Homeಮುಖಪುಟಮಾಧ್ಯಮಗಳ ಜಾತಿ ಅಜೆಂಡಾ ವಿರುದ್ದ ಆಕ್ರೊಶ: ಟಿವಿ ಚರ್ಚೆಗಳನ್ನು ಬಹಿಷ್ಕರಿಸಿದ ಬಿಎಸ್‌ಪಿ

ಮಾಧ್ಯಮಗಳ ಜಾತಿ ಅಜೆಂಡಾ ವಿರುದ್ದ ಆಕ್ರೊಶ: ಟಿವಿ ಚರ್ಚೆಗಳನ್ನು ಬಹಿಷ್ಕರಿಸಿದ ಬಿಎಸ್‌ಪಿ

- Advertisement -
- Advertisement -

ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ಮಾಧ್ಯಮಗಳ ‘ಜಾತಿ ಅಜೆಂಡಾ’ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಾತಿವಾದಿ ಮಾಧ್ಯಮಗಳು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅವಕಾಶಕ್ಕೆ ಪೆಟ್ಟು ನೀಡಿದೆ ಎಂದು ಹೇಳಿರುವ ಮಾಯಾವತಿ, ಬಹುಜನ ಸಮಾಜ ಪಕ್ಷವು ಮುಂದಕ್ಕೆ ಟಿವಿ ಚರ್ಚೆಗಳನ್ನು ಬಹಿಷ್ಕರಿಸಲಿದೆ ಎಂದು ಹೇಳಿದ್ದಾರೆ.

ಈ ಬಾರಿಯ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಕೇವಲ ಒಂದು ಸ್ಥಾನವನ್ನು ಗಳಿಸಿದ್ದು, ಅತ್ಯಂತ ಕಡಿಮೆ ಸ್ಥಾನಕ್ಕೆ ಕುಸಿದಿದೆ.

ಇದನ್ನೂ ಓದಿ: ಬಿಜೆಪಿ ಗೆಲುವಿಗಾಗಿ ಓವೈಸಿ & ಮಾಯಾವತಿಗೆ ಪದ್ಮಪ್ರಶಸ್ತಿ, ಭಾರತ ರತ್ನ ನೀಡಬೇಕು: ಶಿವಸೇನೆ

“ಯುಪಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಮಾಧ್ಯಮಗಳು ತಮ್ಮ ಯಜಮಾನರ ಅಣತಿಯಂತೆ ಜಾತಿ ದ್ವೇಷ ಮತ್ತು ದ್ವೇಷದ ಮನೋಭಾವವನ್ನು ಅಳವಡಿಸಿಕೊಂಡು ಅಂಬೇಡ್ಕರ್‌ವಾದಿ ಬಿಎಸ್‌ಪಿ ಚಳವಳಿಗೆ ಮಾಡಿರುವ ಹಾನಿಯನ್ನು ಯಾರಿಂದಲೂ ಮರೆ ಮಾಡಲು ಸಾಧ್ಯವಿಲ್ಲ” ಎಂದು ಮಾಯಾವತಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ವಕ್ತಾರರಿಗೂ ಹೊಸ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿರುವ ಮಾಯಾವತಿ, “ಪಕ್ಷದ ವಕ್ತಾರರಾದ ಸುಧೀಂದ್ರ ಭದೌರಿಯಾ, ಧರಂವೀರ್ ಚೌಧರಿ, ಡಾ.ಎಂ.ಎಚ್.ಖಾನ್, ಫೈಜಾನ್ ಖಾನ್ ಮತ್ತು ಸೀಮಾ ಕುಶ್ವಾಹ ಅವರು ಇನ್ನು ಮುಂದೆ ಟಿವಿ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ” ಎಂದು ಹೇಳಿದ್ದಾರೆ.

ಶುಕ್ರವಾರದಂದು ಮಾಯಾವತಿ ಅವರು, “ಬಿಎಸ್ಪಿಯನ್ನು ‘ಬಿಜೆಪಿಯ ಬಿ ಟೀಮ್’ ಎಂದು ತೋರಿಸುವ ಮೂಲಕ ಮಾಧ್ಯಮಗಳು ಆಕ್ರಮಣಕಾರಿ ಪ್ರಚಾರ ಮಾಡಿತ್ತು. ಇದರಿಂದಾಗಿ ಮುಸ್ಲಿಮರು ಮತ್ತು ಬಿಜೆಪಿ ವಿರೋಧಿ ಮತದಾರರು ಪಕ್ಷದಿಂದ ದೂರವಾದರು” ಎಂದು ಆರೋಪಿಸಿದ್ದರು.

ಇದನ್ನೂ ಓದಿ: ರೈತ ಆಂದೋಲನದ ಹೆಸರಲ್ಲಿ ಚುನಾವಣಾ ರಾಜಕಾರಣ ಮಾಡುವುದು ಘೋರ ಅನ್ಯಾಯ: ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಖಾಸಗೀ ಮಾಧ್ಯಮಗಳನ್ನ ಕೆಲವು ದಿನಗಳ ಮಟ್ಟಿಗೆ ಬಂದ್ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...