Homeಕರ್ನಾಟಕಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

ಹಲಾಲ್‌‌ ಮಾಂಸ ಮಾರಾಟ ಮಾಡಿದ ಅಂಗಡಿ ಮಾಲಿಕನಿಗೆ ಹಲ್ಲೆ: ಐವರು ಬಜರಂಗದಳದ ದುಷ್ಕರ್ಮಿಗಳು ಅರೆಸ್ಟ್‌

- Advertisement -
- Advertisement -

ಶಿವಮೊಗ್ಗದ ಮಾಂಸದ ಅಂಗಡಿಯೊಂದಕ್ಕೆ ತೆರಳಿ ಹಲಾಲ್‌ ಮಾಂಸವನ್ನು ಮಾರಾಟ ಮಾಡದಂತೆ, ಅಂಗಡಿ ಮಾಲಿಕನಿಗೆ ಹಲ್ಲೆ ನಡೆಸಿದ ಐವರು ಬಜರಂಗದಳದ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾಗಿ ವರದಿಯಾಗಿದೆ. ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳ ಕಾರ್ಯಕರ್ತರು ಹಲಾಲ್ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲಿಕ ತೌಸಿಫ್ ಅವರಿ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದರು.

ಈ ಸಂಬಂಧ ಭದ್ರಾವತಿಯ ಹೊಸಮನೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಲಕ್ಷ್ಮೀ ಪ್ರಸಾದ್ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಐವರು ದುಷ್ಕರ್ಮಿಗಳು ಮಾಂಸದ ಅಂಗಡಿಯೊಳಗೆ ನುಗ್ಗಿ ಹಿಂದೂಗಳೇ ಇರುವ ಪ್ರದೇಶದಲ್ಲಿ ಮಾಂಸವನ್ನು ಮಾರಾಟ ಮಾಡುತ್ತಿದ್ದೀರಿ. ಹಲಾಲ್ ಮಾಂಸವನ್ನು ಮಾರಾಟ ಮಾಡದಂತೆ ಹೇಳಿದ್ದಾರೆ. ಜೊತೆಗೆ ಅವಾಚ್ಯ ಶಬ್ಧಗಳಿಂದಲೂ ಬೈದಿದ್ದರು. ಈ ವೇಳೆ ಅಂಗಡಿಯ ಮಾಲಕ ತೌಸೀಫ್ ಅವರು ಹಲಾಲ್ ಮಾಂಸ ಬೇಡ ಅಂತಿದ್ದರೆ ಬೇರೆ ಅಂಗಡಿಗೆ ತೆರಳುವಂತೆ ಕೇಳಿದ್ದರು. ಈ ವೇಳೆ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.

ಇದನ್ನೂ ಓದಿ: ಭಾವನಾತ್ಮಕವಾಗಿ ಛಿದ್ರಗೊಳಿಸಿ ಮತ ಗಿಟ್ಟಿಸುವ ಗಿಡುಗಗಳಿವು; ಇವರು ನೈಜ ಹಿಂದುಗಳೇ ಅಲ್ಲ: ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ದದ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಇದೇ ದುಷ್ಕರ್ಮಿಗಳು ಅಲ್ಲಿನ ಜನತಾ ಹೋಟೆಲ್‌‌ಗೆ ಕೂಡಾ ನುಗ್ಗಿ ಹಲಾಲ್ ಮಾಡಿರುವ ಮಾಂಸವನ್ನು ಮಾರಾಟ ಮಾಡದಂತೆ ಕೇಳಿಕೊಂಡಿದ್ದಾರೆ. ಈ ವೇಳೆ ವಾಗ್ವಾದಕ್ಕೆ ಇಳಿದಿದ್ದ ಸಿಬ್ಬಂದಿಯ ಮೇಲೆ ದಾಳಿ ಮಾಡಿದ್ದಾರೆ ಎಂದು ಕೂಡಾ ವರದಿಯಾಗಿದೆ. ಈ ಘಟನೆಯ ಬಗ್ಗೆ ಕೂಡಾ ಎಫ್‌ಐಆರ್‌ ದಾಖಲಾಗಿದೆ ಎಂದು ಜಿಲ್ಲಾ ಎಸ್‌ಪಿ ಲಕ್ಷ್ಮಿ ಪ್ರಸಾದ್‌ ಹೇಳಿದ್ದಾರೆ.

ಎರಡೂ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಬಿಜೆಪಿ ಬೆಂಬಲಿತ ಸಂಘಟನೆಗಳು ಯುಗಾದಿ ಆಚರಣೆಯ ಸಂದರ್ಭದಲ್ಲಿ ಹಲಾಲ್ ಮಾಂಸ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿತ್ತು. ಇದಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಬಹಿರಂಗವಾಗಿ ಬೆಂಬಲ ಕೂಡಾ ನೀಡುತ್ತಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, “ಹಲಾಲ್ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ್ದು, ಹೈಕೋರ್ಟಿನ ಹಿಜಾಬ್ ರೋಡ್ ತೀರ್ಪಿನ ವಿರುದ್ಧ ಮುಸ್ಲಿಂ ಸಮುದಾಯದ ಪ್ರತಿಭಟನೆಯ ಪರಿಣಾಮವಾಗಿದೆ” ಎಂದು ಹೇಳಿ ಸಾಮರಸ್ಯ ಕೆಡಿಸುತ್ತಿರುವ ದುಷ್ಕರ್ಮಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

“ಹಿಜಾಬ್ ವಿಷಯದಲ್ಲಿ ಇತ್ತೀಚಿನ ಹೈಕೋರ್ಟ್ ತೀರ್ಪನ್ನು ಪ್ರತಿಭಟಿಸಲು ಒಂದು ನಿರ್ದಿಷ್ಟ ಸಮುದಾಯದ ನಿರ್ಧಾರವು ಅಂತಹ ಪ್ರತಿಕ್ರಿಯೆಗಳಿಗೆ ಕಾರಣವಾಗಿದೆ. ಅದು ಶೀಘ್ರದಲ್ಲೇ ತಣ್ಣಗಾಗಲಿ ಎಂದು ನಾನು ಬಯಸುತ್ತೇನೆ” ಎಂದು ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಭುಗಿಲೆದ್ದ ಆರ್ಥಿಕ ಬಿಕ್ಕಟ್ಟು; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಜಾರಿ

ಬಿಜೆಪಿ ಕಾರ್ಯಾಧ್ಯಕ್ಷ ಸಿ.ಟಿ.ರವಿ ಕೂಡ ಹಲಾಲ್ ಮಾಂಸವನ್ನು ನಿಷೇಧಿಸುವಂತೆ ಕೋರಿದ್ದು, ಇದನ್ನು ಮುಸ್ಲಿಂ ಸಮುದಾಯದವರು ನಡೆಸುತ್ತಿರುವ ಆರ್ಥಿಕ ಜಿಹಾದ್ ಎಂದು ನಾಲಗೆ ಹರಿಯಬಿಟ್ಟಿದ್ದಾರೆ.

‘ಗಂಭೀರ ಆಕ್ಷೇಪ’ಗಳನ್ನು ಪರಿಶೀಲಿಸುತ್ತೇನೆ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಬಿಜೆಪಿ ಬೆಂಬಲಿತ ಗುಂಪುಗಳು ಹಲಾಲ್ ಮಾಂಸ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದ ನಂತರ, ಮುಖ್ಯಮಂತ್ರಿ ಬೊಮ್ಮಾಯಿ ಹಲಾಲ್ ಮಾಂಸದ ವಿರುದ್ಧ ‘ಗಂಭೀರ ಆಕ್ಷೇಪಣೆ’ ವ್ಯಕ್ತವಾದ ಕಾರಣ ಈ ಬಗ್ಗೆ ತನಿಖೆ ನಡೆಸುವುದಾಗಿ ಬುಧವಾರ ಹೇಳಿದ್ದರು.

ಈ ವಿಷಯವನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕಿದೆ ಎಂದು ಹೇಳಿದ್ದ ಬೊಮ್ಮಾಯಿ, “ಇದು ಈ ಹಿಂದಿನಿಂದಲೂ ನಡೆಯುತ್ತಿರುವ ಅಭ್ಯಾಸವಾಗಿತ್ತು. ಈಗ, ಗಂಭೀರ ಆಕ್ಷೇಪಣೆಗಳು ಹುಟ್ಟಿಕೊಂಡಿವೆ. ನಾವು ಅದನ್ನು ಪರಿಶೀಲಿಸುತ್ತೇವೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಉಗಾದಿ ವರ್‍ಸತೊಡಕು: ದಲಿತರಿಗೆ ‘ಜಟ್ಕಾ ಕಟ್‌’ ಮಾಂಸ ಸಿಗುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...