Homeಕರ್ನಾಟಕರಾಜಕೀಯ ಮೇಲಾಟ: ಅಮಿತ್‌ ಶಾ ಭೇಟಿಯ ಒಂದು ದಿನದ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ...

ರಾಜಕೀಯ ಮೇಲಾಟ: ಅಮಿತ್‌ ಶಾ ಭೇಟಿಯ ಒಂದು ದಿನದ ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ

- Advertisement -
- Advertisement -

ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಮುಂಚಿತವಾಗಿ, ರಾಜಕೀಯದಲ್ಲಿ ಭಾರಿ ಪ್ರಭಾವ ಹೊಂದಿರುವ ಲಿಂಗಾಯತ ಸಮುದಾಯವನ್ನು ಮೆಚ್ಚಿಸಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದೆ.

ಹಠಾತ್‌ ಬೆಳವಣಿಗೆಯಲ್ಲಿ, ರಾಜ್ಯ ಕಾಂಗ್ರೆಸ್‌ ನಾಯಕರ ಸಲಹೆಯಂತೆ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಗುರುವಾರದಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ಶಿವಕುಮಾರ ಸ್ವಾಮಿಯವರ 115ನೇ ಜಯಂತಿಯ ಭಾಗವಾಗಿ ಶುಕ್ರವಾರದಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ನಿಗದಿಯಾಗಿದೆ. ಇದಕ್ಕಿಂತಲೂ ಒಂದು ದಿನ ಮುಂಚಿತವಾಗಿ ರಾಹುಲ್ ಗಾಂಧಿ ಮಠಕ್ಕೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಜಾತಿಗೊಂದು ನಿಗಮ ಮಾಡಿದರೆ ಮಿತಿಯೇ ಇರುವುದಿಲ್ಲ – ಸಿದ್ದಲಿಂಗ ಸ್ವಾಮೀಜಿ

ಗುರುವಾರ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿಗೆ ಆಗಮಿಸಲಿರುವ ರಾಹುಲ್‌ ಗಾಂಧಿಯವರು, ಅಲ್ಲಿಂದ ಮಠಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ. ಅಲ್ಲಿ ಅವರು ಸ್ವಾಮಿಯ ಸಮಾಧಿಗೆ ಭೇಟಿ ನೀಡಲಿದ್ದು, ನಂತರ ಮಠದಲ್ಲಿ ಊಟ ಮಾಡುವ ಸಾಧ್ಯತೆಯಿದೆ ಎಂದು ರಾಜ್ಯ ಕಾಂಗ್ರೆಸ್‌ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ಮಠ-ಮಾನ್ಯಗಳೊಂದಿಗೆ ಗಾಂಧಿ ಕುಟುಂಬದ ನಡುವಿನ ಸಂಬಂಧವು ಭಕ್ತ ಮತ್ತು ದೇವರ ಸಂಬಂಧವಾಗಿದೆ. ಇಂದಿರಾಗಾಂಧಿ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿ ಸಲಹೆ ಪಡೆಯುತ್ತಿದ್ದರು. ರಾಜೀವ್ ಗಾಂಧಿ ಅಲ್ಲಿನ ಸಪ್ತಾಹದ ಧಾರ್ಮಿಕ ಕ್ರಿಯೆಗಳಲ್ಲಿ ಭಾಗವಹಿಸುತ್ತಿದ್ದರು” ಎಂದು ಕಾಂಗ್ರೆಸ್‌ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

2012ರಲ್ಲಿ ಶಿವಕುಮಾರ್‌ ಸ್ವಾಮಿಯ 105ನೇ ಜನ್ಮದಿನಾಚರಣೆ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆಗೆ ಬಿಜೆಪಿ ಜೊತೆಗಿನ ಸಂಬಂಧ ಕಡಿದುಕೊಂಡು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೆಜೆಪಿ ಸ್ಥಾಪಿಸಿದ್ದರು.

ಇದನ್ನೂ ಓದಿ: ಸಿದ್ದಗಂಗಾ ಮಠಕ್ಕೆ ಸಚಿವೆ ಜೊಲ್ಲೆ ಭೇಟಿ : ಡ್ಯಾಮೇಜ್ ಕಂಟ್ರೋಲ್ ಮಾಡಲು ಯತ್ನ

ಶಿವಕುಮಾರ ಸ್ವಾಮಿಯ ಜನ್ಮದಿನಾಚರಣೆಗೆ 2 ಲಕ್ಷಕ್ಕೂ ಹೆಚ್ಚು ಜನರು ಆಗಮಿಸಲಿದ್ದಾರೆ ಎಂದು ವರದಿಯಾಗಿದ್ದು, ಈ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಅವರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ನಾಯಕತ್ವವೂ ಪಕ್ಷ ಮಠಗಳಿಂದ ವಿಮುಖವಾಗಿಲ್ಲ ಎಂದು ತನ್ನ ನಿಷ್ಠೆಯನ್ನು ಪ್ರದರ್ಶಿಸಲು ಬಯಸಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ.

ಭಾರತರತ್ನ ವಿವಾದ

ಶಿವಕುಮಾರ ಸ್ವಾಮಿಯವರಿಗೆ ಮರಣೋತ್ತರ ಭಾರತರತ್ನ ನೀಡುವ ವಿಚಾರ ಅಮಿತ್‌ ಶಾ ಅವರು ಭೇಟಿ ನೀಡುವ ಮುನ್ನ ಮತ್ತೆ ಚರ್ಚೆಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಮಗ ಬಿ.ವೈ. ವಿಜಯೇಂದ್ರ ಅವರು ಶಿವಕುಮಾರ ಸ್ವಾಮಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಆದರೆ ಮಠದ ಈಗಿನ ಪೀಠಾಧಿಪತಿ ಸಿದ್ದಲಿಂಗ ಸ್ವಾಮಿ ಅವರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರಶಸ್ತಿಗಾಗಿ ಮಠ ಎಂದಿಗೂ ಒತ್ತಾಯಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಶಸ್ತಿ ಸ್ವಾಭಾವಿಕವಾಗಿ ಬಂದರೆ ಅದು ಅಮೃತ, ಒತ್ತಡದ ಮೂಲಕ ಪಡೆದ ಅದು ವಿಷವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ನೆಪದಲ್ಲಿ ತುಮಕೂರಿನಲ್ಲಿ ಭಾರೀ ಲೂಟಿ: ವೆಬ್‌ಸೈಟ್‌ನಲ್ಲಿ ಪೂರ್ಣಗೊಂಡ ಕಾಮಗಾರಿಗಳು ವಾಸ್ತವದಲ್ಲಿ ಆರಂಭವೇ ಆಗಿಲ್ಲ!!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...