Homeಕರ್ನಾಟಕ6 ದಿನಗಳಲ್ಲಿ 5ನೇ ಬಾರಿಗೆ ಪೆಟ್ರೋಲ್‌ ಬೆಲೆ ಏರಿಕೆ; ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಹೆಚ್ಚಿನ ದರ!

6 ದಿನಗಳಲ್ಲಿ 5ನೇ ಬಾರಿಗೆ ಪೆಟ್ರೋಲ್‌ ಬೆಲೆ ಏರಿಕೆ; ಶಿವಮೊಗ್ಗದಲ್ಲಿ ರಾಜ್ಯದಲ್ಲೇ ಹೆಚ್ಚಿನ ದರ!

- Advertisement -
- Advertisement -

ಭಾನುವಾರದಂದು ಪೆಟ್ರೋಲ್ ದರವು ಲೀಟರ್‌ಗೆ 50 ಪೈಸೆ ಮತ್ತು ಡೀಸೆಲ್‌ಗೆ 55 ಪೈಸೆಗಳಷ್ಟು ಏರಿಕೆಯಾಗಿದೆ. ದೈನಂದಿನ ದರ ಪರಿಷ್ಕರಣೆ ಮತ್ತೆ ಪ್ರಾರಂಭಗೊಂಡ ನಂತರ ಪ್ರೆಟ್ರೋಲ್‌‌ ಬೆಲೆ ಪ್ರತಿ ಲೀಟರ್‌ಗೆ 3.70 ರೂ. ನಿಂದ 3.75 ರೂ.ವರೆಗೆ ಏರಿಕೆಯಾಗಿದೆ. ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರವು 98.61 ರೂ. ನಿಂದ 99.11 ರೂ.ಗೆ ಏರಿಕೆಯಾಗಿದೆ. ಡೀಸೆಲ್ ದರಗಳು ಲೀಟರ್‌ಗೆ 89.87 ರೂ. ನಿಂದ 90.42 ರೂ.ಗೆ ಏರಿಕೆಯಾಗಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರಗಳು ಬದಲಾಗುತ್ತವೆ.

ದೇಶದಾದ್ಯಂತ ಬೆಲೆಗಳು ಹೆಚ್ಚಾಗುತ್ತಿದ್ದಂತೆ ರಾಜ್ಯದಲ್ಲೂ ಬೆಲೆಗಳು ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಡೀಸೆಲ್ ಮತ್ತು ಪೆಟ್ರೋಲ್‌ ಬೆಲೆ ತಲಾ 53 ಪೈಸೆ ಹೆಚ್ಚಳವಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 104.46 ರೂ ಆಗಿದ್ದು, ಡೀಸೆಲ್ ಬೆಲೆ 88.67 ರೂ.ಗೆ ತಲುಪಿದೆ.

ಇದನ್ನೂ ಓದಿ:  ನಾಲ್ಕು ತಿಂಗಳ ನಂತರ ಮತ್ತೆ ಪೆಟ್ರೋಲ್ ಬೆಲೆ ಏರಿಕೆ; ಗುಲ್ಬರ್ಗಾದಲ್ಲಿ 1.45, ಮೈಸೂರಿನಲ್ಲಿ 1 ರೂ. ಏರಿಕೆ!

ಈ ಬಾರಿಯ ಏರಿಕೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 1.66 ರೂ. ಹೆಚ್ಚಳವಾಗಿದೆ. ಇಲ್ಲಿ ಪೆಟ್ರೋಲ್ ಬೆಲೆ 106.13 ರೂ.ಗೆ ತಲುಪಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.  ಡೀಸೆಲ್ ಬೆಲೆ ಕೂಡಾ 1.57 ರೂ. ಹೆಚ್ಚಳವಾಗಿದ್ದು, ಲೀಟರ್‌ ಡೀಸೆಲ್ ಬೆಲೆ 90.09 ರೂ. ಗೆ ತಲುಪಿದೆ.

ರಾಜ್ಯದಲ್ಲೇ ಪೆಟ್ರೋಲ್‌ ಮತ್ತು ಡೀಸೆಲ್‌‌ ಬೆಲೆಯ ಹಚ್ಚಿರುವ ಜಿಲ್ಲೆಯಾಗಿ ಶಿವಮೊಗ್ಗ ಹೊರಹೊಮ್ಮಿದೆ. ಅಲ್ಲಿ ಪೆಟ್ರೋಲ್‌ ದರ 106.27 ರೂ.ಗೆ ತಲುಪಿದ್ದು, ಡೀಸೆಲ್ ದರ 90.22 ರೂ. ಗೆ ತಲುಪಿದೆ.

ಐದು ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದ ಹಿನ್ನಲೆಯಲ್ಲಿ ಸುಮಾರು ನಾಲ್ಕುವರೆ ತಿಂಗಳು ಯಾವುದೆ ದರವನ್ನು ಹೆಚ್ಚಳ ಮಾಡಿರಲಿಲ್ಲ. ನಾಲ್ಕುವರೆ ತಿಂಗಳ ನಂತರ ಮಾರ್ಚ್‌ 22 ರಂದು ಮತ್ತೆ ದರ ಹೆಚ್ಚಳ ಪ್ರಾರಂಭವಾಗಿತ್ತು. ಇದು ಇದರ ನಂತರ ಮಾಡಲಾದ ಐದನೇ ದರ ಹೆಚ್ಚಳವಾಗಿದೆ. ಹಿಂದಿನ ಎಲ್ಲಾ ನಾಲ್ಕು ಸಂದರ್ಭಗಳಲ್ಲಿ, ಬೆಲೆಗಳನ್ನು ಲೀಟರ್‌ಗೆ 80 ಪೈಸೆಗಳಷ್ಟು ಹೆಚ್ಚಿಸಲಾಗಿತ್ತು.

ಒಟ್ಟಾರೆಯಾಗಿ ಕಳೆದ ಆರು ದಿನಗಳಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 3.70 ರೂ. ಹಾಗೂ ಡೀಸೆಲ್‌‌ಗೆ 3.75 ರೂ. ನಷ್ಟು ಏರಿಕೆಯಾಗಿದೆ.

ಇದನ್ನೂ ಓದಿ: ದಲಿತ ಯುವತಿಯನ್ನು ಪ್ರೀತಿಸಿ, ನಂತರ ಮದುವೆಗೆ ನಿರಾಕರಿಸಿ ಪೆಟ್ರೋಲ್ ಸುರಿದು ಹತ್ಯೆಗೈದ ಆರೋಪ: ಸವರ್ಣೀಯ ಯುವಕನ ವಿರುದ್ಧ ಪ್ರಕರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...