Homeಕರ್ನಾಟಕVHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲವಾಗಿದ್ದು, ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ

- Advertisement -
- Advertisement -

ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಹೆಚ್‌.ಡಿ. ಕುಮಾರ ಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿರುವ ಕುಮಾರಸ್ವಾಮಿ, “ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್‌, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ” ಎಂದು ಅವರು ಕಿಡಿ ಕಾರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

“ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

“ವಿಶ್ವ ಹಿಂದೂ ಪರಿಷತ್‌, ʼವಿಶ್ವ ವಿನಾಶಕ ಪರಿಷತ್‌ʼ ಅಥವಾ ʼಧರ್ಮ ವಿನಾಶಕ ಪರಿಷತ್‌ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ?” ಎಂದು ಎಂದು ಅವರು ಪ್ರಶ್ನಿಸಿದ್ದಾರೆ.

“ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

“ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144‌ ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್‌ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

“ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ” ಎಂದು ಅವರು ಹೇಳಿದ್ದಾರೆ.

“ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...