2020ರ ದೆಹಲಿ ಗಲಭೆಗೆ ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದ ಕಾಂಗ್ರೆಸ್ ಮಾಜಿ ಕೌನ್ಸಿಲರ್ ಇಶ್ರತ್ ಜಹಾನ್ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ. ಕಳೆದ ತಿಂಗಳು ಅವರ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಲಾಗಿತ್ತು.
ಇಶ್ರತ್ ಜಹಾನ್ ಪರವಾಗಿ ವಾದ ಮಂಡಿಸಿದ ವಕೀಲ ಪ್ರದೀಪ್ ಟಿಯೋಟಿಯಾ ಅವರು, ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಭಾಗಿಯಾಗಿರುವುದನ್ನು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ. ಅವರನ್ನು ತಪ್ಪಾಗಿ ಸಿಲುಕಿಸಲಾಗಿದೆ ಎಂದು ವಾದಿಸಿದ್ದಾರೆ. ಇದೇ ಪ್ರಕರಣದಲ್ಲಿ ಬಂಧಿಸಲಾಗಿರುವ ಶಾರ್ಜೀಲ್ ಇಮಾಮ್ ಮತ್ತು ಸಲೀಂ ಖಾನ್ ಅವರ ಜಾಮೀನು ಅರ್ಜಿಗಳ ಆದೇಶವನ್ನು ಮಾರ್ಚ್ 22 ಕ್ಕೆ ಮುಂದೂಡಲಾಗಿದೆ.
2020 ರ ಈಶಾನ್ಯ ದೆಹಲಿ ಗಲಭೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ-ತಡೆಗಟ್ಟುವಿಕೆ-ಕಾಯ್ದೆ (ಯುಎಪಿಎ) ಅಡಿಯಲ್ಲಿ ಇಶ್ರತ್ ಜಹಾನ್ ಅವರನ್ನು ಬಂಧಿಸಲಾಗಿತ್ತು. ಗಲಭೆಯಲ್ಲಿ 53 ಜನರು ಸಾವನ್ನಪ್ಪಿ 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಇಸ್ರತ್ ಜಹಾನ್ ಅವರು 2012-17ರಲ್ಲಿ ಕಾಂಗ್ರೆಸ್ ಕೌನ್ಸಿಲರ್ ಆಗಿದ್ದರು ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿದ್ದರು.
ಕಳೆದ ಜೂನ್ 2020 ರಲ್ಲಿ ಮದುವೆಯಾಗಲು ಅವರಿಗೆ 10 ದಿನಗಳ ಮಧ್ಯಂತರ ಜಾಮೀನು ನೀಡಲಾಗಿತ್ತು.
ಈ ಪ್ರಕರಣದಲ್ಲಿ ಹದಿನೆಂಟು ಜನರನ್ನು ಆರೋಪಿಗಳೆಂದು ಹೆಸರಿಸಲಾಗಿದೆ. ಆದರೆ ನುಸ್ರತ್ ಜಹಾನ್‌ಗಿಂತ ಮೊದಲು, ಇತರ ಐವರು ಮಾತ್ರ ಜಾಮೀನು ಪಡೆದಿದ್ದರು. ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದ ಈ ಪ್ರಕರಣದಲ್ಲಿ ಜಹಾನ್ ಮೊದಲ ಆರೋಪಿಯಾಗಿದ್ದಾರೆ. ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ನೀಡದ ಕಾರಣ ಇತರ ಐವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.
ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ: ಅಪರಾಧಿ ದಿನೇಶ್ ಯಾದವ್‌ಗೆ ಐದು ವರ್ಷ ಜೈಲು ಶಿಕ್ಷೆ



ಜಾಮೀನು ದೊರಕಿದ್ದು ಸ್ವಾಗತಾರ್ಹ.