Homeಮುಖಪುಟಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

ಉತ್ತರಾಖಂಡ ಸಿಎಂ ಇಂದು ಘೋಷಣೆ ಸಾಧ್ಯತೆ; ಗೋವಾ ಕುರಿತು ಸುಳಿವು ನೀಡದ BJP!

- Advertisement -
- Advertisement -

ಬಿಜೆಪಿ ಉತ್ತರಾಖಂಡಕ್ಕೆ ತನ್ನ ಮುಖ್ಯಮಂತ್ರಿ ಆಯ್ಕೆಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆಯಿದೆ. ಬೆಳಗ್ಗೆ 11 ಗಂಟೆಗೆ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಪಕ್ಷದ ವೀಕ್ಷಕರಾಗಿರುವ ಒಕ್ಕೂಟ ಸರ್ಕಾರದ ಸಚಿವ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಅವರು ಮುಖ್ಯಮಂತ್ರಿ ಹೆಸರು ಘೋಷಣೆಯ ಮೇಲ್ವಿಚಾರಣೆ ನಡೆಸಲಿದ್ದಾರೆ. ಆದರೆ ಗೋವಾ ಮುಖ್ಯಮಂತ್ರಿಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ.

ನಿನ್ನೆಯಷ್ಟೆ ಗೃಹ ಸಚಿವ ಅಮಿತ್ ಶಾ ಅವರು ಉತ್ತರಾಖಂಡದ ಹಂಗಾಮಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ರಾಜ್ಯದಲ್ಲಿ ಸರ್ಕಾರ ರಚನೆಯ ಕುರಿತು ಚರ್ಚಿಸಿದರು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ತನ್ನ ಸತತ ಎರಡನೇ ಅವಧಿಯನ್ನು ಭದ್ರಪಡಿಸಿಕೊಂಡಿದೆ. ಆದಾಗ್ಯೂ, ಧಾಮಿ ಅವರು ಖತಿಮಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋತಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವೈಫಲ್ಯಗಳ ಮೇಲಿನ ಕೋಪ; ಪಂಜಾಬ್‌ಅನ್ನು ಸುಲಭವಾಗಿ ಒಲಿಸಿಕೊಂಡ ಆಪ್

ಉತ್ತರಾಖಂಡದ ಮುಖ್ಯಮಂತ್ರಿ ಹುದ್ದೆಗೆ ಹಾಲಿ ಮುಖ್ಯಮಂತ್ರಿ ಧಾಮಿ, ಬಿಜೆಪಿಯ ಉತ್ತರಾಖಂಡದ ಪ್ರಧಾನ ಕಾರ್ಯದರ್ಶಿ ಸುರೇಶ್ ಭಟ್, ಪಕ್ಷದ ಸಂಸದ ಅನಿಲ್ ಬಲುನಿ; ಶಾಸಕರಾದ ಧನ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್ ಮತ್ತು ರಿತು ಖಂಡೂರಿ ಮತ್ತು ಪಕ್ಷದ ಸಂಸದ ರಮೇಶ್ ಪೋಖ್ರಿಯಾಲ್ ನಿಶಾಂಕ್ ಆಕಾಂಕ್ಷಿಗಳಾಗಿದ್ದಾರೆ.

ಈ ಮಧ್ಯೆ, ಗೋವಾದಲ್ಲಿ ಪ್ರಮೋದ್ ಸಾವಂತ್ ಮತ್ತು ವಿಶ್ವಜಿತ್ ರಾಣೆ ನಡುವೆ ಪೈಪೋಟಿ ನಡೆಯುತ್ತಿದೆ. ಆದರೆ ಆಯ್ಕೆಯ ಬಗ್ಗೆ ಬಿಜೆಪಿ ಇನ್ನೂ ಸಂದಿಗ್ಧ ಪರಿಸ್ಥಿತಿಯಲ್ಲಿದೆ ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್ ಅವರು ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಅಧಿಕಾರ ಪಡೆಯಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡುವ ಮುನ್ನಾ ದಿನವಾದ ಇಂದು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್ ಶುಕ್ರವಾರ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ಕಳೆದ ವಾರದ ಆರಂಭದಲ್ಲಿ ಹೇಳಿತ್ತು. ಆದರೆ ಅವರ ಸಂಪುಟದ ಗಾತ್ರ ಅಥವಾ ವಿವಿಧ ಸಚಿವಾಲಯಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಾಗಿಲ್ಲ.

ಇದನ್ನೂ ಓದಿ: ದೋರನಹಳ್ಳಿ ಸಿಲಿಂಡರ್ ಸ್ಪೋಟ ಪ್ರಕರಣ: ಸಂತ್ರಸ್ತರಿಗೆ ತಲಾ 5 ಲಕ್ಷ ರೂ.ಪರಿಹಾರ ವಿತರಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...