Homeಮುಖಪುಟಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ವಿದೇಶಿ ಭಾಷೆಯಿಂದಾಗಿ ಶಿಕ್ಷಣ ಗಣ್ಯರಿಗೆ ಸೀಮಿತಗೊಂಡಿದೆ. ಜ್ಞಾನದ ನಿಧಿಯಾದ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು ಎಂದು ಹೇಳಿದ್ದಾರೆ.

- Advertisement -
- Advertisement -

ಶಿಕ್ಷಣದ ಕೇಸರಿಕರಣದಲ್ಲಿ ತಪ್ಪೇನಿದೆ ಎಂದು ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಶನಿವಾರ ಕೇಳಿದ್ದು, ದೇಶದ ಜನರು ತಮ್ಮ ‘ವಸಾಹತುಶಾಹಿ ಮನಸ್ಥಿತಿಯನ್ನು’ ತ್ಯಜಿಸಿ ಮತ್ತು ತಮ್ಮದೇ ಆದ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಯಬೇಕೆಂದು ಅವರು ಹೇಳಿದ್ದಾರೆ.

ಹರಿದ್ವಾರದ ದೇವ್ ಸಂಸ್ಕೃತಿ ವಿಶ್ವ ವಿದ್ಯಾಲಯದಲ್ಲಿ ಸೌತ್ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ಪೀಸ್ ಮತ್ತು ರಿಕಾನ್ಸಿಲಿಯೇಶನ್ ಅನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, “ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಮೆಕಾಲೆ ಶಿಕ್ಷಣ ಪದ್ಧತಿಯನ್ನು ಸಂಪೂರ್ಣವಾಗಿ ತಿರಸ್ಕರಿಸಬೇಕು. ದೇಶದಲ್ಲಿ ವಿದೇಶಿ ಭಾಷೆಯನ್ನು ಶಿಕ್ಷಣ ಮಾಧ್ಯಮವನ್ನಾಗಿ ಹೇರಿ, ಶಿಕ್ಷಣವನ್ನು ಗಣ್ಯರಿಗೆ ಸೀಮಿತಗೊಳಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣೂರು ವಿವಿ ಪಠ್ಯಕ್ರಮ ಕೇಸರೀಕರಣ: ಸಿಎಂ ಶಿಫಾರಸಿನಂತೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

“ಶತಮಾನಗಳ ವಸಾಹತುಶಾಹಿ ಆಳ್ವಿಕೆಯು ನಮ್ಮನ್ನು ಕೀಳು ಜನಾಂಗವಾಗಿ ನೋಡುವುದನ್ನು ಕಲಿಸಿತು. ನಮ್ಮದೇ ಸಂಸ್ಕೃತಿ, ಸಾಂಪ್ರದಾಯಿಕ ಬುದ್ಧಿವಂತಿಕೆಯನ್ನು ಧಿಕ್ಕರಿಸಲು ನಮಗೆ ಕಲಿಸಲಾಯಿತು. ಇದು ರಾಷ್ಟ್ರವಾಗಿ ನಮ್ಮ ಬೆಳವಣಿಗೆಯನ್ನು ನಿಧಾನಗೊಳಿಸಿತು. ನಮ್ಮ ಶಿಕ್ಷಣ ಮಾಧ್ಯಮವಾಗಿ ವಿದೇಶಿ ಭಾಷೆಯ ಹೇರಿಕೆಯು ಶಿಕ್ಷಣವನ್ನು ಸಮಾಜದ ಒಂದು ಸಣ್ಣ ವರ್ಗಕ್ಕೆ ಸೀಮಿತಗೊಳಿಸಿತು. ಇದು ಅಪಾರ ಜನರ  ಶಿಕ್ಷಣದ ಹಕ್ಕನ್ನು ಕಸಿದುಕೊಳ್ಳುತ್ತಿದೆ” ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದ್ದಾರೆ.

“ನಾವು ನಮ್ಮ ಪರಂಪರೆ, ನಮ್ಮ ಸಂಸ್ಕೃತಿ ಮತ್ತು ನಮ್ಮ ಪೂರ್ವಜರ ಬಗ್ಗೆ ಹೆಮ್ಮೆ ಪಡಬೇಕು. ನಮ್ಮ ಬೇರುಗಳಿಗೆ ಹಿಂತಿರುಗಿ, ನಮ್ಮ ವಸಾಹತುಶಾಹಿ ಮನಸ್ಥಿತಿಯನ್ನು ತ್ಯಜಿಸಿ, ನಮ್ಮ ಮಕ್ಕಳಿಗೆ ಅವರ ಭಾರತೀಯ ಗುರುತಿನ ಬಗ್ಗೆ ಹೆಮ್ಮೆ ಪಡಲು ಕಲಿಸಬೇಕು. ಅನೇಕ ಭಾರತೀಯ ಭಾಷೆಗಳನ್ನು ಕಲಿಯಬೇಕು. ಸಾಧ್ಯವಾದಷ್ಟು ನಮ್ಮ ಮಾತೃಭಾಷೆಯನ್ನು ಪ್ರೀತಿಸಬೇಕು. ಜ್ಞಾನದ ನಿಧಿಯಾಗಿರುವ ನಮ್ಮ ಧರ್ಮಗ್ರಂಥಗಳನ್ನು ತಿಳಿಯಲು ನಾವು ಸಂಸ್ಕೃತವನ್ನು ಕಲಿಯಬೇಕು” ಎಂದು ಉಪರಾಷ್ಟ್ರಪತಿ ಹೇಳಿದ್ದಾರೆ.

ಮಾತೃಭಾಷೆಯನ್ನು ಪ್ರಚಾರ ಮಾಡಲು ಯುವಕರನ್ನು ಪ್ರೋತ್ಸಾಹಿಸಿದ ಅವರು, “ಎಲ್ಲಾ ಗ್ಯಾಜೆಟ್ ಅಧಿಸೂಚನೆಗಳನ್ನು ಆಯಾ ರಾಜ್ಯದ ಮಾತೃಭಾಷೆಯಲ್ಲಿ ಹೊರಡಿಸುವ ದಿನಕ್ಕಾಗಿ ನಾನು ಎದುರು ನೋಡುತ್ತಿದ್ದೇನೆ. ಶಿಕ್ಷಣ ವ್ಯವಸ್ಥೆಯ ಭಾರತೀಕರಣವು ಭಾರತದ ‘ಹೊಸ ಶಿಕ್ಷಣ ನೀತಿ’ಯ ಕೇಂದ್ರ ಬಿಂದುವಾಗಿದೆ. ಇದು ಮಾತೃ ಭಾಷೆಗಳ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ” ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ.

ಇದನ್ನೂ ಓದಿ: ಶಿಕ್ಷಣದ ಕೇಸರೀಕರಣ ಮತ್ತು ಕೋಮುವಾದೀಕರಣ ನಿಲ್ಲಿಸಿ: ಎಸ್ಎಫ್ಐ ಆಕ್ರೋಶ

“ಶಿಕ್ಷಣವನ್ನು ಕೇಸರಿಕರಣಗೊಳಿಸಲಾಗುತ್ತಿದೆ ಎಂದು ನಮ್ಮ ಮೇಲೆ ಆರೋಪವಿದೆ. ಆದರೆ ಕೇಸರಿಯಲ್ಲಿ ಏನು ತಪ್ಪಿದೆ? ಸರ್ವೇ ಭವಂತು ಸುಖಿನಃ (ಎಲ್ಲರೂ ಸಂತೋಷವಾಗಿರಲಿ) ಮತ್ತು ವಸುಧೈವ್ ಕುಟುಂಬಕಮ್ (ಜಗತ್ತೇ ಒಂದು ಕುಟುಂಬ) ನಮ್ಮ ಪುರಾತನ ಗ್ರಂಥಗಳಲ್ಲಿ ಒಳಗೊಂಡಿರುವ ತತ್ವಶಾಸ್ತ್ರಗಳು. ಇದು ಇಂದಿಗೂ ಭಾರತದ ವಿದೇಶಾಂಗ ನೀತಿಯ ಮಾರ್ಗದರ್ಶಿ ತತ್ವಗಳಾಗಿವೆ’’ ಎಂದು ಉಪರಾಷ್ಟ್ರಪತಿ ನಾಯ್ಡು ಹೇಳಿದರು.

“ಭಾರತವು ಸಾಮಾನ್ಯ ಬೇರುಗಳನ್ನು ಹೊಂದಿರುವ ಬಹುತೇಕ ಎಲ್ಲಾ ದಕ್ಷಿಣ ಏಷ್ಯಾದ ದೇಶಗಳೊಂದಿಗೆ ಬಲವಾದ ಸಂಬಂಧವನ್ನು ಹೊಂದಿದೆ. ಸಿಂಧೂ ಕಣಿವೆ ನಾಗರಿಕತೆಯು ಅಫ್ಘಾನಿಸ್ತಾನದಿಂದ ಗಂಗಾ ಬಯಲಿನವರೆಗೆ ವಿಸ್ತರಿಸಿದೆ. ಯಾವುದೇ ದೇಶದ ಮೇಲೆ ಮೊದಲು ದಾಳಿ ಮಾಡದಿರುವ ನಮ್ಮ ನೀತಿಯನ್ನು ಪ್ರಪಂಚದಾದ್ಯಂತ ಗೌರವಿಸಲಾಗುತ್ತದೆ. ಹಿಂಸಾಚಾರಕ್ಕಿಂತ ಅಹಿಂಸೆ ಮತ್ತು ಶಾಂತಿಯನ್ನು ಆರಿಸಿಕೊಂಡ ಮಹಾನ್ ಯೋಧ ರಾಜ ಅಶೋಕನ ದೇಶ” ಎಂದು ಅವರು ಹೇಳಿದ್ದಾರೆ.

“ಪ್ರಾಚೀನ ಭಾರತೀಯ ವಿಶ್ವವಿದ್ಯಾಲಯಗಳಾದ ನಳಂದಾ ಮತ್ತು ತಕ್ಷಿಲಾದಲ್ಲಿ ಅಧ್ಯಯನ ಮಾಡಲು ಪ್ರಪಂಚದಾದ್ಯಂತದ ಜನರು ಬರುತ್ತಿದ್ದರು. ಆದರೆ ಅದರ ಸಮೃದ್ಧಿಯ ಉತ್ತುಂಗದಲ್ಲಿಯೂ ಸಹ, ಭಾರತವು ಯಾವುದೇ ದೇಶದ ಮೇಲೆ ದಾಳಿ ಮಾಡಲು ಯೋಚಿಸಲಿಲ್ಲ ಏಕೆಂದರೆ ಜಗತ್ತಿಗೆ ಶಾಂತಿ ಬೇಕು ಎಂದು ನಾವು ದೃಢವಾಗಿ ನಂಬುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಲ್ಲಿ ಉಪರಾಷ್ಟ್ರಪತಿಯವರು ಗಾಂಧೀಜಿಯವರ ಹೆಸರನ್ನ ಹೇಳದೇ ಆಶೋಕ ಸಾಮ್ರಾಟನ ಹೆಸರನ್ನ ಹೇಳಿದ್ದು ಸರೀನಾ…. ಗಾಂಧೀಜಿಯವರು ಅಹಿ೦ಸೆಯಿಂದಾನೆ ನಮಗೆ ಸ್ವಾತಂತ್ರ ತಂದು ಕೊಟ್ಟಿದುದನ್ನ ಇವರು ಮರೆತುಬಿಟ್ಟರಾ ಅಥವಾ ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೇಸ್ ಗೆ ಲಾಭವಾಗುತ್ತೋ ಅಂತಾ ಹೇಳಿರಲಿಕ್ಕಿಲ್ಲಾ….

  2. ಗಾಂಧೀಜಿ ಹೆಸರು ಹೇಳಿದರೆ ಕಾಂಗ್ರೆಸ್ಗೆ ಲಾಭ ಅನ್ನುವುದು ಅವರ ಭಾವನೆ.
    ಮೆಕಾಲೆ ಶಿಕ್ಷಣ ಬದಲಿ ಯಾವರೀತಿಯ ಶಿಕ್ಷಣ ತರುತ್ತಾರೆ ನಮ್ಮ ಹಿಂದಿನ ಧರ್ಮಗ್ರಂಥ ಬಹಳಷ್ಟು ಭಾರತೀಯ ಭಾಷೆಗಳಿಗೆ ತರ್ಜುಮೆ ಆಗಿವೆ.
    ಪ್ರಾಂತೀಯ ಭಾಷೆ ಉತ್ತೇಜಿಸುವುದು ಆದರೆ ಹಿಂದಿಯನ್ನು ರಾಜ್ಯಗಳ ಮೇಲೆ ಹೇರುತ್ತಿದ್ದಾರೆ ಯಾವುದು ಇನ್ನು ಸ್ಪಷ್ಟ ಇಲ್ಲ.

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...