Homeಮುಖಪುಟಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್‌‌ಗೆ ವಿದೇಶ ಪ್ರವೇಶ ಮಾಡದಂತೆ ತಡೆ

- Advertisement -
- Advertisement -

ವಿಶ್ವದ ಖ್ಯಾತ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು ಲಂಡನ್‌ಗೆ ಹೋಗದಂತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಷನ್ ಅಧಿಕಾರಿಗಳು ತಡೆದಿದ್ದಾರೆ ಎಂದು ಮಂಗಳವಾರ ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯವು ಅವರ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿರುವ ಕಾರಣ ಅವರನ್ನು ವಿದೇಶ ಪ್ರವಾಸದಿಂದ ತಡೆಹಿಡಿಯಲಾಗಿದೆ ಎಂದು ದಿ ಹಿಂದೂ ವರದಿ ಮಾಡಿದೆ.

ಏಪ್ರಿಲ್ 1 ರಂದು ಲಂಡನ್‌ನ ಕೆಲವು ಉನ್ನತ ನ್ಯಾಯಾಧೀಶರು, ಸಂಪಾದಕರು ಮತ್ತು ರಾಜತಾಂತ್ರಿಕರೊಂದಿಗೆ ಕಾರ್ಯಕ್ರಮವನ್ನು ಹೊಂದಿದ್ದರಿಂದ ಅವರು ವಿಮಾನ ನಿಲ್ದಾಣಕ್ಕೆ ತೆರಳಿದ್ದಾಗಿ ಹೇಳಿದ್ದಾರೆ. ಅದೇ ದಿನ ಅವರು ‘ದಿ ಗಾರ್ಡಿಯನ್‌’ ಪತ್ರಿಕೆಯ ಸಂಪಾದಕಿ ಕ್ಯಾಥರೀನ್ ವಿನರ್ ಅವರ ಆಹ್ವಾನದ ಮೇರೆಗೆ ಪತ್ರಿಕೆಯ ಕಚೇರಿಯಲ್ಲಿ ಮಾತನಾಡಬೇಕಿತ್ತು. ಅದರ ನಂತರ ಏಪ್ರಿಲ್ 6 ಮತ್ತು 7 ರಂದು, ಅವರು ಇಂಟರ್ನ್ಯಾಷನಲ್ ಜರ್ನಲಿಸಂ ಫೆಸ್ಟಿವಲ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಟಲಿಗೆ ಹೋಗಬೇಕಿತ್ತು ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others
“ನಾನು ಎಲ್ಲಾ ಘಟನೆಗಳ ಬಗ್ಗೆ ಮೂರು ವಾರಗಳ ಮುಂಚಿತವಾಗಿ ಟ್ವೀಟ್ ಮಾಡಿದ್ದೆ. ನನ್ನ ವಿಮಾನ ಇಂದು (ಮಂಗಳವಾರ) ಮಧ್ಯಾಹ್ನ 3 ಗಂಟೆಗೆ ಇತ್ತು. ವಿಮಾನ ನಿಲ್ದಾಣದಲ್ಲಿರುವ ಇಮಿಗ್ರೇಷನ್‌ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಹಾಗೂ ಹೀಗೂ ಒಂದು ಗಂಟೆಯ ನಂತರ, ಜಾರಿ ನಿರ್ದೇಶನಾಲಯವು ನನಗೆ ಏಪ್ರಿಲ್ 1 ರಂದು ಹಾಜರಾಗಲು ಸಮನ್ಸ್ ಕಳುಹಿಸುತ್ತಿದ್ದಾರೆ ಎಂದು ಅಧಿಕಾರಿಳು ನನಗೆ ಹೇಳಿದರು. ನಾನು ಹೊರಡುವ ಒಂದು ಗಂಟೆಯ ಮೊದಲು ಅಂದರೆ ಮಧ್ನಹ್ನ 2 ಗಂಟೆಯ ಸುಮಾರಿಗೆ ನನಗೆ ಮೇಲ್‌ನಲ್ಲಿ ಸಮನ್ಸ್ ಬಂದಿದೆ” ಎಂದು ರಾಣಾ ಅಯೂಬ್ ಹೇಳಿದ್ದಾರೆ.

ತಾನು ಈಗಾಗಲೇ ಎಲ್ಲಾ ಸಂಬಂಧಿತ ದಾಖಲೆಗಳನ್ನು ಜಾರಿ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇನೆ ಎಂದು ರಾಣಾ ಅಯೂಬ್ ಹೇಳಿದ್ದಾರೆ. ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದ್ದು, ಉತ್ತರ ನೀಡಲು ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

“ಜನವರಿ ಮೊದಲನೆ ವಾರವೇ ಕೊನೆಯದು, ಅದರ ನಂತರ ನನಗೆ ಒಂದೇ ಒಂದು ಸಮನ್ಸ್ ಬಂದಿಲ್ಲ. ಇಂದು ನಾನು ವಿದೇಶಕ್ಕೆ ಹೊರಡುವ ಒಂದು ಗಂಟೆ ಮೊದಲು ಸಮನ್ಸ್‌ ಬಂದಿದೆ” ಎಂದು ರಾಣಾ ಅಯ್ಯೂಬ್ ಹೇಳಿದ್ದು, “ಪ್ರತಿ ಸಮನ್ಸ್ ಅನ್ನು ಗೌರವಿಸಿ ದಾಖಲೆಗಳನ್ನು ಸಲ್ಲಿಸಲಾಗಿದೆ” ಎಂದು ತಿಳಿಸಿದ್ದಾರೆ.

“ಕೋವಿಡ್ -19 ಸಾಂಕ್ರಾಮಿಕದ ಸಮಯದಲ್ಲಿ ಜನರಿಗೆ ಆಹಾರ ಮತ್ತು ಇತರ ಪರಿಹಾರಗಳನ್ನು ಒದಗಿಸಲು ಪತ್ರಕರ್ತೆ ನಿಧಿ ಸಂಗ್ರಹ ಅಭಿಯಾನವನ್ನು ಪ್ರಾರಂಭಿಸಿದ ನಂತರ, ‘ಹಣ ಲಾಂಡರಿಂಗ್ ತನಿಖೆ’ಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ರಾಣಾ ಅಯ್ಯೂಬ್ ಅವರ 1.77 ಕೋಟಿ ರೂಪಾಯಿ ಮೌಲ್ಯದ ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಿದೆ” ಎಂದು ಕಳೆದ ಫೆಬ್ರವರಿಯಲ್ಲಿ ಮಾಧ್ಯಮಗಳು ವರದಿ ಮಾಡಿದ್ದವು.

2021ರ ಸೆಪ್ಟೆಂಬರ್‌‌ನಲ್ಲಿ ಉತ್ತರ ಪ್ರದೇಶ ಪೊಲೀಸರ ಎಫ್‌ಐಆರ್‌ ಆಧರಿಸಿ ಜಾರಿ ನಿರ್ದೇಶನಾಲಯ ಪತ್ರಕರ್ತೆಯ ವಿರುದ್ದ ಪ್ರಕರಣ ದಾಖಲಿಸಿತ್ತು.

ಸೆಪ್ಟೆಂಬರ್‌ನಲ್ಲಿ, ಹಿಂದೂ ಐಟಿ ಸೆಲ್ ಎಂಬ ಬಿಜೆಪಿ ಪರ ಗುಂಪು ರಾಣಾ ಅಯೂಬ್ ವಿರುದ್ಧ ಆನ್‌ಲೈನ್ ನಿಧಿಸಂಗ್ರಹಣೆ ವೇದಿಕೆಯಾದ ಕೆಟ್ಟೋ ಮೂಲಕ “ದಾನದ ಹೆಸರಿನಲ್ಲಿ” ಅಕ್ರಮವಾಗಿ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿತ್ತು. ಸರ್ಕಾರದ ಅನುಮತಿಯಿಲ್ಲದೆ ರಾಣಾ ಅವರು ವಿದೇಶಿ ಹಣವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ರಾಣಾ ಅವರು ಕೆಟ್ಟೋದಲ್ಲಿ 2,69,44,680 ರೂ.ಗಳನ್ನು ಸಂಗ್ರಹಿಸಿದ್ದಾರೆ ಎಂದು ಜಾರಿ ನಿರ್ದೇಶನದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.  ಅವರು ಸಂಗ್ರಹಿಸಿದ ನಿಧಿಯಿಂದ 50 ಲಕ್ಷ ರೂಪಾಯಿಗಳ ಸ್ಥಿರ ಠೇವಣಿ ಪ್ರಾರಂಭಿಸಿದ್ದು, ಅದನ್ನು ಪರಿಹಾರ ಕಾರ್ಯಗಳಿಗೆ ಬಳಸಲಿಲ್ಲ ಎಂದು ಜಾರಿ ನಿರ್ದೇಶನಾಲಯವೂ ಹೇಳಿಕೊಂಡಿದೆ.

“ಜಾರಿ ನಿರ್ದೇಶನಾಲಯವು 50 ಲಕ್ಷ ರೂಪಾಯಿ ಮೌಲ್ಯದ ಸ್ಥಿರ ಠೇವಣಿ ಮತ್ತು ಬಾಕಿ ಮೊತ್ತವನ್ನು ಬ್ಯಾಂಕ್ ಠೇವಣಿಗಳಾಗಿ ನವಿ ಮುಂಬೈನ ಖಾಸಗಿ ಬ್ಯಾಂಕ್‌ನ ಎರಡು ಖಾತೆಗಳಲ್ಲಿ ಇರಿಸಲು ತಾತ್ಕಾಲಿಕ ಆದೇಶವನ್ನು ಹೊರಡಿಸಿದೆ” ಎಂದು ಪಿಟಿಐ ವರದಿ ಮಾಡಿದೆ.

ಆದರೆ ರಾಣಾ ಅಯೂಬ್ ಈ ಆರೋಪಗಳನ್ನು, ಅಸಂಬದ್ಧ, ಸಂಪೂರ್ಣ ದುರುದ್ದೇಶಪೂರಿತ ಮತ್ತು ಯಾವುದೆ ದಾಖಲೆಯಿಲ್ಲದೆ ಮಾಡಲಾದ ಆರೋಪ ಎಂದು ಹೇಳಿದ್ದಾರೆ. ತನ್ನ ಬ್ಯಾಂಕ್ ಸ್ಟೇಟ್‌ಮೆಂಟ್‌ ಅನ್ನು ಉದ್ದೇಶ ಪೂರ್ವಕವಾಗಿ ತಪ್ಪಾಗಿ ವರದಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಿದೇಶಿ ಕೊಡುಗೆ (ನಿಯಂತ್ರಣ) ಕಾಯಿದೆಯಡಿಯಲ್ಲಿ ವಿವರಿಸಿದಂತೆ ತಾನು ಯಾವುದೇ ವಿದೇಶಿ ಕೊಡುಗೆಗಳನ್ನು ಸ್ವೀಕರಿಸಿಲ್ಲ ಎಂದು ಅವರು ಹೇಳಿದ್ದಾರೆ.

ಅವರ ವಿದೇಶ ಪ್ರವಾಸವನ್ನು ತಡೆದಿರುವುದನ್ನು ವಿರೋಧಿಸಿ ಮಂಗಳವಾರ ಹಲವಾರು ಪತ್ರಕರ್ತರು ವಲಸೆ (ಇಮಿಗ್ರೇಷನ್‌) ಇಲಾಖೆಯ ಕ್ರಮಗಳನ್ನು ಟೀಕಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ನಾವಿಂದು ಅಗೋಶಿತ ತುರ್ತುಸ್ಥಿತಿಯಲ್ಲಿ ಇದ್ದೇವೆ ಎಂಬುದನ್ನು ಈ ಪ್ರಕರಣ ಸಾಬೀತುಪಡಿಸಿದೆ. ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಕ್ರಮ ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...