Homeಕರ್ನಾಟಕದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ದಲಿತ್ ಫೈಲ್ಸ್: ಹಾಸನದ ದಲಿತ ಬಾಲಕನಿಂದ ಚಪ್ಪಲಿ ತೊಳೆಸಿ ಹಲ್ಲೆ- ಸವರ್ಣೀಯರಿಂದ ಜಾತಿ ದೌರ್ಜನ್ಯ ಆರೋಪ

ತನ್ನ ಮಗನ ಮೇಲಿನ ಹಲ್ಲೆ ಪ್ರಶ್ನಿಸಿದ ಬಾಲಕನ ತಾಯಿಯ ಮೇಲೆಯೂ ಹಲ್ಲೆ ನಡೆಸಿ, ಜಾತಿ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement -
- Advertisement -

ಸವರ್ಣೀಯರ ಗುಂಪೊಂದು ದಲಿತ ಬಾಲಕನ ಮೇಲೆ ಚಪ್ಪಲಿ ಕದ್ದ ಆರೋಪ ಹೊರಿಸಿ, ಓಡಾಡಿಸಿ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಅದೇ ಚಪ್ಪಲಿ ತೊಳೆಸಿ, ಜಾತಿ ನಿಂದನೆ ಮಾಡಿ ಅಶ್ಪೃಸ್ಯತೆ ಆಚರಿಸಿರುವ ಆರೋಪ ಕೇಳಿಬಂದಿದೆ. ಇದನ್ನು ಪ್ರಶ್ನಿಸಿದ ಬಾಲಕನ ತಾಯಿ ಮೇಲೆಯೂ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿರುವ ಅಮಾನವೀಯ ಘಟನೆ ಹಾಸನ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಜರುಗಿದೆ.

ಪ್ರಕರಣದ ಹಿನ್ನೆಲೆ

ಕೊಂಡಜ್ಜಿ ಗ್ರಾಮದ ದಲಿತ ಸಮುದಾಯದ ರವಿ ಕುಮಾರ್ ಮತ್ತು ಭವ್ಯರವರ ಪುತ್ರ ದರ್ಶನ್ ಸೀಗೆ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾರ್ಚ್ 29ರ ಮಂಗಳವಾರ ವಾರ್ಷಿಕ ಪರೀಕ್ಷೆ ಬರೆದು ದರ್ಶನ್ ವಾಪಸ್ಸು ಗ್ರಾಮಕ್ಕೆ ಬರುವಾಗ ಮದ್ಯಾಹ್ನ 12.30ರ ವೇಳೆಯಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಯಾರದಿವು ಎಂದು ಕಾಲುಗಳಿಂದ ತಳ್ಳಿದ್ದಾನೆ. ಅಷ್ಟಕ್ಕೆ ಸೀಗೆ ಗ್ರಾಮದ ಬಾರೆಯಲ್ಲಿ ವಾಸವಾಗಿರುವ ಲಿಂಗಾಯತ ಸಮುದಾಯಕ್ಕೆ ಸೇರಿದ ರೇವಣಸಿದ್ದಪ್ಪ ಬಿನ್ ಹಲಗಪ್ಪ, ಬಸವರಾಜು ಬಿನ್ ಹಲಗಪ್ಪ ಮತ್ತು ಸಾಗರ್ ಎಂಬುವವರು ಸೇರಿ ನಮ್ಮ ಚಪ್ಪಲಿಯನ್ನು ಕದ್ದಿದ್ದಿಯ ಎಂದು ಆರೋಪ ಹೊರಿಸಿ ದರ್ಶನ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

“ನಾನು ಪರೀಕ್ಷೆ ಬರೆದು ವಾಪಸ್ ಬರುವಾಗ ರಸ್ತೆಯಲ್ಲಿ ಬಿದ್ದಿದ್ದ ಚಪ್ಪಲಿಯನ್ನು ಪಕ್ಕಕ್ಕೆ ತಳ್ಳಿದ ಕಾರಣಕ್ಕೆ ಹೊಡೆಯಲು ಬಂದರು. ನಾನು ಭಯದಿಂದ ಓಡಿಹೋಗಲು ಯತ್ನಿಸಿದರೂ ಹಿಡಿದು ಮನಬಂದಂತೆ ಥಳಿಸಿದರು. ನಾನು ಎಸ್‌ಸಿ ಕಾಲೋನಿಯ ಹುಡುಗ ಎಂದು ತಿಳಿದೊಡನೆಯೇ ಹೊಲೆಯನ ಮಗನಾಗಿ ನನ್ನ ಚಪ್ಪಲಿ ಹೊತ್ತುಕೊಂಡು ಹೋಗಿದ್ದೀಯ ಎಂದು ಬೈಯ್ದು ಚಪ್ಪಲಿ ತೊಳೆಯುವಂತೆ ಒತ್ತಾಯಿಸಿದರು. ನಾನು ಚಪ್ಪಲಿ ಕದ್ದಿಲ್ಲ, ತೊಳೆಯೊಲ್ಲ ಎಂದಿದ್ದಕ್ಕೆ ಎದೆಗೆ ಒದ್ದರು” ಎಂದು ದರ್ಶನ್ ಅಳಲು ತೋಡಿಕೊಂಡಿದ್ದಾರೆ.

ನನ್ನ ತಲೆ ಮೇಲೆ ಹೊಡೆದರು. ನಮ್ಮ ಶಾಲೆಯ ಪಕ್ಕದಲ್ಲಿಯೇ ಅವರ ಪ್ಲಾಸ್ಟಿಕ್ ಚಪ್ಪಲಿ ತೊಳೆಸಿ ಅವಮಾನ ಮಾಡಿದರು. ವಿಷಯ ತಿಳಿದ ನನ್ನ ಸ್ನೇಹಿತ ಮನೋಜ್ ನಮ್ಮ ತಂದೆ ತಾಯಿಗೆ ತಿಳಿಸಿದರು. ಅದನ್ನು ಪ್ರಶ್ನಿಸಿದ ನಮ್ಮ ತಂದೆ ತಾಯಿ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂದು ದರ್ಶನ್ ತಿಳಿಸಿದ್ದಾರೆ.

ದರ್ಶನ್ ತಾಯಿ ಭವ್ಯರವರು ಮಾತನಾಡಿ, “ಹುಡುಗ ರವಿ ಮಗ ಎಂದು ಗೊತ್ತಾದಮೇಲೆಯೂ ಹೊಡೆದಿದ್ದಿರಲ್ಲ ಸರಿಯೇ ಎಂದು ಪ್ರಶ್ನಿಸಿದ್ದಕ್ಕೆ ಸೂಳೆಮುಂಡೆ ನಮ್ಮನ್ನೆ ಕೇಳುತ್ತೀಯ ಎಂದು ಬೈಯ್ದು ನನ್ನ ಮೇಲೆಯೂ ಹಲ್ಲೆ ನಡೆಸಿದರು. ತಾಳಿ ಸರ, ಓಲೆ ಕಿತ್ತುಹಾಕಿದ್ದಾರೆ. ಬಟ್ಟೆಯನ್ನು ಹರಿದು ಹಾಕಿ ಹೊಲೆಯ ಮುಂಡೆ ಎಂದು ಬೈಯ್ದು ಹೆಂಗಸರು ಹೇಳಲಾಗದ ಕೆಟ್ಟ ಭಾಷೆಯಲ್ಲಿ ಬೈದಿದ್ದಾರೆ” ಎಂದು ದೂರಿದ್ದಾರೆ.

ಅಮಾನುಷ ಹಲ್ಲೆ ನಡೆಸಿದ ಆರೋಪಿಗಳಾದ ರೇವಣಸಿದ್ದಪ್ಪ, ಬಸವರಾಜು ಹಾಗೂ ಅವರ ಮಕ್ಕಳಾದ ಶರತ್ ಮತ್ತು ಸಾಗರ್ ಇವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಯ ಪ್ರಮುಖರು ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಭೀಮವಿಜಯ ಪತ್ರಿಕೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ: ವಿಕಲಾಂಗ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ನಡೆಸಿದ್ದವರ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...