Homeಕರ್ನಾಟಕನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ....

ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

- Advertisement -
- Advertisement -

ಸೋಮವಾರ ಬೆಳಗ್ಗೆ 6 ಗಂಟೆಯಿಂದ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಬೆಲೆಯು ತಲಾ 80 ಪೈಸೆಗಳಷ್ಟು ಹೆಚ್ಚಾಗಿದೆ. ಇದು 2021ರ ಡಿಸೆಂಬರ್‌ 1 ರಿಂದ ಮಾಡಿರುವ ಮೊದಲ ಏರಿಕೆಯಾಗಿದೆ. ಅದಕ್ಕೂ ಹಿಂದೆ ನಿರಂತರವಾಗಿ ಏರಿಕೆಯಾಗುತ್ತಿದ್ದ ದರವು ಐದು ರಾಜ್ಯಗಳ ಚುನಾವಣಾ ಹಿನ್ನಲೆಯಲ್ಲಿ ಏರಿಕೆಯಾಗಿರಲಿಲ್ಲ ಎಂದು ಚುನಾವಣಾ ವಿಶ್ಲೇಷಕರು ಹೇಳಿದ್ದಾರೆ. ಈ ನಡುವೆ ಮನೆಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ ₹ 50 ಹೆಚ್ಚಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಮಂಗಳವಾರ, ದೆಹಲಿಯ ರಾಜಧಾನಿ ಸೇವಾ ಕೇಂದ್ರದಲ್ಲಿ ಒಂದು ಲೀಟರ್ ಪೆಟ್ರೋಲ್ ದರ 96.21 ರೂ.ಗೆ ಏರಿತು. ಡೀಸೆಲ್ ದರವು ಲೀಟರ್‌ಗೆ 87.47 ರೂ.ಗೆ ಏರಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ಬೆಲೆ ಪ್ರತಿ ಲೀಟರ್‌ಗೆ 84 ಪೈಸೆ ಏರಿದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 79 ಪೈಸೆ ಹೆಚ್ಚಾಗಿದೆ.

ಈ ಮಧ್ಯೆ ಅಕ್ಟೋಬರ್‌ ಆರಂಭದ ನಂತರ ಮೊದಲ ಬಾರಿಗೆ ಗೃಹ ಅಡುಗೆ ಅನಿಲ (ಎಲ್‌ಪಿಜಿ) ಬೆಲೆಯನ್ನು ಮಂಗಳವಾರ ಪ್ರತಿ ಸಿಲಿಂಡರ್‌ಗೆ ₹ 50 ಹೆಚ್ಚಿಸಲಾಗಿದೆ.

ಚಿಲ್ಲರೆ ಇಂಧನ ಬೆಲೆಗಳ ಹೆಚ್ಚಳವು ನವೆಂಬರ್ ನಂತರ ಇದೆ ಮೊದಲ ಬಾರಿಗೆ ಏರಿಕೆಯಾಗಿದೆ. ದೇಶದ ಪ್ರಮುಖ ಮೆಟ್ರೋ ನಗರಗಳಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇತಿಂವೆ:

ಈ ಏರಿಕೆಯಿಂದಾಗಿ ಗುಲ್ಬರ್ಗಾ ಜಿಲ್ಲೆಯಲ್ಲಿ ಪೆಟ್ರೋಲ್‌ ಬೆಲೆ 1.45 ಏರಿಕೆಯಾಗಿದ್ದು, ಡೀಸೆಲ್ ಬೆಲೆ 1.33 ರೂ. ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆ ನಡುವೆಯು ಚಿತ್ರದುರ್ಗದಲ್ಲಿ ಪೆಟ್ರೋಲ್‌ಗೆ 11 ಪೈಸೆ ಇಳಿಕೆಯಾಗಿದ್ದು, ಡೀಸೆಲ್‌ಗೆ 6 ಪೈಸೆ ಇಳಿಕೆಯಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಮೈಸೂರಿನಲ್ಲಿ ಪೆಟ್ರೋಲ್‌ಗೆ 1.8 ರೂ ಏರಿಕೆಯಾಗಿದ್ದು, ಡೀಸೆಲ್‌ಗೆ ಒಂದು ರೂ ಬೆಲೆ ಏರಿಕೆಯಾಗಿದೆ. ಉಳಿದಂತೆ ಬಾಕಿ ಜಿಲ್ಲೆಗಳ ಬೆಲೆಗಳು ಇಂತಿವೆ.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗಳು ಮುಗಿದಿರುವುದರಿಂದ ಇಂಧನ ಬೆಲೆ ಏರಿಕೆಯಾಗಬಹುದು ಎಂಬ ಊಹಾಪೋಹಗಳಿದ್ದವು.

ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬೆಲೆಗಳಿಂದ ಪರಿಹಾರವನ್ನು ನೀಡಲು ಕೇಂದ್ರವು ನವೆಂಬರ್ 4, 2021 ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಸುಂಕವನ್ನು 5 ರೂ. ಮತ್ತು ಡೀಸೆಲ್‌ಗೆ 10 ರೂ. ನಷ್ಟು ಕಡಿತಗೊಳಿಸಿತ್ತು. ಇದರಿಂದಾಗಿ ಇಂಧನ ದರಗಳು ಇಳಿಕೆಯಾಗಿತ್ತು.

4 ತಿಂಗಳ ವಿರಾಮದ ನಂತರ ಚಿಲ್ಲರೆ ಇಂಧನ ಬೆಲೆಗಳು ಮಂಗಳವಾರದಿಂದ ಮೊದಲ ಬಾರಿಗೆ ಏರಿಕೆಯಾಗಲಿವೆ ಎಂದು ರಾಯಿಟರ್ಸ್ ಸೋಮವಾರ ವರದಿ ಮಾಡಿತ್ತು.

ಇದನ್ನೂ ಓದಿ: ಗೃಹಬಳಕೆಯ ಅಡುಗೆ ಅನಿಲ (LPG) ದರ 50 ರೂ. ಏರಿಕೆ; ಸಿಲಿಂಡರ್‌‌ಗೆ 950 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...