Homeಮುಖಪುಟರಾಜಕೀಯ ಪಕ್ಷಗಳು ಚುನಾವಣಾ ಭರವಸೆಗಳನ್ನು ಈಡೇರಿಸದಿದ್ದರೆ ದಂಡ ವಿಧಿಸಲು ಸಾಧ್ಯವಿಲ್ಲ: ಅಲಹಾಬಾದ್ ಹೈಕೋರ್ಟ್

ರಾಜಕೀಯ ಪಕ್ಷಗಳು ಚುನಾವಣಾ ಭರವಸೆಗಳನ್ನು ಈಡೇರಿಸದಿದ್ದರೆ ದಂಡ ವಿಧಿಸಲು ಸಾಧ್ಯವಿಲ್ಲ: ಅಲಹಾಬಾದ್ ಹೈಕೋರ್ಟ್

2014ರ ಲೋಕಸಭೆ ಚುನಾವಣೆಯ ಸಮಯಲ್ಲಿ ನೀಡಿದ್ದ ಭರವಸೆಯನ್ನು ಬಿಜೆಪಿ ಈಡೇರಿಸಿಲ್ಲ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಕೆಯಾಗಿತ್ತು

- Advertisement -
- Advertisement -

ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾದರೆ ರಾಜಕೀಯ ಪಕ್ಷಗಳಿಗೆ ದಂಡ ವಿಧಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್‌‌ ಹೈಕೋರ್ಟ್‌‌ ಅಭಿಪ್ರಾಯಪಟ್ಟಿದೆ. 2014ರ ಲೋಕಸಭೆ ಚುನಾವಣೆಯ ಸಮಯ ಬಿಜೆಪಿಯ ಅಧ್ಯಕ್ಷರಾಗಿದ್ದ ಅಮಿತ್ ಶಾ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾದ ಆರೋಪದ ಮೇಲೆ ಬಿಜೆಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಅರ್ಜಿ ಸಲ್ಲಿಕೆಯಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕೆಳ ನ್ಯಾಯಾಲಯಗಳು ನೀಡಿದ ಆದೇಶವನ್ನು ಪ್ರಶ್ನಿಸಿ ಮಾರ್ಚ್ 2 ರಂದು ಹೈಕೋರ್ಟ್‌‌ಗೆ ಅರ್ಜಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್‌ ಅರ್ಜಿಯನ್ನು ವಜಾಗೊಳಿಸಿದೆ. ಪ್ರಕರಣದ ತೀರ್ಪು ಗುರುವಾರ ಹೊರಬಿದ್ದಿದೆ.

ಇದನ್ನೂ ಓದಿ: ಹಿಜಾಬ್‌ ತೀರ್ಪಿನಲ್ಲಿ ಅಗತ್ಯ ಸಂಗತಿಗಳನ್ನು ಬದಿಗಿಟ್ಟ ಹೈಕೋರ್ಟ್: ವಿದ್ಯಾರ್ಥಿ ಸಂಘಟನೆಗಳ ಆಕ್ಷೇಪ

ನ್ಯಾಯಮೂರ್ತಿ ದಿನೇಶ್ ಪಾಠಕ್ ಅವರ ಏಕಸದಸ್ಯ ಪೀಠವು ಹೀಗೆ ಹೇಳಿದೆ: “ಯಾವುದೇ ರಾಜಕೀಯ ಪಕ್ಷವು ಪ್ರಕಟಿಸುವ ಚುನಾವಣಾ ಪ್ರಣಾಳಿಕೆಯು ಅವರ ನೀತಿ, ದೃಷ್ಟಿಕೋನ, ಭರವಸೆ ಮತ್ತು ಪ್ರತಿಜ್ಞೆಯ ಹೇಳಿಕೆಯಾಗಿದೆ. ಚುನಾವಣೆಯ ಸಮಯದಲ್ಲಿ, ಇದು ಬಂಧಿಸುವ ಶಕ್ತಿಯಲ್ಲ ಮತ್ತು ನ್ಯಾಯಾಲಯದ ಮೂಲಕ ಅದನ್ನು ಕಾರ್ಯಗತಗೊಳಿಸಲಾಗುವುದಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ವಿಫಲವಾದಲ್ಲಿ ರಾಜಕೀಯ ಪಕ್ಷಗಳನ್ನು ಜಾರಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ತರಲು ಯಾವುದೇ ಕಾನೂನಿನಡಿಯಲ್ಲಿ ಯಾವುದೇ ದಂಡದ ಅವಕಾಶವಿಲ್ಲ”

2014ರ ಲೋಕಸಭೆ ಚುನಾವಣೆಯಲ್ಲಿ ಆಗಿನ ಪಕ್ಷದ ಅಧ್ಯಕ್ಷ ಅಮಿತ್ ಶಾ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲು ವಿಫಲವಾದ ಆರೋಪದ ಮೇಲೆ ಬಿಜೆಪಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಖುರ್ಷಿದುರೆಹಮಾನ್ ಎಸ್. ರೆಹಮಾನ್ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿತ್ತು.

ಇದನ್ನೂ ಓದಿ: ಅಪ್ಪು ಹೆಸರಲ್ಲಿ ಮುಸ್ಲಿಮರ ವಿರುದ್ಧ ದ್ವೇಶ ಬಿತ್ತಲು ಯತ್ನಿಸಿದ ಪೋಸ್ಟ್‌ಕಾರ್ಡ್; ಜನರಿಂದ ತರಾಟೆ

“ಆದ್ದರಿಂದ, ಅಮಿತ್‌ ಶಾ ಅವರು ಮೋಸ, ವಂಚನೆ, ನಂಬಿಕೆಯ ಕ್ರಿಮಿನಲ್‌ ಉಲ್ಲಂಘನೆ, ಅಪ್ರಾಮಾಣಿಕತೆ, ಮಾನನಷ್ಟ, ಆಮಿಷ ಒಡ್ಡಿ ಮೋಸ ಮಾಡುವ ಅಪರಾಧವನ್ನು ಮಾಡಿದ್ದಾರೆ” ಎಂದು ಅರ್ಜಿದಾರರು ತನ್ನ ಅರ್ಜಿಯಲ್ಲಿ ಆರೋಪಿಸಿದ್ದರು.

ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (3) ಅಡಿಯಲ್ಲಿ 2020ರ ಅಕ್ಟೋಬರ್‌‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ಅಲಿಗಢ ನ್ಯಾಯಾಲಯವು ತಿರಸ್ಕರಿಸಿದೆ. ಅರ್ಜಿದಾರರ ಪರ ವಕೀಲರು ತನ್ನ ವಾದದಲ್ಲಿ ಎರಡೂ ಕೆಳ ನ್ಯಾಯಾಲಯಗಳು ಅಕ್ರಮವಾಗಿ ಅರ್ಜಿಯನ್ನು ತಿರಸ್ಕರಿಸಿದವು ಎಂದು ಹೇಳಿದ್ದರು.

ಆದಾಗ್ಯೂ, ಚುನಾವಣೆಯ ಭ್ರಷ್ಟ ಅಭ್ಯಾಸಗಳನ್ನು ಅಳವಡಿಸಿಕೊಂಡಿದ್ದಕ್ಕಾಗಿ ಒಟ್ಟಾರೆಯಾಗಿ ರಾಜಕೀಯ ಪಕ್ಷವನ್ನು ಜನಪ್ರತಿನಿಧಿ ಕಾಯ್ದೆ-1951 ರ ಅಡಿಯಲ್ಲಿ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣ: ಶಂಕಿತ ಭಯೋತ್ಪಾದಕ ಆದಿತ್ಯ ರಾವ್‌ ಅಪರಾಧ ಸಾಬೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...