Homeಮುಖಪುಟಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

ಹಿಜಾಬ್‌ ಬಗ್ಗೆ ಹೈಕೋರ್ಟ್ ನೀಡಿರುವ ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದೆ: ಅಸಾದುದ್ದೀನ್ ಓವೈಸಿ ಆಕ್ರೋಶ

- Advertisement -
- Advertisement -

ಕಾಲೇಜಿನಲ್ಲಿ ಹಿಜಾಬ್ ನಿಷೇಧ ಪ್ರಕರಣದ ಬಗ್ಗೆ ರಾಜ್ಯ ಹೈಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದ ಅಸಾದುದ್ದೀನ್ ಓವೈಸಿ, ತೀರ್ಪು ಒಂದು ಧರ್ಮವನ್ನು ಗುರಿಯಾಗಿಸಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದರ ಉಲ್ಲಂಘನೆಯಲ್ಲವೇ? ಎಂದು ಮಂಗಳವಾರ ಪ್ರಶ್ನಿಸಿದ್ದಾರೆ.

ಹೈಕೋರ್ಟ್‌‌ನ ಮೌಖಿಕ ಆದೇಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಹಿಜಾಬ್ ಕುರಿತ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ನಾನು ಒಪ್ಪುವುದಿಲ್ಲ. ತೀರ್ಪನ್ನು ಒಪ್ಪದಿರುವುದು ನನ್ನ ಹಕ್ಕಾಗಿದ್ದು, ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್‌ ಮುಂದೆ ಮೇಲ್ಮನವಿ ಸಲ್ಲಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

“ತೀರ್ಪು ಧರ್ಮ, ಸಂಸ್ಕೃತಿ, ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿರುವುದರಿಂದ ಆಲ್‌ ಇಂಡಿಯಾ ಮುಸ್ಲಿಂ ಪರ್ಸನಲ್‌ ಲಾ ಬೋರ್ಡ್‌ ಮತ್ತು ಇತರ ಧಾರ್ಮಿಕ ಗುಂಪುಗಳ ಸಂಘಟನೆಗಳು ಕೂಡಾ ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುತ್ತವೆ ಎಂದು ನಾನು ಭಾವಿಸುತ್ತೇನೆ” ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದುತ್ವ ರಾಜಕಾರಣ; ಹಿಜಾಬಿನ ಅಪರಾಧೀಕರಣ

“ಸಂವಿಧಾನದ ಪೀಠಿಕೆಯು ಒಬ್ಬನಿಗೆ ಆಲೋಚನೆ, ಅಭಿವ್ಯಕ್ತಿ, ಧಾರ್ಮಿಕ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವಿದೆ ಎಂದು ಹೇಳುತ್ತದೆ. ನನ್ನ ತಲೆಯನ್ನು ಮುಚ್ಚಿಕೊಳ್ಳುವುದು ಅತ್ಯಗತ್ಯ ಎಂಬುದು ನನ್ನ ಧಾರ್ಮಿಕ ನಂಬಿಕೆಯಾಗಿದ್ದರೆ, ನಾನು ಸೂಕ್ತವೆಂದು ಭಾವಿಸಿದಂತೆ ಅದನ್ನು ವ್ಯಕ್ತಪಡಿಸಲು ನನಗೆ ಹಕ್ಕಿದೆ. ಧರ್ಮನಿಷ್ಠ ಮುಸಲ್ಮಾನರಿಗೆ ಹಿಜಾಬ್ ಕೂಡ ಒಂದು ಆರಾಧನೆಯ ಕ್ರಿಯೆಯಾಗಿದೆ” ಎಂದು ಅವರು ಹೇಳಿದ್ದಾರೆ.

“ಇದು ಅಗತ್ಯ ಧಾರ್ಮಿಕ ಆಚರಣೆ ಪರೀಕ್ಷೆಯನ್ನು ಪರಿಶೀಲಿಸುವ ಸಮಯ. ಒಬ್ಬ ಧರ್ಮನಿಷ್ಠ ವ್ಯಕ್ತಿಗೆ, ಎಲ್ಲವೂ ಅತ್ಯಗತ್ಯ. ನಾಸ್ತಿಕನಿಗೆ ಯಾವುದೂ ಅತ್ಯಗತ್ಯವಲ್ಲ. ಶ್ರದ್ಧಾವಂತ ಹಿಂದೂ ಬ್ರಾಹ್ಮಣರಿಗೆ, ಜನಿವಾರ ಅತ್ಯಗತ್ಯ ಆದರೆ ಬ್ರಾಹ್ಮಣೇತರರಿಗೆ ಅದು ಇಲ್ಲದಿರಬಹುದು. ನ್ಯಾಯಾಧೀಶರು ಅತ್ಯಗತ್ಯ ಆಚರಣೆಯನ್ನು ನಿರ್ಧರಿಸಬಹುದು ಎಂಬುದು ಅಸಂಬದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

“ಒಬ್ಬ ವ್ಯಕ್ತಿ ಒಂದು ಧರ್ಮವನ್ನು ಆಚರಿಸುತ್ತಿದ್ದರೆ, ಅದೇ ಧರ್ಮವನ್ನು ಆಚರಿಸುವ ಇನ್ನೊಬ್ಬ ವ್ಯಕ್ತಿಯ ಅತ್ಯಗತ್ಯ ಧಾರ್ಮಿಕ ಆಚರಣೆಯ ಬಗ್ಗೆ ನಿರ್ಧರಿಸುವ ಹಕ್ಕಿಲ್ಲ. ಆಚರಣೆಗಳು ವ್ಯಕ್ತಿ ಮತ್ತು ದೇವರ ನಡುವೆ ಇರುವಂತಹದ್ದು. ಆಚರಣೆಗಳು ಇತರರಿಗೆ ಹಾನಿಯಾದರೆ ಮಾತ್ರ ಧಾರ್ಮಿಕ ಹಕ್ಕುಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲು ಅವಕಾಶ ನೀಡಬೇಕು. ತಲೆಗೆ ಹಿಜಾಬ್‌ ಧರಿಸುವುದು ಯಾರಿಗೂ ಹಾನಿ ಮಾಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

“ಸ್ಕಾರ್ಫ್‌ ನಿಷೇಧಿಸುವುದರಿಂದ ಧರ್ಮನಿಷ್ಠ ಮುಸ್ಲಿಂ ಮಹಿಳೆಯರು ಮತ್ತು ಅವರ ಕುಟುಂಬಗಳಿಗೆ ಖಂಡಿತವಾಗಿಯೂ ಹಾನಿ ಮಾಡುತ್ತದೆ. ಯಾಕೆಂದರೆ ಇದು ಅವರು ಶಿಕ್ಷಣವನ್ನು ಪಡೆಯುವುದನ್ನು ತಡೆಯುತ್ತದೆ” ಎಂದು ಓವೈಸಿ ಹೇಳಿದ್ದಾರೆ.

“ಸಮವಸ್ತ್ರವು ಏಕರೂಪತೆಯನ್ನು ಖಚಿತಪಡಿಸುತ್ತದೆ ಎಂಬುದು ಹೇಗೆ? ಶ್ರೀಮಂತ ಹಾಗೂ ಬಡ ಕುಟುಂಬದಿಂದ ಬಂದವರು ಯಾರೆಂದು ಮಕ್ಕಳಿಗೆ ತಿಳಿಯುವುದಿಲ್ಲವೇ? ಜಾತಿಯ ಹೆಸರುಗಳು ಅವರ ಹಿನ್ನೆಲೆಯನ್ನು ಸೂಚಿಸುವುದಿಲ್ಲವೇ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್: ನ್ಯಾಯ ವ್ಯವಸ್ಥೆಯ ಬಗ್ಗೆ ವಿಶ್ವಾಸವಿದೆ, ಆದರೆ ಸರಕಾರ, ಶಿಕ್ಷಣ ಸಂಸ್ಥೆಗಳ ಮೇಲಿಲ್ಲ – ರಾಜೇಂದ್ರ ಚೆನ್ನಿ

“ಶಿಕ್ಷಕರು ತಾರತಮ್ಯ ಮಾಡುವುದನ್ನು ತಡೆಯಲು ಸಮವಸ್ತ್ರದ ಕೊಡುಗೆ ಏನು? ವೈವಿಧ್ಯತೆಯನ್ನು ಪ್ರತಿಬಿಂಬಿಸಲು ಶಾಲೆ, ಪೊಲೀಸ್ ಮತ್ತು ಸೇನೆಯ ಸಮವಸ್ತ್ರಗಳಲ್ಲಿ ಸಮಂಜಸವಾದ ಅವಕಾಶಗಳನ್ನು ಜಾಗತಿಕವಾಗಿ ನೀಡಲಾಗಿದೆ. ಹಿಜಾಬ್ ಮತ್ತು ಸಿಖ್ ಪೇಟವನ್ನು ಅನುಮತಿಸಲು ಬೇಕಾಗಿ ಐರ್ಲೆಂಡ್ ಸರ್ಕಾರವು ಪೊಲೀಸ್ ಸಮವಸ್ತ್ರದ ನಿಯಮಗಳನ್ನು ಬದಲಾಯಿಸಿದಾಗ, ಮೋದಿ ಸರ್ಕಾರ ಅದನ್ನು ಸ್ವಾಗತಿಸಿತು. ಹಾಗಾದರೆ ನಮ್ಮ ದೇಶದಲ್ಲಿ ಮತ್ತು ವಿದೇಶದಲ್ಲಿ ಎರಡು ಮಾನದಂಡಗಳು ಯಾಕೆ? ಸಮವಸ್ತ್ರದ್ದೇ ಬಣ್ಣಗಳ ಹಿಜಾಬ್ ಮತ್ತು ಪೇಟಗಳನ್ನು ಧರಿಸಲು ಅನುಮತಿಸಬಹುದಲ್ಲವೆ” ಎಂದು ಓವೈಸಿ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

“ಇದೆಲ್ಲದರ ಪರಿಣಾಮ ಏನಾಗಲಿದೆ? ಮೊದಲನೆಯದಾಗಿ, ಸರ್ಕಾರವು ಅಸ್ತಿತ್ವದಲ್ಲಿಲ್ಲದ ಸಮಸ್ಯೆಯನ್ನು ಸೃಷ್ಟಿಸಿತು. ಈ ಹಿಂದೆ ಮಕ್ಕಳು ಹಿಜಾಬ್, ಬಳೆ ಇತ್ಯಾದಿ ಧರಿಸಿ ಶಾಲೆಗೆ ಹೋಗುತ್ತಿದ್ದರು. ಎರಡನೆಯದಾಗಿ, ಹಿಂಸಾಚಾರವನ್ನು ಪ್ರಚೋದಿಸಿ, ಕೇಸರಿ ಪೇಟಗಳೊಂದಿಗೆ ಹಿಜಾಬ್‌ ವಿರುದ್ದ ಪ್ರತಿಭಟನೆಗಳನ್ನು ನಡೆಸಲಾಯಿತು. ಕೇಸರಿ ಪೇಟಗಳು ‘ಅಗತ್ಯ’ವೇ? ಅಥವಾ ಹಿಜಾಬ್‌ಗೆ ‘ಪ್ರತಿಕ್ರಿಯೆ’ಯಾಗಿ ಮಾತ್ರವೆ ಧರಿಸಲಾಯಿತೆ?” ಎಂದು ಅವರು ಪ್ರಶ್ನಿಸಿದ್ದಾರೆ.

“ಮೂರನೆಯದಾಗಿ, ಸರ್ಕಾರಿ ಆದೇಶ ಮತ್ತು ಹೈಕೋರ್ಟ್ ಆದೇಶವು ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದೆ. ಮಾಧ್ಯಮಗಳು, ಪೊಲೀಸರು ಮತ್ತು ಆಡಳಿತ ಮಂಡಳಿ ಹಿಜಾಬ್ ಧರಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕಿರುಕುಳ ನೀಡುವುದನ್ನು ನಾವು ನೋಡಿದ್ದೇವೆ. ಮಕ್ಕಳು ಪರೀಕ್ಷೆ ಬರೆಯುವುದನ್ನು ಸಹ ನಿಷೇಧಿಸಲಾಗಿದೆ. ಇದು ನಾಗರಿಕ ಹಕ್ಕುಗಳ ಸಾಮೂಹಿಕ ಉಲ್ಲಂಘನೆಯಾಗಿದೆ” ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

“ಕೊನೆಯದಾಗಿ, ಇದರರ್ಥ ಒಂದು ಧರ್ಮವನ್ನು ಗುರಿಯಾಗಿಸಲಾಗಿದ್ದು, ಧಾರ್ಮಿಕ ಆಚರಣೆಯನ್ನು ನಿಷೇಧಿಸಲಾಗಿದೆ. ಆರ್ಟಿಕಲ್ 15 ಧರ್ಮದ ಆಧಾರದ ಮೇಲೆ ತಾರತಮ್ಯವನ್ನು ನಿಷೇಧಿಸುತ್ತದೆ. ಇದು ಅದುವೆ ಉಲ್ಲಂಘನೆಯಲ್ಲವೇ? ಸಂಕ್ಷಿಪ್ತವಾಗಿ ಹೈಕೋರ್ಟ್‌ ಆದೇಶವು ಮಕ್ಕಳನ್ನು ಶಿಕ್ಷಣ ಮತ್ತು ಅಲ್ಲಾಹನ ಆಜ್ಞೆಗಳ ನಡುವೆ ಆಯ್ಕೆ ಮಾಡುವಂತೆ ಒತ್ತಾಯಿಸಿದೆ” ಎಂದು ಅವರು ಹೇಳಿದ್ದಾರೆ.

“ನಮಾಜ್‌, ಹಿಜಾಬ್, ರೋಜಾ ಇತ್ಯಾದಿ ಕಟ್ಟುಪಾಡುಗಳ ಜೊತೆಗೆ ಶಿಕ್ಷಣ ಪಡೆಯಬೇಕು ಎಂಬುವುದು ಮುಸ್ಲಿಮರಿಗೆ ಅಲ್ಲಾಹನ ಆಜ್ಞೆಯಾಗಿದೆ. ಈಗ ಸರ್ಕಾರ ಮುಸ್ಲಿಂ ಹುಡುಗಿಯರಿಗೆ ಅವುಗಳ ನಡುವೆ ಆಯ್ಕೆ ಮಾಡಲು ಒತ್ತಾಯಿಸುತ್ತಿದೆ. ಇಲ್ಲಿಯವರೆಗೆ ನ್ಯಾಯಾಂಗವು ಮಸೀದಿ ಮತ್ತು ಗಡ್ಡವನ್ನು ಇಟ್ಟುಕೊಳ್ಳುವುದು ಅತ್ಯಗತ್ಯವಲ್ಲ ಎಂದು ತೀರ್ಪು ನೀಡಿದೆ. ಈಗ ಹಿಜಾಬ್ ಅನಿವಾರ್ಯವಲ್ಲ ಎಂದು ತೀರ್ಪು ನೀಡಿದೆ. ನಂಬಿಕೆಗಳನ್ನು ಮುಕ್ತವಾಗಿ ಆಚರಿಸುವುದರಲ್ಲಿ ಇನ್ನು ಯಾವುದು ಉಳಿದಿದೆ? ಹಿಜಾಬ್ ಧರಿಸುವ ಮಹಿಳೆಯರಿಗೆ ಕಿರುಕುಳ ನೀಡುವುದನ್ನು ಕಾನೂನುಬದ್ಧಗೊಳಿಸಲು ಈ ತೀರ್ಪು ಬಳಸಲ್ಪಡುವುದಿಲ್ಲ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ರಿಟ್‌ ಅರ್ಜಿ ವಜಾ; ಹಿಜಾಬ್ ನಿಷೇಧ ಎತ್ತಿ ಹಿಡಿದ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...