Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಗೂ ಮೊದಲು ಇದ್ದ ಕಾಶ್ಮೀರದ ಪರಿಸ್ಥಿತಿಗೂ ಮತ್ತು ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ನಂತರ ಕಾಶ್ಮೀರದ ಪರಿಸ್ಥಿತಿಗೂ ಎಷ್ಟೊಂದು ವ್ಯತ್ಯಾಸ ಇದೆ ನೋಡಿ ಎಂಬ ಹೇಳಿಕೆಯೊಂದಿಗೆ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.

ಸ್ವಾತಂತ್ಯ್ರ ಬಂದಾಗಿನಿಂದ ಕಾಶ್ಮೀರ ಕುರಿತು ಪ್ರಮುಖ ರಾಜಕೀಯ ಪಕ್ಷಗಳ ನಿಲುವುಗಳು ಮತ್ತು ಸಮಸ್ಯೆಗಳನ್ನು ನೋಡುವ ರೀತಿಯಿಂದಾಗಿ ಕಾಶ್ಮೀರ ಎಂಬ ಕಣಿವೆ ರಾಜ್ಯ ಇಂದಿಗೂ ಉರಿವ ಕೆಂಡದಂತೆ ಭಾಸವಾಗುತ್ತಿದೆ. ಇದರ ನಡುವೆ ಕಾಶ್ಮೀರದಲ್ಲಿ ಹಿಂದೂ ಪಂಡಿತರನ್ನು ಹಿಂಸಾತ್ಮಕವಾಗಿ ನಡೆಸಿಕೊಳ್ಳಲಾಗಿದೆ, ಹತ್ಯೆ ಮಾಡಲಾಗಿದೆ ಎಂದು ಕತೆಯನ್ನ ಹೇಳುವ ‘ದ ಕಾಶ್ಮೀರ್ ಫೈಲ್ಸ್‌’ ಎಂಬ ಬಿಜೆಪಿ ಪರವಾಗಿ ಪ್ರೊಪಗಾಂಡ ಸೃಷ್ಟಿಸುವ ಸಿನಿಮಾ ಬಿಡುಗಡೆ ಆಗಿದ್ದು ಭಾರಿ ಚರ್ಚೆಯನ್ನು ಹುಟ್ಟುಹಾಕಿದೆ.

ಇದನ್ನು ಓದಿರಿ: ಫ್ಯಾಕ್ಟ್‌‌ಚೆಕ್‌: ತಾಲಿಬಾನ್‌ಗೆ ಥ್ಯಾಂಕ್ಸ್‌ ಹೇಳಿದ ಈ ಟ್ವಿಟರ್‌ ಅಕೌಂಟ್‌ ದಿಟ್ಟ ವಿದ್ಯಾರ್ಥಿನಿ ಮುಸ್ಕಾನ್‌ ಅವರದ್ದಲ್ಲ 

ವೈರಲ್ ಪೋಸ್ಟ್‌ನಲ್ಲಿ ಇರುವ ವಿಡಿಯೊದಲ್ಲಿ ಸೇನೆಯ ವಾಹನಗಳಿಗೆ ತಡೆಯೊಡ್ಡಿ, ಕಲ್ಲು ಮತ್ತು ದೊಣ್ಣೆಗಳಿಂದ ಹೊಡೆದು ಸೇನಾವಾಹನವನ್ನು ಹಿಮ್ಮೆಟ್ಟಿಸುವ ಕ್ಲಿಪ್‌ಗಳು ಮತ್ತೊಂದು ಕಡೆ ಸೇನಾ ವಾಹನದ ಮುಂಭಾಗಕ್ಕೆ ವ್ಯಕ್ತಿಯೊಬ್ಬನನ್ನು ಕಟ್ಟಿ ಮೆರವಣಿಗೆ ಮಾಡುತ್ತಿರುವ ದೃಶ್ಯಗಳನ್ನು ವೈರಲ್ ವೀಡಿಯೋದಲ್ಲಿ ಕಾಣಬಹುದು. ಹಾಗಿದ್ದರೆ ಈ ವೈರಲ್ ವಿಡಿಯೊದಲ್ಲಿ ಕಾಣುತ್ತಿರುವ  ಘಟನೆಗಳು ಯಾವ  ಸಂದರ್ಭಗಳಲ್ಲಿ ನಡೆದಿದೆ ಎಂದು ತಿಳಿದುಕೊಳ್ಳುವ ಮೂಲಕ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸೋಣ.

 ಫ್ಯಾಕ್ಟ್‌ಚೆಕ್ 

ವೀಡಿಯೊದ ಸ್ಕ್ರೀನ್‌ಶಾಟ್‌ಗಳ ಸಹಾಯದಿಂದ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ನರೇಂದ್ರ ಮೋದಿ ನೇತೃತ್ವದ ಸರ್ಕಾರ ರಚನೆಯ ಮೊದಲು ಎಂದು ಹೇಳಿಕೊಳ್ಳುವ ದೃಶ್ಯಗಳು ಸಹ  2019 ರಲ್ಲಿ ಸೆರೆಯಾದ ದೃಶ್ಯಗಳಾಗಿವೆ.

31 ಮೇ 2019 ರಂದು ಶ್ರೀನಗರದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಮುಸುಕುಧಾರಿಗಳು ಜಮ್ಮು ಕಾಶ್ಮೀರದ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ ಮಾಡಿ ವಾಹನವನ್ನು ತಡೆಯುತ್ತಿರುವ ದೃಶ್ಯಗಳು ಎಂಬ ಮಾಹಿತಿ ಲಭ್ಯವಾಗಿದೆ. ಈ ದೃಶ್ಯಗಳನ್ನು ಸೆರೆ ಹಿಡಿದ ವ್ಯಕ್ತಿಯು ಅಸೋಸಿಯೇಟೆಡ್ ಪ್ರೆಸ್‌ನಲ್ಲಿ ಕೆಲಸ ಮಾಡಿದ ದಾರ್ ಯಾಸಿನ್ ಎಂದು ತಿಳಿದು ಬಂದಿದೆ. ವಾಹನದ ಬಾನೆಟ್ ಮೇಲೆ ಹಾರಿದ ವ್ಯಕ್ತಿಯ ಚಿತ್ರವನ್ನು ಸರೆ ಹಿಡಿದ ಕಾರಣಕ್ಕೆ ವಿಶೇಷ ಫೋಟೋಗ್ರಫಿ ಎಂದು ಗುರುತಿಸಿ ಅವರಿಗೆ 2020 ರಲ್ಲಿ ಪುಲಿಟ್ಜರ್ ಪ್ರಶಸ್ತಿಯನ್ನು ನೀಡಲಾಗಿತ್ತು.

ಶ್ರೀನಗರದಲ್ಲಿ ಈ ಘಟನೆ ಸಂಭವಿಸುವ ಕೆಲವು ದಿನಗಳ ಮೊದಲು, ಬಿಜೆಪಿ ಸರ್ಕಾರವು ಪೂರ್ಣ ಬಹುಮತದೊಂದಿಗೆ ಎರಡನೆ ಅವಧಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿತ್ತು. ಈ ಸಮಯದಲ್ಲಿ (2019) ಜಮ್ಮು ಕಾಶ್ಮೀರದಲ್ಲಿ  ರಾಷ್ಟ್ರಪತಿ ಆಳ್ವಿಕೆಯಲ್ಲಿತ್ತು ಎಂಬುದು ಗಮನಾರ್ಹವಾಗಿದೆ.

ಇದನ್ನೂ ಓದಿ:  ಫ್ಯಾಕ್ಟ್‌ಚೆಕ್‌: ಪ್ಯಾಲೆಸ್ತೀನ್‌‌ನ ದಿಟ್ಟ ಬಾಲಕಿಯನ್ನು ಉಕ್ರೇನ್‌‌‌ನವರು ಎಂದು ವರದಿ ಮಾಡಿದ ಪಬ್ಲಿಕ್ ಟಿವಿ ಮತ್ತು ಸುವರ್ಣ ಟಿವಿ

ಮೇ 31, 2019 ರಂದು ಶ್ರೀನಗರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮುಸುಕುಧಾರಿ ಕಾಶ್ಮೀರಿ ಪ್ರತಿಭಟನಾಕಾರನು ಭಾರತೀಯ ಪೋಲೀಸರ ಶಸ್ತ್ರಸಜ್ಜಿತ ವಾಹನದ ಮೇಲೆ ಕಲ್ಲುಗಳನ್ನು ಎಸೆಯುತ್ತಿದ್ದಾಗ ಅದರ ಮೇಲೆ ಹಾರಿದ್ದಾನೆ. ಈ ದೃಶ್ಯವನ್ನು ದಾರ್ ಯಾಸಿನ್ ಸೆರೆ ಹಿಡಿದಿದ್ದರು.

ವ್ಯಕ್ತಿಯೊಬ್ಬನನ್ನು ವಾಹನಕ್ಕೆ ಕಟ್ಟಿಹಾಕಿರುವ ದೃಶ್ಯವು 2017 ರದ್ದು. ಸುದ್ದಿ ವರದಿಗಳ ಪ್ರಕಾರ, ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಜೀಪಿನ ಮುಂಭಾಗಕ್ಕೆ ಕಾಶ್ಮೀರಿ ವ್ಯಕ್ತಿಯೊಬ್ಬನನ್ನು ಕಟ್ಟಲಾಗಿತ್ತು. ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಕಲ್ಲು ಎಸೆಯುವವರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ವ್ಯಕ್ತಿಯನ್ನು ತಮ್ಮ ವಾಹನದ ಮುಂಭಾಗಕ್ಕೆ ಕಟ್ಟುವ ಮೂಲಕ ಕಲ್ಲು ತೂರಾಟ ಮಾಡುತ್ತಿದ್ದ ಪ್ರತಿಭಟನಕಾರರಿಂದ ರಕ್ಷಣೆ ಪಡೆಯುವ ಸಲುವಾಗಿ ‘ಮಾನವ ಗುರಾಣಿ’ಯಾಗಿ ಬಳಸಿಕೊಂಡಿದ್ದರು.

ಈ ಘಟನೆಯು  ಏಪ್ರಿಲ್ 2017 ರಲ್ಲಿ ನಡೆದು ವಿಡಿಯೊ ವೈರಲ್ ಆಗಿ ಸಾಕಷ್ಟು ವಿವಾದವನ್ನು ಹುಟ್ಟುಹಾಕಿತ್ತು. 2017 ರ ಸಮಯದಲ್ಲಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯವು  ಬಿಜೆಪಿ-ಪಿಡಿಪಿ ಸಮ್ಮಿಶ್ರ ಸರ್ಕಾರದ ಆಳ್ವಿಕೆಯಲ್ಲಿತ್ತು.

ಮಿಲಿಟರಿ ಸಮವಸ್ತ್ರದಲ್ಲಿರುವ ಸಿಬ್ಬಂದಿ ಮೂವರನ್ನು ವಿಚಾರಣೆ ನಡೆಸುತ್ತಿರುವ ದೃಶ್ಯಗಳನ್ನು ಕನಿಷ್ಠ 2017 ರಿಂದ ಇಂಟರ್ನೆಟ್‌ನಲ್ಲಿ ಹಂಚಿಕೊಳ್ಳಲಾಗಿದೆ (ಇಲ್ಲಿ ಮತ್ತು ಇಲ್ಲಿ ಅದನ್ನು ನೋಡಬಹುದು).

ಒಟ್ಟಾರೆಯಾಗಿ ಹೇಳುವುದಾದರೆ, ಈ ವಿಡಿಯೋದಲ್ಲಿರುವ ಘಟನೆಗಳು ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ನಡೆದಿವೆ. ಹಾಗಾಗಿ ವೈರಲ್ ಪೋಸ್ಟ್‌ನಲ್ಲಿ ಮಾಡಲಾಗಿರುವ ಪ್ರತಿಪಾದನೆಯು ಸುಳ್ಳಾಗಿದೆ.

ಕೃಪೆ: ಫ್ಯಾಕ್ಟ್‌ಲಿ

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಲಂಗರ್‌‌ನ ಈ ಚಿತ್ರ ಯುದ್ದ ಪೀಡಿತ ಉಕ್ರೇನ್‌ ದೇಶದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...