Homeಕರ್ನಾಟಕಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆ

- Advertisement -
- Advertisement -

ಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ.

ಪಬ್ಲಿಕ್ ಟಿವಿ ಫೆಬ್ರವರಿ 3ರಂದು ‘ವಿದ್ಯಾದೇಗುಲದಲ್ಲಿ ಧರ್ಮ ಯುದ್ಧ, ಬಿಗ್ ಬುಲೆಟಿನ್’ ಎಂಬ ಶಿರ್ಷಿಕೆಯ ಕಾರ್ಯಕ್ರಮದಲ್ಲಿ ಎಚ್.ಆರ್. ರಂಗನಾಥ್ ಹಾಗೂ ಅರುಣ್ ಬಡಿಗರ್ ಅವರು ಮತನಾಡುತ್ತಾ, ‘ಇದು ಭಾರತ. ಭಾರತ ಸೃಷ್ಟಿಯಾಗಿದ್ದು ಹಿಂದೂ ರಾಷ್ಟ್ರದ ಆಧಾರದಲ್ಲಿ’ ಎಂದು ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.

ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ; ಕಾರವಾರ-ಅಂಕೋಲಾ: ಹಾಲಕ್ಕಿಗಳ ಸೀಮೆಯಲ್ಲಿ ಹಣದವರ ಕಾರುಬಾರು!

ಈ ಹೇಳಿಕೆಯನ್ನು ವಿರೋಧಿಸಿ ಹಲವಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ನಿರೂಪಕರಿಬ್ಬರು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ಮಾಡಿದ್ದು, ದೇಶದ ಸಮಗ್ರತೆಯ ವಿರುದ್ಧ ಪೂರ್ವಗ್ರಹ ಪೀಡಿತ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ವಿವಾದಾತ್ಮಕ ಹೇಳಿಕೆಯ ವಿರುದ್ಧ ಬಂದೇನವಾಜ್ ಗೋಗಿ ಅವರು ಶಹಾಪುರದ ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ಅವರ ದೂರನ್ನು ಪರಿಗಣಿಸಿದ ನ್ಯಾಯಾಲಯವು ಪಬ್ಲಿಕ್ ಟಿವಿಯ ಎಚ್‌.ಆರ್‌. ರಂಗನಾಥ್ ಮತ್ತು ನಿರೂಪಕ ಅರುಣ್ ಬಡಿಗೇರ ವಿರುದ್ಧ ಗೋಗಿ ಪೊಲೀಸ್ ಠಾಣೆಯಲ್ಲಿ ಕಲಂ 153(ಬಿ), 505(1)(ಬಿ)(ಸಿ) ಮತ್ತು 505(2) ಐಪಿಸಿ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ನಿರ್ದೇಶನ ನೀಡಿದೆ.

ಇದನ್ನೂ ಓದಿ: ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

12 COMMENTS

  1. ನಮ್ಮ ಇಂಡಿಯಾ ದೇಶವು ಧರ್ಮನಿರಪೇಕ್ಷ ರಾಷ್ಟ್ರವೋ ಅಥವಾ ಧರ್ಮಾಧಾರಿತ ರಾಷ್ಟ್ರವೋ ಎಂದು ತಿಳಿದು ಮಾತನಾಡಿ ಮಿಸ್ಟರ್ ರಾಜು ಅವರೇ.

  2. ಇವರು ಕೇವಲ ಮುಸ್ಲಿಮರ ಭಾವನೆಗಳಿಗೆ ದಕ್ಕೆ ಉಂಟುಮಾಡಿದ್ದಲ್ಲ, ಜೊತೆಗೆ ಬೌದ್ಧರು, ಸಿಖ್ಖರು ಕ್ರಿಶ್ಚಿಯನ್ ಮುಂತಾದ ಇತರೆ ಧರ್ಮದವರ ಭಾವನೆಗಳಿಗೂ ದಕ್ಕೆಯುಂಟು ಮಾಡಿದ್ದಾರೆ

  3. ರಂಗಣ್ಣ ಬಡಿಗೇರ್ ನಿಉಒ 2 ಕಳ್ಳ ನನ್ ಮಕಳು ಬಿಜೆಪಿ.ಆರ್ಎಸ್ಎಸ್ ಅವರ ಹಥಿರಾ ಯನ್ಜಲು ಕಾಸು ಯಷ್ಟು ತಗೊನ್ದ್ರಿರಾ ನಿಮಗೆ ಬಾಹ್ದ್ ಖವಾ ಅಂತಾರೆ ನಮ್ಮ ಉತ್ತರ ಕರ್ನಾಟಕದಲ್ಲಿ ಇದರ ಅರ್ಥ ತಲ್ಯೆ ಹಿಡುಕ ಸುಲ್ಯೆ ಮಕಳು ನೀವು

  4. H. R. Eliruvudalli nange thappenu kansthilla. Gottidda paniditharu Hindusthana andre yenu antha heli ?
    Yella darmagaligintha poorvika vada darmave Hindhu. a panditharu 😌

  5. ಇದು ಹಿಂದೂ ಧರ್ಮದ ಆಧಾರದ ಮೇಲೆಯೇ ಆಗಿರೋದು ಇದು 100/ ನಿಜ ಕಳ್ಳ ನನ್ನ ಮಕ್ಕಳು 1947 ಪಾಕೀಸ್ತಾನ ಅಂತ ಬೇರೆ ಅದರಲ್ಲ ಈಗಾ ಕೇಳುವ ಹಕ್ಕು ಹೇಗೆ ಬರುತ್ತೆ example ನಿಮ್ಮ ಮನೆಯಲ್ಲಿ ಇಬ್ಬರು ಅನ್ನ ಅವರು ಬೇರೆ ಯಾಗಿ ಆಸ್ತಿ ಎಲ್ಲ ಹಕ್ಕುಗಳನ್ನು ಬೇರೆ ಬೇರೆ ಯಾಗಿದೆ ಏನು ತಮ್ಮನ ಮಕ್ಕಳು ಅಂತ ಮನೇಲೇ ಜಾಗ ನೀಡಿದರೆ ಈಗಾ ಮತ್ತೆ ನಂಗೆ ಹಕ್ಕು ಬೇಕು ಅಂದ್ರೆ adu ಹೇಗೆ ಆಗುತ್ತೆ ಇದು ಸರಿ ಇಲ್ಲ

  6. ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....