Homeಕರ್ನಾಟಕವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡಲು ಚಿಂತನೆ: ಸಿಎಂ ಬೊಮ್ಮಾಯಿ ಭರವಸೆ

- Advertisement -
- Advertisement -

ರಾಜ್ಯದಲ್ಲಿ ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು ಕಡಿಮೆ ಮಾಡುವ ಕ್ರಮಗಳನ್ನು ಸರ್ಕಾರ ಪರಿಗಣಿಸುತ್ತಿದೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ಸಹ ಇದರ ಕುರಿತು ಪರಿಶೀಲಿಸುತ್ತಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಭಾರತದ ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿ ತೊಂದರೆ ಅನುಭವಿಸಿದ ಬಳಿಕ ಈ ಹೇಳಿಕೆ ಹೊರ ಬಂದಿದೆ. “ಹೆಚ್ಚಿನ ವಿದ್ಯಾರ್ಥಿಗಳಿಗೆ ಇಲ್ಲಿ ಅಧ್ಯಯನ ಮಾಡಲು ಅನುಕೂಲ ಮಾಡಿಕೊಡುವ ಗುರಿ ಇಟ್ಟುಕೊಂಡಿದ್ದೇವೆ. ತಮ್ಮ ಕೋರ್ಸ್ಅನ್ನು ಪೂರ್ಣಗೊಳಿಸುವ ಮೊದಲು ಯುದ್ಧ ಪೀಡಿತ ಉಕ್ರೇನ್‌ನಿಂದ ಹಿಂದಿರುಗಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಪರ್ಯಾಯ ಕ್ರಮಗಳನ್ನು ಕೇಂದ್ರ ಸರ್ಕಾರ ಪರಿಗಣಿಸುತ್ತಿದೆ” ಎಂದು ತಿಳಿಸಿದ್ದಾರೆ.

“ಪ್ರಸ್ತುತ ವೈದ್ಯಕೀಯ ಶಿಕ್ಷಣದ ವೆಚ್ಚ ಹೆಚ್ಚುತ್ತಿದೆ. ಸರಕಾರಿ ಸೀಟುಗಳ ವೆಚ್ಚ ಕಡಿಮೆಯಾದರೂ ಖಾಸಗಿ ವಲಯದಲ್ಲಿ ಸೀಟುಗಳ ವೆಚ್ಚ ಹೆಚ್ಚಿದೆ. ಕೆಲವು ಸಂದರ್ಭಗಳಲ್ಲಿ ಶೇ.90-95 ಅಂಕ ಗಳಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಅಥವಾ ಎನ್‌ಆರ್‌ಐ ಸೀಟ್ ವೆಚ್ಚಗಳು ಸಹ ಹೆಚ್ಚಾಗಿದೆ. ಹೀಗಾಗಿ ಇತರ ಆಯ್ಕೆಗಳನ್ನು (ಉಕ್ರೇನ್‌ನಂತಹ ದೇಶಗಳಲ್ಲಿ ಅಧ್ಯಯನ ಮಾಡುವುದು) ನೋಡುವಂತಾಗಿದೆ” ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಉಕ್ರೇನ್‌ನಂತಹ ದೇಶಗಳಿಗೆ ಹೋಗುವ ಬದಲು ಭಾರತದಲ್ಲಿಯೇ ವೈದ್ಯಕೀಯ ಅಧ್ಯಯನ ಮಾಡಲು ಸಾಕಷ್ಟು ಅವಕಾಶವನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುವ ಸಂಬಂಧ ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಸರ್ಕಾರ ಚರ್ಚೆ ನಡೆಸಿದ್ದು, ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ,ಬಿ ಮತ್ತು ಸಿ ವರ್ಗೀಕರಣಕ್ಕೆ ಮುಂದಾಗಿದ್ದೇವೆ. ಆದರೆ ವೈದ್ಯಕೀಯ ಕೋರ್ಸ್‌ಗಳನ್ನು ರಾಷ್ಟ್ರೀಯ ವೈದ್ಯಕೀಯ ಮಂಡಳಿ (ಎನ್‌ಎಂಸಿ) ನಿಯಂತ್ರಿಸುತ್ತದೆ. ಹೀಗಾಗಿ ಅವರೂ ಇದರ ಕುರಿತು ಗಮನ ಹರಿಸಿದ್ದಾರೆ. ಉಕ್ರೇನ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಶುಲ್ಕ ಕಡಿತದ ಕುರಿತು ಚರ್ಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಉಕ್ರೇನ್‌ನಿಂದ ಹಿಂತಿರುಗಿದ ವೈದ್ಯಕೀಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಸ್ಥಗಿತಗೊಳಿಸಿರುವುದರಿಂದ ಅವರಿಗೆ ಪರ್ಯಾಯ ವ್ಯವಸ್ಥೆಗಳನ್ನು ಸರ್ಕಾರ ನೀಡುವುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, “ಕೇಂದ್ರ ಸರ್ಕಾರವು ಈ ಬಗ್ಗೆ ಯೋಚಿಸುತ್ತಿದೆ” ಎಂದಿದ್ದಾರೆ.

“ಮೊದಲ, ಎರಡನೇ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳು ಉಕ್ರೇನ್‌ನಿಂದ ಹಿಂತಿರುಗಿದ್ದಾರೆ. ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಈ ಸಮಸ್ಯೆಯನ್ನು ಅನುಭವಿಸಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಬಗ್ಗೆ ಚಿಂತನೆ ನಡೆಸುತ್ತಿದೆ” ಎಂದು ಪ್ರತಿಕ್ರಿಯೆಸಿದ್ದಾರೆ.

ಮಾರ್ಚ್ 1ರಂದು ಉಕ್ರೇನ್‌ನಲ್ಲಿ ರಷ್ಯಾದ ಕ್ಷಿಪಣಿ ದಾಳಿಗೆ ಬಲಿಯಾದ ಖಾರ್ಕಿವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ನವೀನ್ ಶೇಖರಪ್ಪ ಜ್ಞಾನಗೌಡರ ಅವರಿಗೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸುವ ಮುನ್ನ ಬೊಮ್ಮಾಯಿ ಮಾತನಾಡಿದರು. ಇದಕ್ಕೂ ಮೊದಲು ಮುಖ್ಯಮಂತ್ರಿಗಳು ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ನವೀನ್ ಅವರ ಪಾರ್ಥಿವ ಶರೀರವನ್ನು ಬರಮಾಡಿಕೊಂಡರು.

ನೀಟ್‌ ರದ್ದುಗೊಳಿಸಲು ಕುಮಾರಸ್ವಾಮಿ ಆಗ್ರಹ

ಧನದಾಹಕ್ಕೆ ಕಡಿವಾಣ ಹಾಕಿ ಎಲ್ಲರಿಗೂ ಮೆಡಿಕಲ್ ಸೀಟು ಕೊಡಿಸುವ ಉದ್ದೇಶದಿಂದ ಜಾರಿಗೆ ಬಂದ ನೀಟ್ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ನವೀನ್ ಸಾವಿನಿಂದ ಜ್ಞಾನೋದಯ ಆಗಿದೆ ಎನ್ನುವ ಮುಖ್ಯಮಂತ್ರಿಯವರು ವೈದ್ಯ ಶಿಕ್ಷಣ ಶುಲ್ಕ ಕಡಿಮೆ ಮಾಡುವ ಹೇಳಿಕೆ ನೀಡುತ್ತಾರೆ. ಆದರೆ, ನೀಟ್ ವಿರುದ್ಧ ಚಕಾರ ಎತ್ತುತ್ತಿಲ್ಲ, ಯಾಕೆ? ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಖಾಸಗಿ ಕಾಲೇಜುಗಳಲ್ಲಿ ವೈದ್ಯ ಶಿಕ್ಷಣ ದುಬಾರಿ ಎಂದು ಸ್ವತಃ ಮುಖ್ಯಮಂತ್ರಿಯೇ ಒಪ್ಪಿಕೊಂಡಿದ್ದಾರೆ. ಹಾಗಾದರೆ, ಅಂಥ ಕಾಲೇಜುಗಳಿಗೆ ಶಕ್ತಿ ತುಂಬುತ್ತಿರುವುದು ಏಕೆ! ಸರಕಾರಿ ವೈದ್ಯ ಕಾಲೇಜುಗಳಲ್ಲಿ ಕನ್ನಡದ ಮಕ್ಕಳಿಗೆ ಸೀಟು ಸಿಗುತ್ತಿಲ್ಲ. ಟ್ಯೂಷನ್ ಅಂಗಡಿಗಳಿಗೆ ಲಕ್ಷ ಲಕ್ಷ ಕಟ್ಟುವುದು ಬಡ, ಮಧ್ಯಮ ವರ್ಗದ ಮಕ್ಕಳಿಗೆ ಸಾಧ್ಯವಿಲ್ಲ ಎಂದಿದ್ದಾರೆ.


ಇದನ್ನೂ ಓದಿರಿ: ವೈದ್ಯಕೀಯ ‘ಭಾರ‘ತ: ಉಕ್ರೇನ್‌ನಲ್ಲಿ ಸಿಲುಕಿದ ಇಂಡಿಯಾ ವಿದ್ಯಾರ್ಥಿಗಳ ನೋವಿನ ಮೂಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...

‘ವಂದೇ ಮಾತರಂ’ ಹಾಡಲು ಬಾರದ ಬಿಜೆಪಿಗರಿಗೆ ಕೋರ್ಟ್ ಆದೇಶ ನೆಮ್ಮದಿ ತಂದಿದೆ: ಬಿ.ಕೆ. ಹರಿಪ್ರಸಾದ್ ವ್ಯಂಗ್ಯ

'ವಂದೇ ಮಾತರಂ' ಹಾಡದಿದ್ದರೆ ಒಬ್ಬ ವ್ಯಕ್ತಿಯನ್ನು ಅಪರಾಧಿಯನ್ನಾಗಿ ಮಾಡಲು ಸಾಧ್ಯವಿಲ್ಲ ಎಂಬ ಸಂವಿಧಾನಾತ್ಮಕ ನಿಲುವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿರುವುದನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಸ್ವಾಗತಿಸಿದ್ದಾರೆ. ಧಾರ್ಮಿಕ...

ರಾಯಚೂರು ದಲಿತ ದೌರ್ಜನ್ಯ: ಪ್ರಕರಣಗಳನ್ನು CIDಗೆ ಒಪ್ಪಿಸುವಂತೆ ಆಗ್ರಹಿಸಿ ಗೃಹ ಸಚಿವರನ್ನು ಭೇಟಿಯಾದ ನಿಯೋಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ದಲಿತರ ಮೇಲೆ ಸಾಲು ಸಾಲು ದೌರ್ಜನ್ಯ, ಕೊಲೆ ಹಾಗೂ ಅತ್ಯಾಚಾರದಂತಹ ಭೀಕರ ಕೃತ್ಯಗಳು ಹೆಚ್ಚಾಗುತ್ತಿರುವುದನ್ನು ತೀವ್ರವಾಗಿ ಖಂಡಿಸಿ, ದಲಿತ ಹಕ್ಕುಗಳ ಹೋರಾಟಗಾರರ ಹಾಗೂ ಪ್ರಮುಖ ಮುಖಂಡರ ನಿಯೋಗವು ಗೃಹ...

ಶಾರ್ಜೀಲ್ ಇಮಾಮ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು

ವಿದ್ಯಾರ್ಥಿ ಹೋರಾಟಗಾರ ಶಾರ್ಜೀಲ್ ಇಮಾಮ್‌ಗೆ ಅವರ ಸೋದರಸಂಬಂಧಿಯ ಮದುವೆಯಲ್ಲಿ ಪಾಲ್ಗೊಳ್ಳಲು ದೆಹಲಿ ನ್ಯಾಯಾಲಯವು ಏಳು ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈ ಜಾಮೀನು ಅಕ್ಟೋಬರ್ 4 ರಿಂದ ಅಕ್ಟೋಬರ್ 10 ರವರೆಗೆ ಇರಲಿದೆ...

ಎಬಿವಿಪಿ ಒತ್ತಡಕ್ಕೆ ಮುಸ್ಲಿಂ ಪ್ರಾಧ್ಯಾಪಕಿ ರಾಜೀನಾಮೆ; ಕಾಲೇಜು ಆವರಣ ‘ಶುದ್ಧೀಕರಣ’ ಮಾಡಿದ ಬಲಪಂಥೀಯ ಗುಂಪು

ಕೋಲ್ಕತ್ತಾದ ಸುರೇಂದ್ರನಾಥ ಕಾಲೇಜಿನ ಮುಸ್ಲಿಂ ಪ್ರಾಧ್ಯಾಪಕಿ ಮೊಹಮ್ಮದಿ ತರನ್ನುಮ್ ಅವರನ್ನು ಹಾಜರಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದೆ. ಇದಾದ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರು...