Homeಕರ್ನಾಟಕಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

- Advertisement -
- Advertisement -

ಬಜರಂಗದಳ ಮುಖಂಡನಿಂದ ಇತ್ತೀಚೆಗೆ ಕೊಲೆಯಾದ ಬೆಳ್ತಂಗಡಿಯ ದಲಿತ ಯುವಕ, ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತ ದಿನೇಶ್ ಕನ್ಯಾಡಿ ಅವರ ಮನೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತ್ವಾನ ಹೇಳಿದ್ದಾರೆ.

ವೈಯಕ್ತಿಕ ಪರಿಹಾರವಾಗಿ ಒಂದು ಲಕ್ಷ ರೂ.ಗಳನ್ನು ಮೃತನ ಕುಟುಂಬದವರಿಗೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ. ಮಾಜಿ ಶಾಸಕ ವಸಂತ ಬಂಗೇರ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹಾಜರಿದ್ದರು.

ಪ್ರಕರಣದ ಕುರಿತು ಈ ಹಿಂದೆ ಪ್ರತಿಕ್ರಿಯೆ ನೀಡಿದ್ದ ಅವರು, ಧರ್ಮಸ್ಥಳದಲ್ಲಿ ದಿನೇಶ್ ಎಂಬ ದಲಿತ ಯುವಕನನ್ನು ಹತ್ಯೆಗೈದ ಬಜರಂಗದಳ ಮುಖಂಡನನ್ನು ಬಿಜೆಪಿ ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ಈ ಕೂಡಲೇ ದಲಿತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದರು.

ಈ ಕುರಿತು ಟ್ವೀಟ್ ಮಾಡಿದ್ದ ಅವರು, “ಧರ್ಮಸ್ಥಳದಲ್ಲಿ ನಡೆದಿರುವ ದಲಿತ ಯುವಕ‌ ದಿನೇಶ್ ಅವರ ಹತ್ಯೆ ಅತ್ಯಂತ ಖಂಡನೀಯ. ಕೊಲೆ ಆರೋಪಿ ಬಜರಂಗದಳದ ನಾಯಕ‌ನಾಗಿರುವ ಕಾರಣಕ್ಕೆ ಮೃತನ ಕುಟುಂಬ ಆತಂಕಕ್ಕೀಡಾಗಿದೆ. ಪೊಲೀಸರು ರಾಜಕೀಯ ಪ್ರಭಾವಕ್ಕೆ‌‌ ಮಣಿಯದೆ ಕೊಲೆ ಆರೋಪಿಯ‌ನ್ನು ತಕ್ಷಣ ಬಂಧಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ರಕ್ಷಣೆ ನೀಡಬೇಕು” ಎಂದು ಒತ್ತಾಯಿಸಿದ್ದರು.

“ಹಿಂದೂಗಳ ರಕ್ಷಣೆಯ ಮಂತ್ರ ಜಪಿಸುತ್ತಿರುವ ಬಿಜೆಪಿಯು ಧರ್ಮಸ್ಥಳದ ದಲಿತ ಯುವಕನ ಹತ್ಯೆಕೋರನ ರಕ್ಷಣೆಗೆ ನಿಂತಿರುವುದು ಆತ್ಮವಂಚನೆಯ ನಡವಳಿಕೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಾವಿನ ರಾಜಕೀಯ ಮಾಡಲು ಹೋಗದೆ ಮೃತಯುವಕನ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದರು.

ಫೆಬ್ರವರಿ 23 ರಂದು ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ಕನ್ಯಾಡಿಯ ಕೃಷ್ಣ ಎಂಬ ಬಜರಂಗದಳದ ಮುಖಂಡ ಅದೇ ಗ್ರಾಮದ ದಿನೇಶ್ ಎಂಬ ದಲಿತ ಯುವಕನ ಮೇಲೆ ತೀವ್ರ ರೀತಿಯಲ್ಲಿ ಹಲ್ಲೆ ನಡೆಸಿದ್ದನು. ಆ ದೃಶ್ಯಗಳು ಸಿಸಿಕ್ಯಾಮೆರಾದಲ್ಲಿ ದಾಖಲಾಗಿದ್ದು, 45 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಆನಂತರ ಫೆಬ್ರವರಿ 24 ರಂದು ಆಸ್ಪತ್ರೆಗೆ ಸೇರಿಸಲಾಯಿತಾದರೂ ಫೆಬ್ರವರಿ 25 ರಂದು ದಿನೇಶ್ ಸಾವನಪ್ಪಿದ್ದರು.

ಈ ಕುರಿತು ಮೃತನ ತಾಯಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದಲಿತ ದೌರ್ಜನ್ಯ ತಡೆ ಕಾಯ್ದೆ, ಕೊಲೆ ಪ್ರಕರಣ ದಾಖಲಾಗಿತ್ತು.

ಧರ್ಮಸ್ಥಳ
ಸಿಸಿ ಕ್ಯಾಮರದಲ್ಲಿ ದಾಖಲಾದ ಹಲ್ಲೆ. ಬಲ ಭಾಗದಲ್ಲಿರುವುದು ಆರೋಪಿ ಕೃಷ್ಣ

ವಿವಿಧ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ “ಯುವಕರ ನಡೆ ಸಾಮರಸ್ಯದ ಕಡೆ” ಕಾರ್ಯಕ್ರಮವನ್ನು ಸಿದ್ದರಾಮಯ್ಯ ಉದ್ಘಾಟಿಸಿದರು. ಸಂವಿಧಾನದ ಮೂಲ ಆಶಯವಾದ ಸೌಹಾರ್ದಯುತ, ಸಾಮರಸ್ಯದ ಸಮಾಜ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷ ಸದಾ ಬದ್ಧವಾಗಿರಲಿದೆ ಎಂದು ಅವರು ತಿಳಿಸಿದ್ದಾರೆ.

ಭೂ ಸುಧಾರಣೆ ಕಾಯಿದೆ ಜಾರಿಯಾಗಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ಉಡುಪಿಯ ಹಿರಿಯಡಕದಲ್ಲಿ ಇಂದು ಆಯೋಜಿಸಿದ್ದ ಸುವರ್ಣ ಮಹೋತ್ಸವ ಸಮಾರಂಭವನ್ನು ಸಿದ್ದರಾಮಯ್ಯ ಉದ್ಘಾಟಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ, ಮಾಜಿ ಸಚಿವರಾದ ವಿನಯಕುಮಾರ ಸೊರಕೆ, ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮೊಯಿದ್ದೀನ್ ಬಾವಾ, ಐವಾನ್ ಡಿಸೋಜ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಹಾಜರಿದ್ದರು.


ಇದನ್ನೂ ಓದಿರಿ: ದಲಿತ ಯುವತಿ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...