ್ನು ಗೆದ್ದುಕೊಂಡಿದೆ.
ಈ ನಡುವೆ ಟಎಂಟಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (MGP) 2 ಕ್ಷೇತ್ರಗಳನ್ನು ಗೆದ್ದುಕೊಂಡಿದೆ. ಆದರೆ ಟಿಎಂಸಿಗೆ ಯಾವುದೆ ಸ್ಥಾನಗಳು ಲಭ್ಯವಾಗಿಲ್ಲ.
ರಾಜ್ಯದ 39 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಿದ್ದ ಆಮ್ ಆದ್ಮಿ ಪಕ್ಷ (AAP) ಕೇವಲ ಎರಡು ಸ್ಥಾನಗಳನ್ನು ಮಾತ್ರವೆ ಪಡೆದುಕೊಂಡಿದೆ. ಜೊತೆಗೆ ಆಮ್ ಆದ್ಮಿ ಪಕ್ಷದ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಒಬ್ಬರು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಇದಲ್ಲದೆ ಗೋವನ್ ರೆವಲ್ಯೂಷನ್ ಪಾರ್ಟಿ(GRP) 1 ಕ್ಷೇತ್ರವನ್ನು ಗೆದ್ದುಕೊಂಡಿದ್ದು, ಇನ್ನಿಬ್ಬರು ಪಕ್ಷೇತರ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸಿ ಗೆಲುವು ಕಂಡಿದ್ದಾರೆ.
ಗೋವಾದ ಸಂಪೂರ್ಣ ಫಲಿತಾಂಶ ಕೆಳಗಿನಂತಿದೆ.
40 ಕ್ಷೇತ್ರಗಳಿದ್ದು, ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ.
ಬಿಜೆಪಿ – 20
ಕಾಂಗ್ರೆಸ್ – 11
GFP – 1
MGP – 2
AAP – 2
RGP – 1
ಪಕ್ಷೇತರ – 3
ಇದನ್ನೂ ಓದಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್


