Homeಮುಖಪುಟಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ. 

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಕಾರು ಹರಿಸಿ 8 ಜನರ ಸಾವಿಗೆ ಕಾರಣನಾದ ಆರೋಪ ಎದುರಿಸುತ್ತಿರುವು ಕೇಂದ್ರ ಸಚಿವ ಅಜಯ್ ಮಿಶ್ರಾರವರ ಪುತ್ರ ಆಶಿಶ್ ಮಿಶ್ರಾಗೆ ಹೈಕೋರ್ಟ್ ಜಾಮೀನು ನೀಡಿರುವುದನ್ನು ಸಂತ್ರಸ್ತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಈ ಪ್ರಕರಣದ ವಿಚಾರಣೆ ವೇಳೆ ‘ಪ್ರಕರಣ ಘೋರ ಅಪರಾಧವಾದರೂ ಆರೋಪಿ ಆಶಿಶ್ ಮಿಶ್ರಾ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ ಮತ್ತು ಸಾಕ್ಷಿ ನಾಶ ಮಾಡುವುದಿಲ್ಲ’ ಎಂದು ಯುಪಿ ಸರ್ಕಾರ ಹೇಳಿದೆ.

“ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡಲಾಗಿದೆ. ಅವನ್ನು ತಿರುಚಲು ಸಾಧ್ಯವಿಲ್ಲ. ಅದೇ ರೀತಿ ಆರೋಪಿಯು ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲ. ಅಲ್ಲದೆ ಆರೋಪಿ ಮೊದಲ ಬಾರಿಗೆ ತಪ್ಪೆಸೆಗಿದ್ದಾರೆ. ಅವರದು ಪುನಾರಾವರ್ತಿತ ಅಪರಾಧವೆಸಗಿದ್ದರೆ ಮಾತ್ರ ಜಾಮೀನು ನೀಡಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಮಹೇಶ್ ಜೇಠ್ಮಲಾನಿ ಹೇಳಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಉತ್ತರ ಪ್ರದೇಶದ ವಿಶೇ‍ಷ ತನಿಖಾ ತಂಡವು ಆರೋಪಿಗೆ ನೀಡಿರುವ ಜಾಮೀನು ರದ್ದುಗೊಳಿಸುವಂತೆ ಶಿಪಾರಸ್ಸು ಮಾಡಿದೆ. ಈ ಕುರಿತು ರಾಜ್ಯ ಸರ್ಕಾರ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪಿಯು ಬಿಜೆಪಿ ಆಡಳಿತದ ಕೇಂದ್ರ ಸಚಿವರ ಮಗನಾದ ಕಾರಣ ಉತ್ತರ ಪ್ರದೇಶ ಸರ್ಕಾರ ಆರೋಪಿಯ ಪರ ಮೃದು ಧೋರಣೆ ಅನುಸರಿಸುತ್ತಿದೆ ಎಂದು ರೈತರು ಮತ್ತು ವಿಪಕ್ಷಗಳು ಆರೋಪಿಸಿವೆ.

“ನೀವು ಜಾಮೀನು ನೀಡಿರುವುದರ ವಿರುದ್ಧ ಮೇಲ್ಮನವಿ ಸಲ್ಲಿಸುವಂತೆ ನಾವು ಒತ್ತಾಯಿಸುವುದಿಲ್ಲ. ಆದರೆ ಈ ವಿಷಯದಲ್ಲಿ ನಿಮ್ಮ ನಿಲುವೇನು” ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಉತ್ತರ ಪ್ರದೇಶ ಸರ್ಕಾರವು, “ನಾವು ಅಲಹಾಬಾದ್ ಹೈಕೋರ್ಟ್‌ನಲ್ಲಿಯೂ ಸಹ ಇದು ಘೋರ ಅಪರಾಧ, ಈ ಅಪರಾಧವನ್ನು ಖಂಡಿಸಲು ಯಾವುದೇ ಪದಗಳಿಲ್ಲ ಎಂದು ವಾದಿಸಿದ್ದೆವು” ಎಂದು ತಿಳಿಸಿದೆ.

“ಅಪರಾಧವು ಗಂಭೀರವಾಗಿದೆ. ಅಪರಾಧವು ಉದ್ದೇಶಪೂರ್ವಕವಾಗಿ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣೆಯ ಹಂತದಲ್ಲಿ ಮಾತ್ರ ಪರಿಶೀಲಿಸಬಹುದು. ಅಪರಾಧದ ಉದ್ದೇಶವು ಸೂಕ್ಷ್ಮವಾದ ವಿಷಯವಾಗಿರುವುದರಿಂದ ವಿಚಾರಣೆಯ ಹಂತದಲ್ಲಿ ಮಾತ್ರ ಚರ್ಚಿಸಬಹುದು. ಆರೋಪಿಗೆ ಜಾಮೀನು ನೀಡುವುದನ್ನು ಅಲಹಾಬಾದ್ ಹೈಕೋರ್ಟಿನ ಮುಂದೆ ನಾನು ಕಟುವಾಗಿ ವಿರೋಧಿಸಿದೆ. ನಮ್ಮ ವಾದಗಳ ಹೊರತಾಗಿಯೂ ಹೈಕೋರ್ಟ್ ಜಾಮೀನು ನೀಡಿದೆ. ವಾಹನ ನಜ್ಜುಗುಜ್ಜಾಗಿ ಜನರು ಸಾವನ್ನಪ್ಪಿದ್ದಾರೆ ಹೊರತು ಬುಲೆಟ್ ಗಾಯದಿಂದಲ್ಲ” ಎಂದು ಯುಪಿ ಸರ್ಕಾರದ ವಕೀಲರು ಹೇಳಿದ್ದಾರೆ.

ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು ಮಾಡುವ ಸಮಯದಲ್ಲಿ ಹೈಕೋರ್ಟ್, ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ಸೇರಿದಂತೆ ಪೊಲೀಸರು ಪಟ್ಟಿ ಮಾಡಿರುವ ಕೆಲವು ಆರೋಪಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿತ್ತು. “ಪ್ರಕರಣದ ಸತ್ಯಗಳು ಮತ್ತು ಸಂದರ್ಭಗಳನ್ನು ಸಂಪೂರ್ಣವಾಗಿ ಪರಿಗಣಿಸಿ ಎಫ್ಐಆರ್ ಪ್ರಕಾರ, ಆರೋಪಿ ಆಶಿಶ್ ಮಿಶ್ರಾ ಗುಂಡು ಹಾರಿಸಿ ಪ್ರತಿಭಟನಾಕಾರರನ್ನು ಕೊಂದ ಉಲ್ಲೇಖವಿದೆ. ಆದರೆ ತನಿಖೆಯ ಸಮಯದಲ್ಲಿ, ಅಂತಹ ಯಾವುದೇ ಬಂದೂಕು ಗಾಯಗಳಾದ ಸಾಕ್ಷ್ಯವಿಲ್ಲ. ಸತ್ತವರ ದೇಹದ ಮೇಲೆ ಅಥವಾ ಗಾಯಗೊಂಡ ವ್ಯಕ್ತಿಗಳ ದೇಹದ ಗುಂಡಿನ ದಾಳಿ ಕಂಡುಬಂದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷದ ಅಕ್ಟೋಬರ್ 3 ರಂದು ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿ ಅವರ ಮಗ ಆಶಿಶ್ ಮಿಶ್ರಾ ತೆನಿ, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಎಸ್‌ಯುವಿ ಹರಿಸಿ ನಾಲ್ವರ ರೈತರನ್ನು ಹತ್ಯೆ ಮಾಡಿದ್ದರು. ಹತ್ಯೆಯ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಸರ್ಕಾರ ಮತ್ತು ಪೊಲೀಸ್ ಇಲಾಖೆ ಮೇಲೆ ಒತ್ತಡ ಉಂಟಾದ ಬಳಿಕ ಆಶಿಶ್ ಮಿಶ್ರಾ ತೆನಿಯನ್ನು ಬಂಧಿಸಲಾಗಿತ್ತು.

ಕೇಂದ್ರ ಸಚಿವ ಅಜಯ್ ಮಿಶ್ರಾ ತೆನಿಯನ್ನು ಸಂಪುಟ ಸಚಿವ ಸ್ಥಾನದಿಂದ ಕೈಬಿಡಲು ರೈತರು, ರೈತ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ, ಒತ್ತಾಯಗಳ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಸಚಿವರಾಗಿ ಮುಂದುವರಿದಿದ್ದಾರೆ.

ಸದ್ಯ ಹೈಕೋರ್ಟ್ ನೀಡಿರುವ ಜಾಮೀನು ರದ್ದುಗೊಳಿಸಬೇಕೆಂಬ ಅರ್ಜಿಯ ವಿಚಾರಣೆ ಮುಗಿಸಿರುವ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ.


ಇದನ್ನೂ ಓದಿ; ಮಾಂಸ ತಿನ್ನದವರು ಟಿವಿಗಳಲ್ಲಿ ಯಕ್ಷಗಾನ ಮಾಡುತ್ತಿದ್ದಾರೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....