HomeUncategorizedಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

ಎಎಪಿ ದಿಗ್ವಿಜಯಕ್ಕೆ ಹೆದರಿ, ದೆಹಲಿ ಮುನ್ಸಿಪಾಲ್‌ ಚುನಾವಣೆ ಮುಂದೂಡಲು ಬಯಸುತ್ತಿದೆಯೇ ಬಿಜೆಪಿ?

- Advertisement -
- Advertisement -

ಹೊಸದಿಲ್ಲಿ: ಮುಂಬರುವ ನಗರಪಾಲಿಕೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಲು ವಿಳಂಬ ಮಾಡುವಂತೆ ಭಾರತೀಯ ಜನತಾ ಪಾರ್ಟಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.

ಕಳೆದ ಸೋಮವಾರ (ಮಾರ್ಚ್ 14) ಎಎಪಿ ನಾಯಕರು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಘೇರಾವ್ ಹಾಕಿದ್ದರು.

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ (ಎಂಸಿಡಿ)ಗಳಲ್ಲಿ  ಬಿಜೆಪಿ ಪ್ರಾಬಲ್ಯ ಸಾಧಿಸಿದೆ. ಸತತ ಚುನಾವಣೆಗಳಲ್ಲಿ ಜಯಗಳಿಸಿದೆ. ಆದರೆ ಪಂಜಾಬ್‌ನಲ್ಲಿ ಎಎಪಿ ಗೆಲುವು ಸಾಧಿಸಿದ ಬಳಿಕ, ತನ್ನ ದಿಗ್ವಿಜಯ ಯಾತ್ರೆಯನ್ನು ದೆಹಲಿಗೆ ವಿಸ್ತರಿಸಲು ಬಯಸಿದೆ.

272 ಮುನ್ಸಿಪಲ್ ವಾರ್ಡ್‌ಗಳಲ್ಲಿ ದೆಹಲಿಯ ಜನಸಂಖ್ಯೆಯ 97% ರಷ್ಟು ಜನರಿಗೆ ಸೇವೆಯನ್ನು ಸಲ್ಲಿಸುತ್ತಿರುವ ದೆಹಲಿ ಮುನ್ಸಿಪಲ್‌ ವಿಶ್ವದ ಎರಡನೇ ಅತಿದೊಡ್ಡ ನಾಗರಿಕ ಸಂಸ್ಥೆಯಾಗಿದೆ.

ಕಳೆದ ವಾರ ಪತ್ರಿಕಾಗೋಷ್ಠಿ ನಡೆಸಿದ್ದ ರಾಜ್ಯ ಚುನಾವಣಾ ಆಯೋಗವು, “ಏಪ್ರಿಲ್ 2022ರಲ್ಲಿ ಚುನಾವಣೆ ನಡೆಯಲಿದೆ” ಎಂದು ತಿಳಿಸಿತು. ಆದರೆ ದಿನಾಂಕಗಳ ಘೋಷಣೆಯನ್ನು ಮುಂದೂಡಿತು.

ಇದನ್ನೂ ಓದಿರಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಚುನಾವಣಾ ಆಯೋಗ ತನ್ನ ಅಧಿಕೃತ ಹೇಳಿಕೆಯಲ್ಲಿ, “ಚುನಾವಣೆಗಳು ವಿಳಂಬವಾಗಿಲ್ಲ. ಆದರೆ ಮೂರು ಮುನ್ಸಿಪಲ್‌ಗಳನ್ನು ಮರುಸೇರಿಸುವ ಕೇಂದ್ರ ಸರ್ಕಾರದ ಯೋಜನೆಯ ಹಿನ್ನೆಲೆಯಲ್ಲಿ ಕಾನೂನು ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗುತ್ತದೆ” ಎಂದು ಹೇಳಿದೆ.

ಮೂರು ಮುನ್ಸಿಪಲ್‌ಗಳಿಗೆ ಸಂಬಂಧಿಸಿದಂತೆ (ದಕ್ಷಿಣ, ಉತ್ತರ ಮತ್ತು ಪೂರ್ವ) ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಡಿಎಂಸಿ) ಕಾಯ್ದೆಗೆ ತಿದ್ದುಪಡಿಯನ್ನು ತರಲಿಚ್ಛಿಸಿದ್ದು, ಬಜೆಟ್ ಅಧಿವೇಶನದ ದ್ವಿತೀಯಾರ್ಧದಲ್ಲಿ ತಿದ್ದುಪಡಿ ಮಂಡನೆಯಾಗುವ ಸಾಧ್ಯತೆ ಇದೆ.

ಮೂರು ಮುನ್ಸಿಪಾಲ್‌ಗಳೂ ಮೊದಲು ಒಬ್ಬ ಮೇಯರ್ ಅಡಿಯಲ್ಲಿ ಅಧಿಕಾರ ನಡೆಸುತ್ತಿದ್ದವು. ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯ ಕಾರಣ, ಶೀಲಾ ದೀಕ್ಷಿತ್ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಜನವರಿ 2012ರಲ್ಲಿ ಮೂರು ವಿಭಾಗಗಳಾಗಿ ವಿಭಜಿಸಲಾಯಿತು. ಉತ್ತಮ ಆಡಳಿತಕ್ಕಾಗಿ ಆಡಳಿತವನ್ನು ವಿಕೇಂದ್ರೀಕರಿಸುವ ದೃಷ್ಟಿಯಿಂದ ಈ ಕ್ರಮ ಜರುಗಿಸಲಾಗಿತ್ತು.

ಆದರೆ ಆದಾಯದ ಮೂಲಗಳ ಅಸಮ ವಿತರಣೆಯು ಉತ್ತರ ಮತ್ತು ಪೂರ್ವ ಮುನ್ಸಿಪಾಲ್‌ಗಳಲ್ಲಿ ಆರ್ಥಿಕ ಮುಗ್ಗಟ್ಟು ಉಂಟುಮಾಡಿತು. ತಮ್ಮ ಸಂಬಳವನ್ನು ಪಾವತಿಸಿದ ಕಾರಣ ಸ್ವಚ್ಛತಾ ಕಾರ್ಮಿಕರು, ಶಿಕ್ಷಕರು, ವೈದ್ಯರು ಮತ್ತು ಇತರ ಸಿಬ್ಬಂದಿ ಹತ್ತಾರು ಮುಷ್ಕರಗಳನ್ನು ನಡೆಸಿದ್ದಾರೆ.

ಎಂಸಿಡಿಯನ್ನು ಏಕೀಕರಿಸುವ ನಿರ್ಧಾರ ಬೇಗ ಬರಬೇಕಿತ್ತು. ಈಗಾಗಲೇ ತುಂಬಾ ಹಾನಿಯಾಗಿದೆ ಎಂದು ವೀಕ್ಷಕರು ಅಭಿಪ್ರಾಯಪಡುತ್ತಾರೆ.

ಬಿಜೆಪಿ ಕೂಡ ಇದೇ ಹಾದಿಯಲ್ಲಿ ಸಾಗುತ್ತಿದೆ. ದೆಹಲಿ ಬಿಜೆಪಿ ಅಧ್ಯಕ್ಷ ಆದೇಶ್ ಗುಪ್ತಾ ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ, ಮೂರು ವಿಭಜನೆಯು ಆಡಳಿತವನ್ನು ಸುಧಾರಿಸಲಿಲ್ಲ. ವಾಸ್ತವವಾಗಿ ನಾಗರಿಕ ಸಂಸ್ಥೆಗಳಲ್ಲಿ ಆರ್ಥಿಕ ಬಿಕ್ಕಟ್ಟನ್ನು ಉಂಟುಮಾಡಿದೆ ಎಂದಿದ್ದಾರೆ.

ಇದನ್ನೂ ಓದಿರಿ: ಚುನಾವಣೆಯಲ್ಲಿ ಸೋಲು: 5 ರಾಜ್ಯಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ವಜಾಗೊಳಿಸಿದ ಸೋನಿಯಾ ಗಾಂಧಿ

ಕೇಜ್ರಿವಾಲ್ ಸರ್ಕಾರವು ಪುರಸಭೆಯ ಹಣವನ್ನು ತಡೆಹಿಡಿಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಆರೋಪವನ್ನು ನಿರಾಕರಿಸಿದ ದೆಹಲಿಯ ಎಎಪಿಯ ಎಂಸಿಡಿ ಉಸ್ತುವಾರಿ ದುರ್ಗೇಶ್ ಪಾಠಕ್, “ಹಣಕಾಸು ಆಯೋಗವು ಯಾವಾಗ ಹಣವನ್ನು ಬಿಡುಗಡೆ ಮಾಡಬೇಕೆಂದು ನಮಗೆ ನಿರ್ದೇಶಿಸುತ್ತದೆ. ಅದರಂತೆ ನಾವು ನಡೆಯುತ್ತಿದ್ದೇವೆ” ಎಂದಿದ್ದಾರೆ.

“ನಾವು ಹಣವನ್ನು ತಡೆಹಿಡಿದಿದ್ದೇವೆ ಎಂಬುದನ್ನು ಸಾಬೀತುಪಡಿಸಲು ಬಿಜೆಪಿ ಬಳಿ ಯಾವುದೇ ದಾಖಲೆಗಳಿವೆಯೇ” ಎಂದು ಅವರು ಪ್ರಶ್ನಿಸಿದ್ದಾರೆ.

ಮೂರು ಮುನ್ಸಿಪಲ್‌ಗಳನ್ನು ಒಂದುಗೂಡಿಸುವ ಯೋಜನೆ ಮತ್ತು ಎಂಸಿಡಿ ಚುನಾವಣೆಗಳಿಗೆ ಯಾವುದೇ ಸಂಬಂಧವಿಲ್ಲ ಎಂದು ಪಾಠಕ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ದೆಹಲಿ ಅಷ್ಟು ದೊಡ್ಡ ರಾಜ್ಯವಲ್ಲ. ಇದು ಸಾಕಷ್ಟು ಚಿಕ್ಕದಾಗಿದ್ದು, 272 ವಾರ್ಡ್‌ಗಳಲ್ಲಿ ಆಡಳಿತ ನಡೆಸುವುದು ಅಷ್ಟು ಕಷ್ಟವಲ್ಲ. ಬಿಜೆಪಿಯು ಚುನಾವಣೆಯಿಂದ ತಪ್ಪಿಸಿಕೊಳ್ಳಲು ಬಯಸುತ್ತಿರುವ ಕಾರಣ, ಮುನ್ಸಿಪಲ್‌ಗಳನ್ನು ಒಗ್ಗೂಡಿಸುವ ನೆಪವನ್ನು ಮುಂದೊಡ್ಡಿದೆ” ಎಂದು ಆರೋಪಿಸಿದ್ದಾರೆ.

ಬಿಜೆಪಿಯ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ ಅವರು, “ದೆಹಲಿ ಸರ್ಕಾರವು ತನ್ನ ಬಜೆಟ್ ಅನ್ನು ಮೂರು ಪಟ್ಟು ಹೆಚ್ಚಿಸಬಹುದಾದರೆ, ಎಂಸಿಡಿ ಬಜೆಟ್ ಏಕೆ ಹೆಚ್ಚಾಗುತ್ತಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕಸ ವಿಲೇವಾರಿ, ಬಿಡಾಡಿ ಜಾನುವಾರುಗಳು, ದುರ್ವಾಸನೆ ಮತ್ತು ಚರಂಡಿಗಳಿಗೆ ಸಂಬಂಧಿಸಿದ ಸಮಸ್ಯೆಗಳು ನಾಗರಿಕರ ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಬೀರಬಹುದು ಎಂದು ಪಾಠಕ್ ಎಚ್ಚರಿಸಿದ್ದಾರೆ.

“ಸುತ್ತಲೂ ಕಸದ ಬೆಟ್ಟಗಳು, ತುಂಬಿ ಹರಿಯುವ ಚರಂಡಿಗಳು… ಇದು ದೆಹಲಿಯ ಜನರಿಗೆ ಮಾಡುತ್ತಿರುವ ಅವಮಾನ. ಒಬ್ಬರ ಮನೆ ಒಳಗೆ ಎಷ್ಟೇ ಸುಂದರವಾಗಿದ್ದರೂ, ಹೊರಗೆ ಒಂದು ಹೆಜ್ಜೆ ಇರಿಸಿದಾಗ ಮನಸ್ಥಿತಿ ಹಾಳಾಗುತ್ತಿದೆ” ಎಂದಿದ್ದಾರೆ.

ಭ್ರಷ್ಟ ಎಂಸಿಡಿಯಿಂದಾಗಿ ದೆಹಲಿಯಲ್ಲಿ ಭೂ ಮಾಫಿಯಾ ಇದೆ. ದೆಹಲಿಯ 80% ರಷ್ಟು ಅನಧಿಕೃತ ಕಾಲೋನಿಗಳಲ್ಲಿ ಜನರು ವಾಸುತ್ತಿದ್ದಾರೆ. ನೈರ್ಮಲ್ಯ ಕಾಪಾಡುತ್ತಿಲ್ಲ. ಕಸ ವಿಲೇವಾರಿ ಸಮಸ್ಯೆ ಬಿಗಡಾಯಿಸಿದೆ.

ಬಿಜೆಪಿಯನ್ನು ಮುನ್ಸಿಪಾಲ್‌ ಚುನಾವಣೆಯಲ್ಲಿ ಎಎಪಿ ಬಗ್ಗುಬಡಿಯಲಿದೆ ಎಂದು ಪಾಠಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಏಕಾಏಕಿ ಚುನಾವಣೆ ಏಕೆ ವಿಳಂಬವಾಯಿತು ಎಂಬುದು ದೊಡ್ಡ ಪ್ರಶ್ನೆಯಾಗಿದೆ ಎಂದಿದ್ದಾರೆ. ಈ ಏಕೀಕರಣ ಯೋಜನೆಯು ಎಲ್ಲಿಂದ ಹುಟ್ಟಿಕೊಂಡಿತು? ಎಂದು ಪ್ರಶ್ನಿಸಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಅಭೂತಪೂರ್ವ ಗೆಲುವು ಪಡೆದಿದ್ದು, ಹೀಗಾಗಿ ಚುನಾವಣೆಯನ್ನು ವಿಳಂಬ ಮಾಡುವಂತೆ ಬಿಜೆಪಿಯು ರಾಜ್ಯ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಎಎಪಿ ಮೂಲಗಳು ಆರೋಪಿಸಿವೆ.

ಹಿರಿಯ ಎಎಪಿ ನಾಯಕ ಗೋಪಾಲ್ ರೈ, “ಪಂಜಾಬ್‌ನಲ್ಲಿ ನಮ್ಮ ಪ್ರಚಂಡ ವಿಜಯದ ನಂತರ ದೆಹಲಿ ಮುನ್ಸಿಪಲ್‌ಗಳ ಚುನಾವಣೆಗಳನ್ನು ನಡೆಸುವುದಕ್ಕಾಗಿ ನಾವು ಹೋರಾಟ ನಡೆಸುವ ಅಗತ್ಯವಿದೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ” ಎಂದು ಕುಟುಕಿದ್ದಾರೆ.

ಆದರೆ ಬಿಜೆಪಿಗೆ ಚುನಾವಣೆಯ ಭಯವಿಲ್ಲ ಎಂದು ದೆಹಲಿ ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

“ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟ ಮದ್ಯ ನೀತಿಯಿಂದಾಗಿ ಜನರಲ್ಲಿ ವ್ಯಾಪಕ ಅಸಮಾಧಾನ ಇರುವುದರಿಂದ ಚುನಾವಣೆಯ ಭಯವಿದೆ” ಎಂದು ಆದೇಶ್ ಗುಪ್ತಾ ತಿಳಿಸಿದ್ದಾರೆ.

“ಚುನಾವಣಾ ಆಯೋಗವನ್ನು ಪ್ರಶ್ನಿಸುವುದು ಕೇಜ್ರಿವಾಲ್ ಅವರ ಅರಾಜಕವಾದಿ ದೃಷ್ಟಿಕೋನಗಳಿಗೆ ಸಾಕ್ಷಿಯಾಗಿದೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ವರದಿ: ದಿ ವೈರ್‌


ಇದನ್ನೂ ಓದಿರಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...