Homeಮುಖಪುಟಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

- Advertisement -
- Advertisement -

ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ವಿರುದ್ಧ ಹಿಂಸಾತ್ಮಕ ಪ್ರತಿಭಟನೆಗಳು ಭುಗಿಲೆದ್ದಿದ್ದು, ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ ಅವರು ಶುಕ್ರವಾರ ತಡರಾತ್ರಿ ರಾಷ್ಟ್ರವ್ಯಾಪಿ ಸಾರ್ವಜನಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ.

ಪ್ರತಿಭಟನಾಕಾರರನ್ನು, ಶಂಕಿತರನ್ನು ವಿಚಾರಣೆಯಿಲ್ಲದೆ ದೀರ್ಘಾವಧಿಯವರೆಗೆ ಬಂಧಿಸಲು ಮಿಲಿಟರಿಗೆ ಅವಕಾಶ ನೀಡುವ ಕಠಿಣ ಕಾನೂನುಗಳನ್ನು ಅಧ್ಯಕ್ಷರು ಜಾರಿಗೊಳಿಸಿದ್ದಾರೆ.

22 ಮಿಲಿಯನ್ ಜನರಿರುವ ದ್ವೀಪ ರಾಷ್ಟ್ರದಲ್ಲಿ ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ರಾಜಪಕ್ಸ ಸೋತಿದ್ದು, ಅವರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಗುರುವಾರ ತಡರಾತ್ರಿ ಹಿಂಸಾಚಾರಕ್ಕೆ ತಿರುಗಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನೂರಾರು ಪ್ರತಿಭಟನಾಕಾರರು ಹಲವಾರು ಗಂಟೆಗಳ ಕಾಲ ಪೊಲೀಸರೊಂದಿಗೆ ಘರ್ಷಣೆ ನಡೆಸಿದರು. ವಿದೇಶಿ ಕರೆನ್ಸಿಯ ತೀವ್ರ ಕೊರತೆಯಿಂದಾಗಿ ಇಂಧನ ಸೇರಿದಂತೆ ಅಗತ್ಯ ಆಮದುಗಳಿಗೆ ರಾಜಪಕ್ಸ ಸರ್ಕಾರ ಹಣ ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ 13 ಗಂಟೆಗಳವರೆಗೆ ವಿದ್ಯುತ್ ಕಡಿತಕ್ಕೂ ಇದು ಕಾರಣವಾಗಿದೆ.

ಶ್ರೀಲಂಕಾದ ಕೊಲಂಬೊದಲ್ಲಿ ಶುಕ್ರವಾರ ರಾತ್ರಿ ನಡೆದ ಘರ್ಷಣೆಯ ನಂತರ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸ ಅವರ ಖಾಸಗಿ ನಿವಾಸಕ್ಕೆ ಆಗಮಿಸಿದರು. ದೇಶದ ಅತ್ಯಂತ ಕೆಟ್ಟ ಆರ್ಥಿಕ ಬಿಕ್ಕಟ್ಟಿನ ಕಾರಣ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಅಧ್ಯಕ್ಷರ ಮನೆಯ ಬಳಿ ಪ್ರತಿಭಟನೆ ನಡೆಸಿದಾಗ ಹತ್ತಾರು ಜನರನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀಲಂಕಾ ಷೇರುಗಳು ಶುಕ್ರವಾರ ಅತ್ಯಂತ ಕೆಟ್ಟ ಕುಸಿತ ಕಂಡಿದ್ದು, ಕೊಲಂಬೊ ಸ್ಟಾಕ್ ಎಕ್ಸ್‌ಚೇಂಜ್‌  ಸತತ ಮೂರನೇ ದಿನ ವ್ಯಾಪಾರವನ್ನು ಸ್ಥಗಿತಗೊಳಿಸಿತು. ಆಹಾರ ಮತ್ತು ಇಂಧನ ಸೇರಿದಂತೆ ಅಗತ್ಯ ಆಮದುಗಳಿಗೆ ಪಾವತಿಸಲು ಶ್ರೀಲಂಕಾ ಹೆಣಗಾಡುತ್ತಿದೆ. ದೇಶದ ವಿದೇಶಿ ವಿನಿಮಯ ಸಂಗ್ರಹವು ಕಳೆದ ಎರಡು ವರ್ಷಗಳಲ್ಲಿ ಸುಮಾರು 2.31 ಡಾಲರ್‌‌ ಬಿಲಿಯನ್‌ಗೆ ಅಂದರೆ ಶೇ. 70 ಕುಸಿತ ಕಂಡಿದೆ.

ಮತ್ತೊಂದೆಡೆ ಮೂರು ದಿನಗಳ ದೆಹಲಿ ಪ್ರವಾಸದಲ್ಲಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಶ್ರೀಲಂಕಾ ತಮಿಳರಿಗೆ ಮಾನವೀಯ ನೆರವು ನೀಡಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡುವಂತೆ ಕೇಂದ್ರವನ್ನು ಒತ್ತಾಯಿಸಿದ್ದಾರೆ.

ದ್ವೀಪ-ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೋರಿದ ಹಿನ್ನೆಲೆಯಲ್ಲಿ ಹಲವಾರು ಜನರು ಲಂಕಾದಿಂದ ಪಲಾಯನಗೈದು ಸಮುದ್ರ ಮಾರ್ಗದ ಮೂಲಕ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಸ್ಟಾಲಿನ್‌ ತಿಳಿಸಿದ್ದಾರೆ.

ಮಾಜಿ  ರಾಯಭಾರಿ ತಪ್ಪೊಪ್ಪಿಗೆ: ಶ್ರೀಲಂಕಾದ ಮಾಜಿ ರಾಯಭಾರಿಯೊಬ್ಬರು 2013ರಲ್ಲಿ ವಾಷಿಂಗ್ಟನ್ ಡಿಸಿಯಲ್ಲಿ ಹೊಸ ರಾಯಭಾರ ಕಚೇರಿಯ ಕಟ್ಟಡವನ್ನು ಖರೀದಿಸುವಾಗ ಶ್ರೀಲಂಕಾ ಸರ್ಕಾರದಿಂದ 332,027 ಅಮೆರಿಕನ್‌ ಡಾಲರ್‌‌ ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದ್ದರು. ಇದನ್ನು ಮಾಜಿ ರಾಯಭಾರಿಯವರೇ ತಪ್ಪೊಪ್ಪಿಕೊಂಡಿರುವುದಾಗಿ ನ್ಯಾಯಾಂಗ ಇಲಾಖೆ ತಿಳಿಸಿದೆ.

ಈಗ ವರ್ಜೀನಿಯಾದ ಆರ್ಲಿಂಗ್ಟನ್‌ನಲ್ಲಿ ವಾಸಿಸುತ್ತಿರುವ 61 ವರ್ಷದ ಜಾಲಿಯಾ ಚಿತ್ರನ್ ವಿಕ್ರಮಸೂರ್ಯ ಅವರು 2008 ರಿಂದ 2014 ರವರೆಗೆ ಯುಎಸ್‌ನಲ್ಲಿ ಶ್ರೀಲಂಕಾದ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಯುಎಸ್‌ ಜಿಲ್ಲಾ ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.

ಈ ಆರೋಪವು ಶಾಸನಬದ್ಧ ಗರಿಷ್ಠ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ಸಂಭಾವ್ಯ ಆರ್ಥಿಕ ದಂಡವನ್ನು ಹೊಂದಿರುತ್ತದೆ ಎಂದು ಮಾಧ್ಯಮ ಪ್ರಕಟಣೆ ತಿಳಿಸಿದೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 2012ರ ಅಂತ್ಯದಿಂದ ಅಥವಾ ನವೆಂಬರ್ 2013ರವರೆಗೆ, ರಿಯಲ್ ಎಸ್ಟೇಟ್ ವಹಿವಾಟಿನ ಬೆಲೆಯನ್ನು 332,027 ಡಾಲರ್‌ಗೆ ಹೆಚ್ಚಿಸುವ ಮೂಲಕ ವಾಷಿಂಗ್ಟನ್ ಡಿಸಿ ಯಲ್ಲಿ 2013ರ ಹೊಸ ರಾಯಭಾರ ಕಚೇರಿಯ ಕಟ್ಟಡವನ್ನು ಖರೀದಿಸುವಾಗ ವಿಕ್ರಮಸೂರ್ಯ ಶ್ರೀಲಂಕಾ ಸರ್ಕಾರವನ್ನು ವಂಚಿಸುವ ಯೋಜನೆಯನ್ನು ಅವರು ರೂಪಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಆಹಾರ ಮತ್ತು ಉದ್ಯೋಗದ ಕೊರತೆ: ತಮಿಳುನಾಡು ಕರಾವಳಿಯನ್ನು ತಲುಪಿದ ಶ್ರೀಲಂಕಾ ನಿರಾಶ್ರಿತರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...