Homeಮುಖಪುಟಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

ಗುಜರಾತ್: ವಿಧಾನಸಭೆ ಗೇಟ್‌ನಲ್ಲಿ ಕಾಂಗ್ರೆಸ್‌ ಶಾಸಕರೊಬ್ಬರಿಗೆ ಕಿರುಕುಳ; ಸ್ಪೀಕರ್‌ಗೆ ದೂರು

- Advertisement -
- Advertisement -

ಸಚಿವಾಲಯದ ಸಂಕೀರ್ಣ ಮತ್ತು ರಾಜ್ಯ ವಿಧಾನಸಭಾ ಭವನದೊಳಗೆ ಪ್ರವೇಶಿಸುವಾಗ ಪೊಲೀಸ್ ಸಿಬ್ಬಂದಿಯಿಂದ ತಾನು ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಗುಜರಾತ್ ವಿಧಾನಸಭೆಯ ಕಾಂಗ್ರೆಸ್ ಶಾಸಕರೊಬ್ಬರು ಸೋಮವಾರ ಸ್ಪೀಕರ್ ನಿಮಾಬೆನ್ ಆಚಾರ್ಯ ಅವರಿಗೆ ಬಗ್ಗೆ ದೂರು ನೀಡಿದ್ದಾರೆ.

ಗಾಂಧಿನಗರದ ಎಂಎಲ್‌ಎ ಕ್ವಾರ್ಟರ್ಸ್‌ನಲ್ಲಿಯೂ ಹಲವು ಶಾಸಕರು ಇದೇ ರೀತಿ ಕಿರುಕುಳಕ್ಕೆ ಒಳಗಾಗಿದ್ದಾಗಿ ದೂರಿಕೊಂಡಿದ್ದಾರೆ.

ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿ (ಜಿಪಿಸಿಸಿ) ಮಾಜಿ ಅಧ್ಯಕ್ಷ ಅಮಿತ್ ಚಾವ್ಡಾ ಅವರು ಸ್ಪೀಕರ್‌ಗೆ ಈ ವಿಷಯ ಪ್ರಸ್ತಾಪಿಸಿ, “ಸಚಿವಾಲಯ ಸಂಕೀರ್ಣ ಮತ್ತು ರಾಜ್ಯ ವಿಧಾನಸಭೆ ಕಟ್ಟಡದ ಪ್ರವೇಶದ್ವಾರದಲ್ಲಿ ಪೊಲೀಸ್ ಸಿಬ್ಬಂದಿ ನಮ್ಮೊಂದಿಗೆ ಭಯೋತ್ಪಾದಕರಂತೆ ವ್ಯವಹರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಶೋಷಿತರ ವಲಸೆ ಮತ್ತು ಪ್ರಭುತ್ವ; ಮರದೊಳಗಣ ಬೆಂಕಿ

“ಅಮಿತ್‌ಭಾಯಿ ಭಾಗಭಾಯ್ ಬರಾದ್ ಅವರು ಕೂಡ ನನ್ನನ್ನು ಖುದ್ದಾಗಿ ಭೇಟಿ ಮಾಡಿ ಇದೇ ರೀತಿ ದೂರು ನೀಡಿದ್ದಾರೆ. ಇನ್ನು ಮುಂದೆ ಯಾರೊಂದಿಗೂ ಈ ರೀತಿ ನಡೆದುಕೊಳ್ಳಬಾರದು, ಈ ಬಗ್ಗೆ ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಸ್ಪೀಕರ್ ಹೇಳಿದ್ದಾರೆ.

ಪ್ರತಿಪಕ್ಷದ ಉಪನಾಯಕ ಶೈಲೇಶ್ ಪರ್ಮಾರ್ ಮಾತನಾಡಿ, “ಸಚಿವಾಲಯದ ಗೇಟ್‌ನಲ್ಲಿ ನಮ್ಮನ್ನು ಪೊಲೀಸ್ ಸಿಬ್ಬಂದಿ ಬಲವಂತವಾಗಿ ತಡೆದರು. ಕೇಳಿದಾಗ ಅವರು ಸ್ಪೀಕರ್ ಅವರ ಸೂಚನೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ” ಎಂದು ಹೇಳಿದ್ದಾರೆ.

ಆದರೆ ಸ್ಪೀಕರ್‌ ಅವರು, ‘ನಾನು ಅಂತಹ ಯಾವುದೇ ಸೂಚನೆ ನೀಡಿಲ್ಲ’ ಎಂದು ಹೇಳಿದ್ದಾರೆ.

ಜಾಮ್‌ನಗರದ ಶಾಸಕ ವಿಕ್ರಮ್ ಮಡಮ್ ಅವರು ಮಾತನಾಡಿ, “ಬೆಳಿಗ್ಗೆಯೇ ಪೊಲೀಸ್ ಅಧಿಕಾರಿಗಳು ಶಾಸಕರ ಕ್ವಾರ್ಟರ್ಸ್‌ಗೆ ಆಗಮಿಸಿದರು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಆಗಿರುವ ಜಡೇಜಾ ಅವರು ಸ್ಪೀಕರ್ ಸೂಚನೆಯ ಮೇರೆಗೆ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಹೇಳಿದ್ದಾರೆ. ಅವರು ನಿಮ್ಮನ್ನು ಸುಮ್ಮನೆ ಯಾಕೆ ಹೆಸರಿಸಿದ್ದಾರೆ?” ಎಂದು ಕೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, “ಪ್ರತಿಯೊಬ್ಬ ಶಾಸಕರು ಗೌರವಕ್ಕೆ ಅರ್ಹರು. ಈ ಘಟನೆಯು ದುರದೃಷ್ಟಕರವಾಗಿದ್ದು, ನಾವು ಖಂಡಿತವಾಗಿಯೂ ಘಟನೆಯ ಬಗ್ಗೆ ತನಿಖೆ ನಡೆಸುತ್ತೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಭ್ರಷ್ಟಾಚಾರದಿಂದ ಕರ್ನಾಟಕಕ್ಕೇನು ಕಾದಿದೆ?: ಸಂವಾದ ಕಾರ್ಯಕ್ರಮ ನಾಳೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...