Homeಕರ್ನಾಟಕದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

- Advertisement -
- Advertisement -

ದಲಿತ ಯುವತಿಯನ್ನು ಪ್ರೀತಿಸಿ ಆನಂತರ ಮದುವೆಯಾಗಲು ನಿರಾಕರಿಸಿದ ಸವರ್ಣೀಯ ಯುವಕ, ನಂತರ ಪೆಟ್ರೋಲ್ ಸುರಿದು ಯುವತಿಯನ್ನು ಕೊಲೆ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಉಪ ತಹಶೀಲ್ದಾರ್‌ ಅಶೋಕ್‌ ಶರ್ಮಾ ಅವರ ಮಗಳಾದ ದಾನೇಶ್ವರಿ (23) ಅವರನ್ನು, ಬಾದಾಮಿ ಮೂಲದ ಲಿಂಗಾಯತ ಜಾತಿಗೆ ಸೇರಿದ ಶಿವಕುಮಾರ್‌ ಹಿರೇಹಾಳ ಕೊಲೆ ಮಾಡಿದ್ದನು. ಪೆಟ್ರೋಲ್‌ ಸುರಿದು ಹತ್ಯೆಗೈದು ಪರಾರಿಯಾಗಿದ್ದನು. ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಆಕೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿತ್ತು. ದಾನೇಶ್ವರಿಯ ತಂಗಿ ತೇಜೇಶ್ವರಿ ನೀಡಿದ ದೂರಿನ ಆಧಾರದ ಮೇಲೆ ಪರಾರಿಯಾಗಿರುವ ಶಿವಕುಮಾರ್ ಚಂದ್ರಶೇಖರ್ ಹಿರೇಹಾಳ ಎಂಬ ಯುವಕನ ಮೇಲೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಪವನ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಪ್ರಮುಖ ಆರೋಪಿ ಶಿವಕುಮಾರ್‌ನನ್ನು ಎಲ್ಲ ಸೆಕ್ಷನ್‌ ಅಡಿಯಲ್ಲಿ ಬಂಧಿಸಲಾಗಿದೆ. ಕೊಲೆಯಲ್ಲಿ ಭಾಗಿಯಾಗಿರುವ ಈತನ ಸ್ನೇಹಿತರ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಸಾಕ್ಷ್ಯಾಧಾರಗಳು ಸಿಕ್ಕಲ್ಲಿ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗುವುದು” ಎಂದು ತಿಳಿಸಿದ್ದಾರೆ.

ಹತ್ಯೆಗೊಳಗಾದ ದಾನೇಶ್ವರಿ ಮತ್ತು ಆರೋಪಿ ಶಿವಕುಮಾರ್ ಇಬ್ಬರು ವಿಜಯಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದಾಗ ಪರಸ್ಪರ ಪ್ರೀತಿಸುತ್ತಿದ್ದರು. ವಿದ್ಯಾಭ್ಯಾಸ ಮುಗಿದ ನಂತರ ಅವರಿಬ್ಬರೂ ಒಟ್ಟಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಈ ವೇಳೆ ಆರೋಪಿ ಶಿವಕುಮಾರ್ ಮದುವೆಯಾಗುವುದಾಗಿ ದಾನೇಶ್ವರಿಗೆ ಮಾತು ಕೊಟ್ಟಿದ್ದ ಎಂದು ಆಕೆಯ ತಂಗಿ ಪೊಲೀಸರಿಗೆ ತಿಳಿಸಿದ್ದಾರೆ.

ದಾನೇಶ್ವರಿಯು ಮದುವೆ ವಿಚಾರವನ್ನು ಶಿವಕುಮಾರ್ ಬಳಿ ಮಾತನಾಡಿದಾಗ ಆತ ತನ್ನ ಪೋಷಕರೊಂದಿಗೆ ಚರ್ಚಿಸಿ ತಿಳಿಸುವುದಾಗಿ ಹೇಳಿದ್ದ. ವಿಜಯಪುರಕ್ಕೆ ಹೋಗಿ ಬಂದ ಬಳಿಕ ನಿನ್ನನ್ನು ಮದುವೆಯಾಗುವುದಿಲ್ಲ, ನಮ್ಮ ಮನೆಯವರು ಮದುವೆಗೆ ಒಪ್ಪಿಲ್ಲ, ಏಕೆಂದರೆ ನೀನು ಕೆಳಜಾತಿಗೆ ಸೇರಿರುವೆ ಎಂದು ನಿಂದಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮಾರ್ಚ್ 15ರಂದು ದಾನೇಶ್ವರಿಯು ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿದಾಗಲೂ ನೀನು ಕೆಳಜಾತಿ ಎಂದು ಜಾತಿನಿಂದನೆ ಮಾಡಿ ಹೀಯಾಳಿಸಿದ್ದ. ಅಲ್ಲದೆ ಈಗ ಮಾತನಾಡಲು ಸಾಧ್ಯವಿಲ್ಲ ಎಂದು ಯಾರು ಇಲ್ಲದ ಜಾಗಕ್ಕೆ ದಾನೇಶ್ವರಿಯನ್ನು ಕರೆಸಿಕೊಂಡು ಶಿವಕುಮಾರ್ ಮತ್ತು ಆತನ ಸ್ನೇಹಿತರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ದಲಿತ ದೌರ್ಜನ್ಯ ತಡೆ ಕಾಯ್ದೆ ಮತ್ತು ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮದುವೆ ವಿಚಾರವಾಗಿ ದಾನೇಶ್ವರಿ ಹಾಗೂ ಶಿವಕುಮಾರ್‌ ನಡುವೆ ಗಲಾಟೆಯಾಗಿತ್ತು. ಈ ವೇಳೆ ಮೂವರು ಯುವಕರು ಹಿಂದಿನಿಂದ ಬಂದು ದಾನೇಶ್ವರಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಗಾಯಗೊಂಡ ದಾನೇಶ್ವರಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ದಾನೇಶ್ವರಿ ಮೃತಪಟ್ಟಿದ್ದಾರೆ.

ಯುವತಿಯ ತಂದೆ ಅಶೋಕ್ ಶರ್ಮ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, “ದಾನೇಶ್ವರಿಗೆ ಮದುವೆ ಮಾಡಲು ನಾವು ಸಿದ್ಧತೆಯಲ್ಲಿದ್ದೆವು. ಆದರೆ ಈ ವೇಳೆ ತನ್ನ ಪ್ರೇಮದ ವಿಚಾರ ನಮಗೆ ತಿಳಿಸಿದ್ದಳು. ಇಬ್ಬರೂ ಒಂದೇ ಕಾಲೇಜಿನಲ್ಲಿ ಓದುವಾಗ ಪರಸ್ಪರ ಪ್ರೀತಿಸಿದ್ದಾರೆ. ನಾನು ಅವನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಳು. ಆದರೆ ಅವನು ಒಪ್ಪಿರಲಿಲ್ಲ. ಮದುವೆಯಾಗಲು ಕೇಳಿದಾಗ ಜಾತಿ ವಿಚಾರ ಹೇಳಿದ್ದಾನೆ. ನಿನ್ನ ಮದುವೆಯಾದರೆ ನನ್ನ ತಂದೆ ತಾಯಿ ಮನೆಗೆ ಸೇರಿಸುವುದಿಲ್ಲ ಎಂದು ಹೇಳಿರುವುದಾಗಿ ಮಗಳು ತಿಳಿಸಿದ್ದಳು” ಎಂದಿದ್ದಾರೆ.

“ನಮ್ಮ ಮಗಳು ಕೆಲಸಕ್ಕೆ ಸೇರಲು ಕೋರ್ಸ್ ಮಾಡುತ್ತಿದ್ದಳು. ಹೀಗಾಗಿ ಬಿಟಿಎಂ ಲೇಔಟ್‌ನ ಪಿಜಿಯಲ್ಲಿ ವಾಸವಿದ್ದಳು. ಇದೇ ತಿಂಗಳ 16ರಂದು ರಾತ್ರಿ ಈ ಘಟನೆ ವಿಚಾರ ನಮಗೆ ತಿಳಿಯಿತು. ಕೂಡಲೇ ಮಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲು ದುಡ್ಡು ಕೂಡ ಹಾಕಿದ್ದೆ. ಹುಡುಗಿಯೇ ಪೆಟ್ರೋಲ್ ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ ಶಿವಕುಮಾರನು ಮುಖ್ಯ ರಸ್ತೆಯ ಖಾಲಿ ಜಾಗದಲ್ಲಿ ಪೆಟ್ರೋಲ್ ಹಾಕಿದ್ದಾನೆ. ಅವನೇ ಬಂದು ಆಸ್ಪತ್ರೆಗೆ ಸೇರಿಸಿ ನಮ್ಮ ನಂಬರ್‌ ಕೊಟ್ಟಿದ್ದಾನೆ” ಎಂದು ಯುವತಿಯ ತಂದೆ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಪ್ರಪೊಗಾಂಡ ಸಿನಿಮಾಕ್ಕೆ 6 ತಿಂಗಳು ತೆರಿಗೆ ವಿನಾಯಿತಿ; ಬಡವರ ಜ್ಯೋತಿಗೆ ಬರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...