Homeಮುಖಪುಟಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ.

- Advertisement -
- Advertisement -

ಹಲಾಲ್ ವಿರುದ್ಧ ಕರಪತ್ರ ಹಂಚಿ ಒಂದು ಸಮುದಾಯದ ವಿರುದ್ಧ ದ್ವೇಷ ಹಬ್ಬಿಸುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದವರು ತಿಳಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಕ್ಕೆರೆ ಗ್ರಾಮದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಬಜರಂಗದಳದವರು ಈಗ ಹಲಾಲ್ – ಜಟ್ಕಾ ಕಟ್ ಎಂಬ ಹೆಸರಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದಾರೆ. ಇವತ್ತು ಅವರು ಹಲಾಲ್ ತೆಗೆದುಕೊಳ್ಳಬೇಡಿ ಎನ್ನುತ್ತಾರೆ. ಅದರ ಬದಲಿಗೆ ಜಟ್ಕಾ ಕಟ್ ತೆಗೆದುಕೊಳ್ಳಿ ಎಂದು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು, ಕಟ್ ಮಾಡಲು ಅದೇ ಸಮಾಜದವರೇ ಬರಬೇಕು. ಅವರು ಹಲಾಲ್ ಮಾಡ್ತಾರೊ, ಬಿಡ್ತಾರೊ ಅದು ವಿಷಯವಲ್ಲ. ನಮ್ಮ ರೈತರು ಎಷ್ಟು ಮಾಂಸ ಕಟ್ ಮಾಡುವ ಡಿಮ್ಯಾಂಡ್ ಇದೆ ಅದನ್ನು ಇವರು ಪೂರೈಸುವ ಪರಿಸ್ಥಿತಿಯಲ್ಲಿ ಇಲ್ಲ. ನಿಮ್ಮ ಜಟ್ಕಾ ಕಟ್ ಮಾಡೋಕು, ಇನ್ನೊಂದು ಮಾಡೋಕು ಆ ಸಮುದಾಯದವರೇ ಬೇಕು” ಎಂದರು.

ಈಗ ರೇಷ್ಮೆ, ಮಾವು ಬೆಳೆ ಮಾರಾಟಕ್ಕೂ ಸಹ ಅದೇ ಸಮುದಾಯದವರು ಬರಬೇಕು. ಈ ಬಜರಂಗದಳ ಪೋಲಿಗಳು ಬರ್ತಾವಾ ರೇಷ್ಮೆ ಮತ್ತು ಮಾವು ಖರೀದಿ ಮಾಡಲು? ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ನಮ್ಮ ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಮಾವು ಬೆಳೆ ನಷ್ಟವಾಗಿದೆ. ನಾಳೆ ಮಾವು ಖರೀದಿ ಮಾಡಲು ನಮಗೆ ಅದೇ ಸಮುದಾಯದ ಸಹಕಾರ ಬೇಕು. ಇವು ಯಾವೊ ವಿಶ್ವ ಹಿಂದೂ ಪರಿಷತ್‌ನವರು, ಬಜರಂಗದಳದವರು ತಮ್ಮ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರ ಇಟ್ಟುಕೊಂಡು ಹೊರಟಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ. ಆದರೆ ರೈತನ ಮಗನಾಗಿ ಇವರನ್ನು ನಂಬಬೇಡಿ, ಇವರು ಸಮಾಜ ಹಾಳು ಮಾಡಲು ಬರುತ್ತಿದ್ದಾರೆ ಎಂದು ರೈತರಿಗೆ ಹೇಳಲು ಬಯಸುತ್ತೇನೆ ಎಂದರು.

ಇಷ್ಟು ವರ್ಷ ಹಲಾಲ್ ಮಾಂಸ ತಿಂದಿದ್ದೇವೆ, ಏನಾಗಿದೆ ನಮಗೆ? ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಯ್ತದ? ನಮ್ಮ ದೇವರು ನಮ್ಮನ್ನು ಮೆಚ್ಚಲ್ವ.‌ ಇಷ್ಟು ವರ್ಷ ಹಲಾಲ್ ತಿಂದಾಗ ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಇದು ತಪ್ಪು ಎಂದು ಹೇಳಲಿಲ್ಲವಲ್ಲ ಎಂದು ಲೇವಡಿ ಮಾಡಿದರು.

“ಇವರಿಗೆ ಸಂವಿಧಾನದ ಮೇಲೆ ನಂಬಿಕೆಯಿಲ್ಲ. ನನಗೆ ಓಟು ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಇರಬೇಕು, ನಾಡಿನ ಜನ ನೆಮ್ಮದಿಯಿಂದ ಬದುಕಬೇಕು ಎಂಬುದು ನನ್ನ ಬಯಕೆ. ಕೇಸರಿ ಬಟ್ಟೆ ಹಾಕಿಕೊಂಡು ಹಳ್ಳಿ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ನಮ್ಮ ಜನರ ಬದುಕು ಹಾಳು ಮಾಡುತ್ತಿರುವಾಗ ನಾನು ಮೌನದಿಂದ ಇರುವುದಿಲ್ಲ. ಅಯ್ಯೊ ಹಿಂದುಗಳು ನಮಗೆ ವೋಟು ಹಾಕದಿದ್ರೆ ಎಂಬ ಭಯದಲ್ಲಿ ಕಾಂಗ್ರೆಸ್‌ನವರಿಗೆ ಈ ವಿಷಯ ಮಾತನಾಡಲು ತಾಕತ್ ಇಲ್ಲ. ಪಾಪಾ ಧೈರ್ಯ ಕಳೆದುಕೊಂಡಿದ್ದಾರೆ ಅವರು. ಆದರೆ ಮತಬ್ಯಾಂಕ್‌ಗಿಂತ ಹೆಚ್ಚಾಗಿ ನನ್ನ ಜನರ ಬದುಕು ಮುಖ್ಯ ನನಗೆ. ಎಲ್ಲಾ ಸಮಾಜಗಳು ಒಟ್ಟಿಗೆ ಬದುಕಬೇಕು. ಕುವೆಂಪುರವರ ಸಂದೇಶದಂತೆ ಇದು ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಏಕೆ ಬೆಂಕಿ ಹಚ್ಚಲು ಬಂದಿದ್ದೀರಿ ನೀವು? ಇದನ್ನೆಲ್ಲ ಉತ್ತರ ಪ್ರದೇಶದಲ್ಲಿ ಇಟ್ಟುಕೊಳ್ಳಿ. ನಿಮ್ಮಿಂದ ಈ ರಾಜ್ಯ ಕಟ್ಟಲು ಆಗುವುದಿಲ್ಲ” ಎಂದು ಎಚ್‌.ಡಿಕೆ ಕಿಡಿಕಾರಿದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರು. ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರೂ ಈ ವಿಶ್ವ ಹಿಂದೂ ಪರಿಷತ್ – ಭಜರಂಗದಳದವರು? ಎಂದು ಎಚ್‌ಡಿಕೆ ಪ್ರಶ್ನಿಸಿದರು. ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ ಇನ್ನು‌ ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕೂಡಲೆ ಈ ರೀತಿ ಮಾತನಾಡುವವರ ವಿರುದ್ದ ಕ್ರಮ ಕೈಗೊಳ್ಳಬೇಕು. ಏನು ಗೊತ್ತಿಲ್ಲದಂತೆ ಮೌನವಾಗಿರಬಾರದು ಎಂದು ಸವಾಲು ಹಾಕಿದರು.

ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದಲೆ ಸ್ಪರ್ಧೆ

ಮುಂದಿನ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡ್ತಾರೆ. ಇವತ್ತಿ‌ನ ಮಂಡ್ಯ ಸಂಸದರ ಹೇಳಿಕೆಗಳು ನೋಡಿದಾಗ ಇದು ನನ್ನ ಮನಸ್ಸಿಗೆ ಬಂದಿದೆ. ಅವತ್ತು ನಮ್ಮ‌ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು‌‌. ಕಾಂಗ್ರೆಸ್‌, ಬಿಜೆಪಿ, ರೈತಸಂಘ ಸೇರಿದ್ದರು. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ನಂಬಿಕೆಯಿದೆ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿ; ಹಾಸನ: ಗುರಾಯಿಸಿ ನೋಡಿದ್ದಾಗಿ ಆರೋಪಿಸಿ ದಲಿತ ಯುವಕನಿಗೆ ಮಾರಣಾಂತಿಕ ಹಲ್ಲೆ ಮಾಡಿದ ಸವರ್ಣೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸಮಾಜಘಾತುಕ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಕುಮಾರಣ್ಣನವರು ಹೇಳಿಕೆ ಸತ್ಯವಾದುದು ಕೇಸರಿ ಬಣ್ಣಕ್ಕೆ ಇರುವಂತಹ ಮೌಲ್ಯವನ್ನು ಕೆಲವೊಂದು ಕಿಡಿಗೇಡಿಗಳು ಹಾಳು ಮಾಡುತ್ತಿದ್ದಾರೆ. ಕುಮಾರಣ್ಣನವರ ಈ ಹೋರಾಟಕ್ಕೆ ನಾವೆಲ್ಲರೂ ಧ್ವನಿಗೂಡಿಸಿದ ಸಮರ್ಥಿಸೋಣ ಹಾಗೂ ಕುಮಾರಣ್ಣನವರ ಹೇಳಿಕೆಯ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ವನ್ನು ಪ್ರಾರಂಭಿಸೋಣ.

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....