Homeಮುಖಪುಟಗುಡ್ ನ್ಯೂಸ್: ಮಹಿಳಾ ಉದ್ಯೋಗಿಗಳಿಗೆ 'ಮುಟ್ಟಿನ ರಜೆ' ಘೋಷಿಸಿದ ಮೈಸೂರು ಕಾಲೇಜು

ಗುಡ್ ನ್ಯೂಸ್: ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಮೈಸೂರು ಕಾಲೇಜು

- Advertisement -
- Advertisement -

ಮೈಸೂರಿನ ಗ್ಲೋಬಲ್ ಎಜುಕೇಷನ್ ಟ್ರಸ್ಟ್ ಅಡಿಯಲ್ಲಿ ಬರುವ ದಕ್ಷ ಕಾಲೇಜು ತನ್ನ ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳಿನ ಸಾಮಾನ್ಯ ರಜೆ ಮತ್ತು ಇತರ ಸೌಲಭ್ಯಗಳ ಜೊತೆಗೆ ಇನ್ನು ಮುಂದೆ ಮುಟ್ಟಿನ ರಜೆ ನೀಡುವುದಾಗಿ ಘೋಷಿಸಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಈ ಘೋಷಣೆ ಬಂದಿದ್ದು ದೇಶದ ಗಮನ ಸೆಳೆದಿದೆ.

ಕೋವಿಡ್ ಸಾಂಕ್ರಾಮಿಕ ಬಳಿಕ ಕಾಲೇಜಿನಲ್ಲಿ ನರ್ಸ್ ಒಬ್ಬರನ್ನು ನೇಮಿಸಿಕೊಂಡಿದ್ದು, ತುರ್ತು ಚಿಕಿತ್ಸೆ ಸೇರಿದಂತೆ ವಿದ್ಯಾರ್ಥಿಗಳ ಆರೋಗ್ಯದ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕೆಲಸ ಮಾಡುವ ಮೂಲಕ ಸಹ ಕಾಲೇಜು ಉತ್ತಮ ಹೆಸರು ಗಳಿಸಿದೆ. ಈಗ ಮುಟ್ಟಿನ ರಜೆಯು ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಉತ್ತಮ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವುದಕ್ಕೆ ಉಪಯುಕ್ತವಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ.

ಪ್ರತಿ ತಿಂಗಳು ಮಹಿಳೆಯರು ಮುಟ್ಟಾಗುತ್ತಾರೆ. ಆ ಪ್ರಕ್ರಿಯೆಯಲ್ಲಿ ಹಲವಾರು ಮಾನಸಿಕ ಮತ್ತು ದೈಹಿಕ ಸಮಸ್ಯೆಗಳನ್ನು ಎದುರಿಸುತ್ತಾರೆ. ಮಾನಸಿಕ ಒತ್ತಡ, ಸುಸ್ತು, ಮನಸ್ಥಿತಿಯಲ್ಲಿ ಏರು ಪೇರು ಉಂಟಾಗುತ್ತದೆ. ಮುಟ್ಟಿನ ರಜೆ ಈ ಸಮಸ್ಯೆಗಳನ್ನು ಸ್ವಲ್ಪ ಮಟ್ಟಿಗೆ ನಿಭಾಯಿಸಲು ಸಹಕಾರಿಯಾಗುತ್ತದೆ. ಆ ದಿನ ಅಗತ್ಯವಿದ್ದಷ್ಟು ವಿಶ್ರಾಂತಿ ಮತ್ತು ಪೌಷ್ಠಿಕ ಆಹಾರ ಸೇವಿಸಲು ಸಾಧ್ಯವಾಗುತ್ತದೆ. ನಮ್ಮ ಸಂಸ್ಥೆಯು ಅದನ್ನು ಅರ್ಥ ಮಾಡಿಕೊಂಡು ದೇಶದಲ್ಲಿಯೇ ಮೊದಲ  ಬಾರಿಗೆ ಮುಟ್ಟಿನ ರಜೆ ನೀಡುತ್ತಿದೆ. ಇದಕ್ಕಾಗಿ ನಾವೆಲ್ಲರೂ ಅದೃ‍ಷ್ಟವಂತರಾಗಿದ್ದೇವೆ ಮತ್ತು ಎಲ್ಲಾ ಸಂಸ್ಥೆಗಳು ಇದನ್ನು ಅನುಸರಿಸಬೇಕು ಎಂದು ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕಿ ಮಹಾಲಕ್ಷ್ಮಿ ಮಯ್ಯ ಹೇಳಿದ್ದಾಗಿ ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಮುಂಚೆ ಇದ್ದ ವಾರಕ್ಕೊಂದು ರಜೆ, ಸಾಮಾನ್ಯ ರಜೆ ಜೊತೆಗೆ ಮುಟ್ಟಿನ ರಜೆಯು ವಯಕ್ತಿಕ ರಜೆ ವಿಭಾಗದಲ್ಲಿ ಬರುತ್ತದೆ. ಆ ಮೂಲಕ ಆರೋಗ್ಯಕರ ಕೆಲಸದ ವಾತವಾರಣ ನಿರ್ಮಾಣವಾಗುತ್ತದೆ ಎಂದು ಕಾಲೇಜಿನ ಪ್ರಾಂಶುಪಾಲರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮುಟ್ಟಿನ ಬೆಳಕು : ಸತ್ಯಾ ಎಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Super speech sir please find attached the following link to the following link to the following link unsubscribe if you have any questions please feel free contact me at your convenience and home address within the following link unsubscribe if you have any other questions please.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...