Homeಮುಖಪುಟ‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

‘ಮಾಬ್‌ ಲಿಂಚಿಂಗ್‌ ವಿರೋಧಿ ಮಸೂದೆ’ಗೆ ಸಹಿ ಹಾಕಲು ನಿರಾಕರಿಸಿದ ಜಾರ್ಖಂಡ್‌ ರಾಜ್ಯಪಾಲ

- Advertisement -
- Advertisement -

ಮೂರು ತಿಂಗಳ ಹಿಂದೆ ಅಂಗೀಕರಿಸಿದ ‘ಲಿಂಚಿಂಗ್‌ ವಿರೋಧಿ ಮಸೂದೆ’ಯನ್ನು ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಅವರು ಸಹಿ ಹಾಕಲು ನಿರಾಕರಿಸಿದ್ದು ರಾಜ್ಯ ಸರ್ಕಾರಕ್ಕೆ ವಾಪಾಸು ಕಳುಹಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಶುಕ್ರವಾರ ವರದಿ ಮಾಡಿದೆ. ಜಾರ್ಖಂಡ್‌ ವಿಧಾನಸಭೆಯು ಡಿಸೆಂಬರ್‌ 12 ರಂದು ಗುಂಪು ಹಿಂಸಾಚಾರ ಮತ್ತು ಗುಂಪು ಹತ್ಯೆ ತಡೆ ಮಸೂದೆ, 2021 ಅನ್ನು ಅಂಗೀಕರಿಸಿತ್ತು.

ಆದರೆ, ‘ಗುಂಪು’ (Mob-ಗುಂಪು) ಪದದ ವ್ಯಾಖ್ಯಾನವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ರಮೇಶ್‌‌‌ ಬೈಸ್‌‌ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. (ಮಾಬ್‌ ಲಿಂಚಿಂಗ್ ಅನ್ನು ಕನ್ನಡದಲ್ಲಿ ‘ಗುಂಪು ಹತ್ಯೆ’ ಎಂದು ಬರೆಯಲಾಗುತ್ತದೆ)

ಇದನ್ನೂ ಓದಿ: ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್: ಲಿಂಗಸಗೂರಿನಲ್ಲಿ ಮುಸ್ಲಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಳೆದ ಡಿಸೆಂಬರ್‌ನಲ್ಲಿ, ಬಿಜೆಪಿ ಶಾಸಕ ಅಮಿತ್ ಕುಮಾರ್ ಮಂಡಲ್ ಅವರು ‘ಗುಂಪು’ ಎಂಬ ಪದವನ್ನು ಸರಿಯಾಗಿ ವ್ಯಾಖ್ಯಾನಿಸಲಾಗಿಲ್ಲ ಮತ್ತು ಅದನ್ನು ದುರುಪಯೋಗಪಡಿಸಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ವಿಧೇಯಕವನ್ನು ವಿಧಾನಸಭೆಯಲ್ಲಿ ಚರ್ಚೆ ನಡೆಸುತ್ತಿದ್ದಾಗ ಬಿಜೆಪಿ ಅದನ್ನು ವಿರೋಧಿಸಿ, ತುಷ್ಟೀಕರಣ ರಾಜಕಾರಣ ಮಾಡುವ ಯತ್ನ ಎಂದು ಆರೋಪಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ್ದ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್‌ ಅವರು, ಬಿಜೆಪಿ ಜನರಲ್ಲಿ ಗೊಂದಲ ಮೂಡಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದರಯ. ‘ನಾವು ಗುಂಪು ಹತ್ಯೆ(ಮಾಬ್‌ ಲಿಂಚ್‌) ಕಾಯಿದೆಯ ಬಗ್ಗೆ ಮಾತನಾಡುತ್ತಿದ್ದೇವೆ, ಅದು ಮುಸ್ಲಿಂ ಹತ್ಯೆ ಕಾಯಿದೆಯೊ, ಆದಿವಾಸಿ ಹತ್ಯೆ ಕಾಯಿದೆಯೊ ಅಥವಾ ಹಿಂದೂ ಹತ್ಯೆ ಕಾಯಿದೆಯೊ ಅಲ್ಲ…ಗುಂಪು ಅಂದರೆ ಗುಂಪು ಅಷ್ಟೆ” ಎಂದು ಅವರು ಕೇಳಿದ್ದರು.

ಫೆಬ್ರವರಿ 11 ರಂದು, ಬುಡಕಟ್ಟು ಸಮುದಾಯಗಳ ಪ್ರತಿನಿಧಿಯಾಗಿ ‘ಜಂಜಾಟಿ ಸುರಕ್ಷಾ ಮಂಚ್’ ಎಂಬ ಸಂಘಟನೆಯ ಕೆಲವು ಸದಸ್ಯರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ರಾಜ್ಯಪಾಲರೊಂದಿಗೆ ಮಸೂದೆಯನ್ನು ಅನುಮೋದಿಸದಂತೆ ಕೇಳಿಕೊಂಡಿದ್ದರು. ಈ ಮಸೂದೆಯು ಬುಡಕಟ್ಟು ಸಮುದಾಯದ ವಿಶೇಷ ಕಾನೂನು ನಿಬಂಧನೆಗಳನ್ನು ದುರ್ಬಲಗೊಳಿಸಿದೆ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಹೈಕೋರ್ಟ್ ಹಿರಿಯ ವಕೀಲ ಎಸ್.ಬಾಲನ್ ಅವರೊಂದಿಗೆ ಸಂದರ್ಶನ; ಮನುವಾದಕ್ಕೆ ಅಂಬೇಡ್ಕರ್ ಎಂದರೆ ಅಸಹನೆ 

ಈ ಮಸೂದೆಯು ‘ಲಿಂಚಿಗ್‌‌’ ಅನ್ನು, “ಧರ್ಮ, ಜನಾಂಗ, ಜಾತಿ, ಲಿಂಗ, ಹುಟ್ಟಿದ ಸ್ಥಳ, ಭಾಷೆ, ಆಹಾರ ಪದ್ಧತಿಗಳು, ಲೈಂಗಿಕ ದೃಷ್ಟಿಕೋನ, ರಾಜಕೀಯ ಸಂಬಂಧ, ಜನಾಂಗೀಯತೆ ಅಥವಾ ಯಾವುದೇ ಇತರ ಹಿನ್ನಲೆಯ ಆಧಾರದ ಮೇಲೆ ಜನರ ಗುಂಪು ನಡೆಸುವ ಏಕಾಏಕಿ ಅಥವಾ ಯೋಜಿತವಾಗಿರುವ ಯಾವುದೇ ಹಿಂಸಾಚಾರದ ಅಥವಾ ಹತ್ಯೆಯ ಕೃತ್ಯ ಅಥವಾ ಸರಣಿ ಕೃತ್ಯ” ಎಂದು ವ್ಯಾಖ್ಯಾನಿಸಿತ್ತು.

ಮಾಬ್‌ ಲಿಂಚಿಂಗ್‌ ಅಲ್ಲಿ ತೊಡಗಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಬಹುದು ಮತ್ತು ಅಪರಾಧದ ತೀವ್ರತೆಗೆ ಅನುಗುಣವಾಗಿ 3 ಲಕ್ಷ ರೂ. ನಿಂದ 5 ಲಕ್ಷ ರೂ. ವರೆಗೆ ದಂಡ ವಿಧಿಸಬಹುದಾಗಿದೆ. ಒಂದು ವೇಳೆ ಮಾಬ್‌ ಲಿಂಚ್‌ ಸಮಯದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟರೆ, ಅಪರಾಧಿಗಳಿಗೆ 25 ಲಕ್ಷ ರೂ. ದಂಡ ವಿಧಸಬಹುದಾಗಿದೆ.

ಮಸೂದೆಯ ಅಡಿಯಲ್ಲಿರುವ ಎಲ್ಲಾ ಅಪರಾಧಗಳನ್ನು ಕಾಗ್‌‌ನೈಸಬಲ್, ಜಾಮೀನು ರಹಿತ ಮತ್ತು ಸಂಯೋಜಿತವಲ್ಲದಂತೆ ಮಾಡಲಾಗಿದೆ. ಮಾಬ್‌ ಲಿಂಚಿಂ‌ಗ್‌ ಅನ್ನು ಯೋಜಿಸುವ, ಬೆಂಬಲಿಸುವ ಅಥವಾ ಪ್ರಯತ್ನಿಸುವ ವ್ಯಕ್ತಿಗಳನ್ನು ಶಿಕ್ಷಿಸಲು ಇದು ಅವಕಾಶ ನೀಡಿದೆ.

ಮಸೂದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತರೆ, ಪಶ್ಚಿಮ ಬಂಗಾಳ, ರಾಜಸ್ಥಾನ ಮತ್ತು ಮಣಿಪುರದ ನಂತರ ಗುಂಪು ಹಿಂಸಾಚಾರದ ವಿರುದ್ಧ ಕಾನೂನನ್ನು ಅಂಗೀಕರಿಸಿದ ಭಾರತದ ನಾಲ್ಕನೇ ರಾಜ್ಯವಾಗಿ ಜಾರ್ಖಂಡ್ ಆಗಲಿದೆ.

ಇದನ್ನೂ ಓದಿ: ಕ್ರಿಮಿನಲ್ ಕಾನೂನುಗಳನ್ನು ಬದಲಿಸಲು ಕೇಂದ್ರ ಸಮಿತಿ; ಅಬ್ಜೆಕ್ಶನ್, ಮೈ ಲಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...