Homeಮುಖಪುಟಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

- Advertisement -
- Advertisement -

ಕಾಂಗ್ರೆಸ್‌‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಳೆದ ವಾರ ಭಾರೀ ಸೋಲನ್ನು ಅನುಭವಿಸಿದ ಐದು ರಾಜ್ಯಗಳ ತಮ್ಮ ಪಕ್ಷದ ಮುಖ್ಯಸ್ಥರನ್ನು ಮಂಗಳವಾರ ವಜಾಗೊಳಿಸಿದ್ದಾರೆ. ಇದು ಪಕ್ಷದ ‘ಮರುಸಂಘಟನೆ’ಯ ಮೊದಲ ಹೆಜ್ಜೆ ಎಂದು ಕರೆಯಲಾಗಿದೆ. ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಎಂಟು ತಿಂಗಳ ಹಿಂದೆ ಅಧಿಕಾರ ವಹಿಸಿಕೊಂಡ ನವಜೋತ್ ಸಿಂಗ್ ಸಿಧು ಕೂಡಾ ರಾಜೀನಾಮೆ ಕೇಳಿದ ನಾಯಕರಲ್ಲಿ ಸೇರಿದ್ದಾರೆ.

ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ ಅವರು ರಾಜ್ಯ ಕಾಂಗ್ರೆಸ್ ಘಟಕಗಳ ‘ಪುನರ್‌ ಸಂಘಟನೆಗೆ ಅನುಕೂಲವಾಗುವಂತೆ’ ರಾಜೀನಾಮೆಗಳನ್ನು ಕೇಳಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಪಂಜಾಬ್‌‌‌ನಲ್ಲಿ ಆಡಳಿತದಲ್ಲಿದ್ದ ಕಾಂಗ್ರೆ‌ಸ್‌‌ ಪಕ್ಷವು ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಾರ್ಟಿ (ಎಎಪಿ) ವಿರುದ್ಧ ಸೋತಿದೆ. ಇತರ ನಾಲ್ಕು ರಾಜ್ಯಗಳಲ್ಲಿ ಪ್ರಭಲ ಸ್ಪರ್ಧೆ ನೀಡಲು ಪಕ್ಷವು ವಿಫಲಗೊಂಡಿದೆ.

ಇದನ್ನೂ ಓದಿ: ಕಾಂಗ್ರೆಸ್ ಇಲ್ಲವಾದರೆ ದೇಶ ಛಿದ್ರವಾಗುತ್ತದೆ, ಪಕ್ಷ ಸಂಘಟಿಸಿ: ಡಿ.ಕೆ.ಶಿವಕುಮಾರ್‌‌

ಪಂಜಾಬ್‌ನಲ್ಲಿ ಕಾಂಗ್ರೆಸ್‌ ತೀರಾ ಹೀನಾಯವಾಗಿ ಸೋಲುಂಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸಿಧು ಅವರು ಅಮರಿಂದರ್ ಸಿಂಗ್ ಮತ್ತು ನಿರ್ಗಮಿತ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರೊಂದಿಗೆ ಘರ್ಷಣೆ ಮಾಡಿದ್ದರಿಂದ ಕಾಂಗ್ರೆಸ್ ಆಂತರಿಕವಾಗಿ ಕುಸಿಯಿತು ಎಂದು ವಿಶ್ಲೇಷಿಸಲಾಗಿದೆ.

ರಾಜ್ಯಗಳಲ್ಲಿ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ಭಾನುವಾರ ನಡೆದ ಕಾಂಗ್ರೆಸ್ ನಾಯಕತ್ವದ ಸಭೆಯ ನಂತರ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ರಾಜೀನಾಮೆ ನೀಡಬೇಕು ಎಂಬ ಸೋನಿಯಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಹಿರಿಯ ನಾಯಕರನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ, ಸೋನಿಯಾ ಗಾಂಧಿ ಅವರು ತಮ್ಮ ಮಕ್ಕಳಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಪಕ್ಷದ ನಾಯಕರು ಹೇಳುವಂತೆ, ಸೋನಿಯಾ ಗಾಂಧಿ ಅವರು ರಾಜೀನಾಮೆ ಪ್ರಸ್ತಾಪವನ್ನು ‘ಪಕ್ಷದ ಹಿತಾಸಕ್ತಿಗಾಗಿ ತ್ಯಾಗ’ ಎಂದು ಪ್ರಸ್ತುತಪಡಿಸಿದರು. ಆದರೆ ಅದನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಶ್ಲೇಷಣೆ: ಮತ್ತೊಂದು ಆತ್ಮ ವಿಮರ್ಶೆಯ ಹೊಸ್ತಿಲಲ್ಲಿರುವ ಕಾಂಗ್ರೆಸ್ ಸೋತದ್ದೆಲ್ಲಿ?

“ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕುಟುಂಬ ಸದಸ್ಯರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಪಕ್ಷಕ್ಕಾಗಿ ತಮ್ಮ ಹುದ್ದೆಗಳನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ಹೇಳಿದರು, ಆದರೆ ನಾವೆಲ್ಲರೂ ಇದನ್ನು ತಿರಸ್ಕರಿಸಿದ್ದೇವೆ” ಎಂದು ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸೋಲಿನ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಹುಲ್ ಗಾಂಧಿ ಅವರು ಪಕ್ಷದಲ್ಲಿ ಯಾವುದೇ ಹುದ್ದೆಯನ್ನು ಅಲಂಕರಿಸಿಲ್ಲ.

ನಾಲ್ಕೂವರೆ ಗಂಟೆಗಳ ಸಭೆಯ ನಂತರ, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸೋನಿಯಾ ಗಾಂಧಿ ಅವರು ಪಕ್ಷದ ಅಧ್ಯಕ್ಷರಾಗಿ ಉಳಿಯುತ್ತಾರೆ ಮತ್ತು ಸಾಂಸ್ಥಿಕ ಸಮಸ್ಯೆಗಳನ್ನು ಪರಿಹರಿಸಲು ‘ಪರಿಣಾಮಕಾರಿ ಮತ್ತು ತಕ್ಷಣದ ಕ್ರಮಗಳನ್ನು’ ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಲಾಗಿದೆ ಎಂದು ಹೇಳಿದೆ.

ಜವಾಹರಲಾಲ್ ನೆಹರು ಮತ್ತು ಇಂದಿರಾ ಗಾಂಧಿ ಸೇರಿದಂತೆ ತನ್ನ ಎಲ್ಲಾ ಮಾಜಿ ನಾಯಕರ ವೀಡಿಯೊವನ್ನು ಪಕ್ಷವು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಬಿಡುಗಡೆ ಮಾಡಿದೆ. ಇದು ಪಕ್ಷದಲ್ಲಿ ಗಾಂಧಿ ಕುಟುಂಬವು ಅಧಿಕಾರದಲ್ಲಿ ಉಳಿಯುತ್ತದೆ ಎಂದು ಸೂಚಿಸುತ್ತದೆ.

ಕಾಂಗ್ರೆಸ್ “ಭಿನ್ನಮತೀಯರು” ಅಥವಾ G-23 ನಾಯಕರ ಗುಂಪು ಸೋನಿಯಾ ಗಾಂಧಿಯವರಿಗೆ ವ್ಯಾಪಕವಾದ ಸಾಂಸ್ಥಿಕ ಬದಲಾವಣೆ ಮಾಡುವಂತೆ ಕರೆ ನೀಡಿದ್ದಾರೆ. ಜಿ -23 ರ ಪ್ರಮುಖ ಸದಸ್ಯರಾದ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಗಾಂಧಿಗಳು ಪಕ್ಕಕ್ಕೆ ಸರಿದು, ಪಕ್ಷವನ್ನು ಮುನ್ನಡೆಸಲು ಬೇರೆ ನಾಯಕರಿಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಕಾಂಗ್ರೆಸ್‌ ಪಕ್ಷದಿಂದ ಕುಂಭಕೋಣಂ ಪಾಲಿಕೆ ಮೇಯರ್‌ ಆದ ಆಟೋರಿಕ್ಷಾ ಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೇಲೆ ಉತ್ತಮ ನಾಯಕತ್ವ ಇಲ್ಲದೆ ಕೆಳಗಿನ ನಾಯಕತ್ವ ಬೆಳೆಯದು. ದೇಶ ಇಂದು ಅನುಭವಿಸುತ್ತಿರುವ ಪರಿಸ್ಥಿತಿಯಿಂದ ಹೊರಬರಲು, ದೂರಗಾಮಿ ನೋಟ, ಗುರಿ ಮತ್ತು ಅದನ್ನು ಜನಮನದಲ್ಲಿ ಸ್ಥಾಪಿಸಿ ಹೋರಾಟದ ಕಿಚ್ಚು ಹಚ್ಚುವಲ್ಲಿ ಕಾಂಗ್ರೆಸ್ ನಾಯಕತ್ವ ಸೋತಿದೆ ಒಮ್ಮೆ ಅಲ್ಲ, ಅನೇಕ ಬಾರಿ! ಆದ್ದರಿಂದ, ಕಾಂಗ್ರೆಸ್ ಪರ್ಯಾಯ ರಾಜಕಾರಣದ ಶಕ್ತಿಯಾಗಿ ಏಳಲು ಮೊದಲು, ಕಾಂಗ್ರೆಸ್ ನ ಕೇಂದ್ರ ನಾಯಕತ್ವ ತೆರೆದ ಮನಸ್ಸಿನಿಂದ ಯೋಚಿಸಿ, ಕೆಳಗಿಳಿದು, ಹುಮ್ಮನಸ್ಸಿನಿಂದ ಪಕ್ಷ ಕಟ್ಟುವ ನಾಯಕತ್ವವನ್ನು ರೂಪಿಸಲು ಅನುವು ಮಾಡಿಕೊಡಬೇಕು. ಕಾಂಗ್ರೆಸ್ ನ ಮತ್ತು ಮುಖ್ಯವಾಗಿ, ದೇಶದ ಭವಿಷ್ಯದ ದೃಷ್ಟಿಯಿಂದ ಇದು ಅನಿವಾರ್ಯ ಎಂಬುದು ನನ್ನ ನಮ್ರ ಅನಿಸಿಕೆ.

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...