Homeಕರ್ನಾಟಕರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

ರಾಮನಗರ: ಕುಸಿದು ಬೀಳುವ ಅಪಾಯದಲ್ಲಿರುವ ಶತಮಾನ ಕಂಡ ಸರಕಾರಿ ಶಾಲೆ

- Advertisement -
- Advertisement -

ರಾಮನಗರ ಜಿಲೆಯಲ್ಲಿ ಹಲವು ಏಕೋಪಾಧ್ಯಾಯ, ಗ್ರಾಮೀಣ ಶಾಲೆಗಳು ಸಂಪೂರ್ಣ ಶಿಥಿಲಗೊಂಡಿದ್ದು, ಕುಸಿದು ಬೀಳುವಂತಹ ಅಪಾಯದ ಸ್ಥಿತಿಯಲ್ಲಿವೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಾಲೆಯ ಕಟ್ಟಡಗಳು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.

ಶತಮಾನ ಕಂಡ ಸರಕಾರಿ ಶಾಲೆಗಳೂ ಇದಕ್ಕೆ ಹೊರತಾಗಿಲ್ಲ. ಆಂಗ್ಲ ಹಾಗೂ ಕನ್ನಡ ಎರಡು ಮಾಧ್ಯಮದಲ್ಲಿ ಬೋಧನೆ ಮಾಡಲಾಗುತ್ತಿರುವ ಈ ಶಾಲೆಯಲ್ಲಿ ಕಟ್ಟಡದ್ದೇ ಸಮಸ್ಯೆಯಾಗಿದ್ದು, ಬಿದ್ದು ಹೋಗುವ ಭೀತಿಯಿಂದಾಗಿ ರಾಮನಗರ ತಾಲ್ಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲಾ ವ್ಯಾಪ್ತಿಗೆ ವರ್ಗಾವಣೆ ಮಾಡಲಾಗಿದೆ.

ರಾಮನಗರ ತಾಲೂಕಿನ ಹರಿಸಂದ್ರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ಶತಮಾನದಷ್ಟು ಹಳೆಯದಾಗಿದೆ. ಈ ಶಾಲಾ ಕಟ್ಟಡ ಕುಸಿದು ಬೀಳುವ ಹಂತ ತಲುಪಿದೆ.

ಇದನ್ನೂ ಓದಿ: ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?

1920ರಲ್ಲಿ ಅಂದಿನ ಬ್ರಿಟಿಷ್ ಭಾರತದಲ್ಲಿ ಈ ಕನ್ನಡ ಶಾಲೆಯ ಕಟ್ಟಡವನ್ನು ನಿರ್ಮಿಸಲಾಗಿತ್ತು. ಮೊದಲು 1ರಿಂದ 4 ನೇ ತರಗತಿವರೆಗೆ ಶಾಲೆ ನಡೆಯುತ್ತಿತ್ತು. 1935ರಲ್ಲಿ ಶಾಲಾ ವ್ಯಾಪ್ತಿಯನ್ನು , 5ರಿಂದ 7ನೇ ತರಗತಿ ತನಕ ವಿಸ್ತರಣೆ ಮಾಡಲಾಯಿತು.

ಶತಮಾನದಷ್ಟು ಹಳೆಯದಾದ ಈ ಸರ್ಕಾರಿ ಶಾಲೆಯಲ್ಲಿ ಈತನಕ ಸಾವಿರಾರು ಮಂದಿ ವಿದ್ಯಾರ್ಥಿಗಳು ಅಕ್ಷಾರಭ್ಯಾಸ ಮಾಡುವುದರ ಜತೆಗೆ, ಉನ್ನತ ಜೀವನವನ್ನು ಕಟ್ಟಿಕೊಂಡಿದ್ದಾರೆ. ಇಂತಹ ಭವ್ಯ ಐತಿಹಾಸಿಕ ಘನತೆ ಹೊಂದಿರುವ ಶಾಲೆ ಈಗ ಅಳಿವಿನ ಅಂಚಿಗೆ ತಲುಪಿದೆ.

ಕುಸಿದು ಬೀಳುತ್ತಿದೆ ಚಾವಣಿ:

ಶಾಲೆಯ ಮೇಲ್ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಅದಕ್ಕೆ ಹಾಕಿದ ಮರದ ಪಕಾಸು ರೀಪುಗಳು ಸಂಪೂರ್ಣ ದುರ್ಬಲಗೊಂಡಿದೆ. ಈಗಾಗಲೆ ಕೆಲವು ಹೆಂಚುಗಳು ಕೆಳಗೆ ಬಿದ್ದು ಒಡೆದು ಹೋಗಿವೆ. ಮಳೆ ಬಂದರೆ ನೀರು ತರಗತಿಗಳ ಒಳಗೆ ಮಡುಗಟ್ಟಿ ನಿಲ್ಲುತ್ತಿದ್ದು, ನೀರನ್ನು ಶುಚಿಗೊಳಿಸುವುದರಲ್ಲೇ ಕಾಲ ಕಳೆದು ಹೋಗುತ್ತಿದೆ. ಈ ಶಾಲೆಯನ್ನು ಜೀರ್ಣೋದ್ಧಾರಗೊಳಿಸಿ ಮಕ್ಕಳಿಗೆ ಉತ್ತಮ ಸೌಲಭ್ಯ ಕಲ್ಪಿಸಿಕೊಡಬೇಕಾದ ಶಿಕ್ಷಣ ಇಲಾಖೆ ಅಧಿಕಾರಿಗಳು ಮೈಮರೆತು ಕುಳಿತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಕಂಡಿದ್ದ ಸ್ಥಳೀಯರು ತಮ್ಮ ಮಕ್ಕಳನ್ನು ಶಾಲೆಯಿಂದ ಬಿಡಿಸಿ ಖಾಸಗಿ ಶಾಲೆಗಳಲ್ಲಿ ದಾಖಲು ಮಾಡಿದ್ದರು. ಆದರೆ ಕೊರೊನಾದಿಂದಾಗಿ ಮತ್ತೇ ಶಾಲೆಗೆ ದಾಖಲಾತಿ ಹೆಚ್ಚಾಗಿದೆ. ಅದರಲ್ಲೂ ಆಂಗ್ಲಮಾಧ್ಯಮ ನೀಡಿದ ಬಳಿಕ ಇಲ್ಲಿನ ದಾಖಲಾತಿಯು ಗಣನೀಯವಾಗಿ ಏರಿಕೆಯಾಗಿದೆ. ಶಾಲೆಯ ಒಟ್ಟು ಎಂಟು ಕೊಠಡಿಗಳಲ್ಲಿ ಏಳು ಸಂಪೂರ್ಣ ಶಿಥಿಲಗೊಂಡಿವೆ. ಉಳಿದಿರುವ ಒಂದು ಕೊಠಡಿಯಲ್ಲಿ 1ರಿಂದ 7ರ ತನಕ ತರಗತಿ ನಡೆಸುವುದು ಕಷ್ಟಕರವಾಗಿದೆ. ಹಾಳಾಗಿರುವ ಕೊಠಡಿಗಳನ್ನು ದುರಸ್ಥಿ ಮಾಡಿಸಿ, ವಿದ್ಯಾರ್ಥಿಗಳಿಗೆ ಉತ್ತಮ ತರಗತಿ ನೀಡಬೇಕೆಂಬುದು ಸ್ಥಳೀಯ ನಿವಾಸಿಗಳ ಒತ್ತಾಯವಾಗಿದೆ.

ಇದನ್ನೂ ಓದಿ: ದೆಹಲಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದು: ಉಪ ಮುಖ್ಯಮಂತ್ರಿ ಮನೀಷ್‌‌ ಸಿಸೋಡಿಯಾ

ಪಕ್ಕದ ಶಾಲೆಗಳಿಗೆ ಮಕ್ಕಳ ಸ್ಥಳಾಂತರ:

ಶಾಲೆಯ ಕಟ್ಟಡಗಳಿಂದಾಗಿ ಮಕ್ಕಳಿಗೆ ಹೊರೆಯಾಗುವುದನ್ನು ತಪ್ಪಿಸುವ ಸಲುವಾಗಿ ಪ್ರೌಢಶಾಲೆಯಲಿ ತರಗತಿಗಳನ್ನು ನಡೆಸಲಾಗುತ್ತಿದೆ. ಆದರೆ, ಆಂಗ್ಲ ಹಾಗೂ ಕನ್ನಡ ಮಾಧ್ಯಮ ಇರುವುದರಿಂದ ಹೆಚ್ಚಿನ ಕೊಠಡಿಗಳು ಬೇಕಾಗುತ್ತದೆ. ಈ ಸಮಸ್ಯೆಯನ್ನು ಅರಿತು ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಲಾದರೂ, ಶತಮಾನದಷ್ಟು ಹಳೆಯದಾದ ಶಾಲೆಗಳನ್ನು ಉಳಿಸಿಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ.

“ಶಾಲೆಯ ಕಟ್ಟಡಗಳು ದುರಸ್ಥಿಯಾಗಿರುವ ಕಾರಣ, ಪಕ್ಕದ ಪ್ರೌಢಶಾಲೆಯಲ್ಲಿ ತರಗತಿ ಮಾಡುತ್ತಿದ್ದೇವೆ. ಕಟ್ಟಡಗಳು ಶಿಥಿಲಾವಸ್ಥೆಗೆ ತಲುಪಿದೆ” ಎನ್ನುತ್ತಾರೆ ಹರಿಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಎಲ್.ವಿ. ರುದ್ರಾಣಿ.

“ಶತಮಾದಷ್ಟು ಹಳೆಯ ಶಾಲೆಯು ಸಂಪೂರ್ಣ ಶಿಥಿಲಗೊಂಡಿದೆ. ಕೊರೊನಾ ಬಿಕ್ಕಟ್ಟಿನಿಂದ ಪೋಷಕರು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದರು. ಸರ್ಕಾರಿ ಶಾಲೆಗಳ ದುಸ್ಥಿತಿ ನೋಡಿದರೆ, ಮರಳಿ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವುದು ಅನಿವಾರ್ಯ ಎನಿಸುತ್ತಿದೆ” ಎಂದು ಹನುಮಂತೇಗೌಡನದೊಡ್ಡಿ ನಿವಾಸಿ ಮಧುಸೂದನ್ ತಿಳಿಸಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ರಾಮನಗರ ಬಿಇಒ ಕುಮಾರಸ್ವಾಮಿ ಅವರು, “ಶಾಲಾ ಕಟ್ಟಡ ಶಿಥಿಲಗೊಂಡಿರುವುದರಿಂದ ಶಾಲೆಯನ್ನು ಲಾಕ್‌ ಮಾಡಿ, ತರಗತಿಗಳನ್ನು ಹೈಸ್ಕೂಲ್ ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದೇವೆ. ಅದನ್ನು ನೆಲಸಮಮಾಡಿ ಹೊಸ ಕಟ್ಟಡ ಕಟ್ಟುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಮುಂದಿನ ವರ್ಷ ಹೊಸ ಕಟ್ಟಡ ಕಟ್ಟುವ ಬಗ್ಗೆ ನಿರೀಕ್ಷೆಯಲ್ಲಿ ಇದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...