Homeಮುಖಪುಟಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಅಭಿಮತ

- Advertisement -
- Advertisement -

“ಶಾಂತಿ ಸೌಹಾರ್ದತೆಯನ್ನು ಎಲ್ಲರೂ ಕಾಯ್ದುಕೊಂಡು ಹೋಗಬೇಕು. ಪ್ರೀತಿಯಿಂದ ವರ್ತಿಸಿದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ.‌ ದ್ವೇಷದಿಂದಾಗಿ ಮನುಷ್ಯ ಶಾಂತಿ, ಸಮಾಧಾನ ಕಳೆದುಕೊಳ್ಳುತ್ತಾನೆ. ದ್ವೇಷ, ಅಸೂಯೆಯನ್ನು ಬಿಟ್ಟು‌ ಸೌಹಾರ್ದತೆಯಿಂದ, ಭ್ರಾತೃತ್ವ ಭಾವನೆಯಿಂದ ವರ್ತಿಸಿದಾಗ ಶಾಂತಿ ದೊರಕುತ್ತದೆ” ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ತಿಳಿಸಿದರು.

ಸಮಾಜದಲ್ಲಿ ಹೆಚ್ಚುತ್ತಿರುವ ಕೋಮುದ್ವೇಷದ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಅವರು, “ದ್ವೇಷ ಸೃಷ್ಟಿಸುವ ಶಕ್ತಿಗಳನ್ನು ತಡೆಯುವ ಕೆಲಸ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಜನಾಂಗೀಯ ತಾರತಮ್ಯವನ್ನು ಅಧಿಕಾರಕ್ಕಾಗಿ ಬಳಸಬಾರದು, ಚುನಾವಣೆಯ ವಿಷಯವಾಗಿಸಬಾರದು” ಎಂದು ಹೇಳಿದರು.

“ಸಂವಿಧಾನಕ್ಕೆ ಎಲ್ಲರೂ ಬೆಲೆ ಕೊಡಬೇಕು. ಸಂವಿಧಾನದ ಪ್ರಕಾರ ಸೇವೆ ಸಲ್ಲಿಸುವುದಾಗಿ ಪ್ರಮಾಣವಚನ ಸ್ವೀಕರಿಸಿದವರು, ಅದಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು” ಎಂದರು.

ನಮ್ಮ ಲಿಂಗಾಯತ ಮಠಗಳು ಕೋಮು ಸೌಹಾರ್ದತೆಗೆ ಹೆಸರಾಗಿವೆ ಎಂದ ಅವರು, “ಎಲ್ಲ ಸಮುದಾಯಗಳು, ಸಮಾನ ಭಾವದಿಂದ ನಮ್ಮ ಮಠಗಳಲ್ಲಿ ಪಾಲ್ಗೊಳ್ಳುತ್ತಾರೆ.‌ ದಾಸೋಹಕ್ಕೆ, ಕೋಮುಸೌಹಾರ್ದತೆಗೆ ಲಿಂಗಾಯತ ಮಠಗಳು ಹೆಸರಾಗಿವೆ. ಇವನಾರವ ಎನ್ನದೆ ಇವ ನಮ್ಮವ ಎನ್ನುವ ಪರಂಪರೆ ನಮ್ಮದು” ಎಂದು ತಿಳಿಸಿದರು.

“ಬೇರೆ ದೇಶಗಳಲ್ಲಿರುವ ಹಿಂದೂಗಳಿಗೆ ಇದೇ ರೀತಿಯ ಧಕ್ಕೆಯಾದರೆ ಇವರು ಏನು ಮಾಡುತ್ತಾರೆ?‌ ಬೆಳಗಾವಿಯಲ್ಲಿ ಮರಾಠಿಗರಿಗೆ ತೊಂದರೆ ಕೊಟ್ಟರೆಂದು ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಅಡ್ಡಿಪಡಿಸಿದ್ದನ್ನು ನೋಡಿದ್ದೇವೆ. ಹೀಗಾಗಿ ಸಮಾಜದಲ್ಲಿ ಸಂಘರ್ಷ ಇರಬಾರದು” ಎಂದು ಎಚ್ಚರಿಸಿದರು.

ಕಾವಿ ವೇಷದಲ್ಲಿರುವ, ಸ್ವಾಮೀಜಿಗಳೆನಿಸಿಕೊಂಡಿರುವ ಕೆಲವರು ದ್ವೇಷ ಭಾಷಣ ಮಾಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮ ಸ್ವಾಮೀಜಿಯವರು, “ಅಂಥವರನ್ನು ಸ್ವಾಮೀಜಿಗಳು ಎಂದು ಹೇಗೆ ಅನ್ನುತ್ತೀರಿ? ಸಮಾಜದಲ್ಲಿ ಕಲಹ ಉಂಟು ಮಾಡೋರು ಸ್ವಾಮೀಜಿಗಳು ಹೇಗಾಗುತ್ತಾರೆ? ಎಲ್ಲರನ್ನು ಸಮಾನವಾಗಿ ಕಾಣುವವರು, ಎಲ್ಲರಿಗೂ ಪ್ರೀತಿಯನ್ನು ಹಂಚುವವರು ಸ್ವಾಮೀಜಿಗಳು. ಕೆಲವರಿಗೆ ಪ್ರೀತಿ, ಕೆಲವರಿಗೆ ದ್ವೇಷ ನೀಡೋರು ಸ್ವಾಮೀಜಿಗಳೇ ಅಲ್ಲ” ಎಂದು ಸ್ಪಷ್ಟಪಡಿಸಿದರು.

“ಸರ್ಕಾರ, ಸಮಾಜ ವಿರೋಧಿ ಕೃತ್ಯಗಳಿಗೆ ಪ್ರತಿಬಂಧ ಹೇರಬೇಕು. ಜನರಿಗೆ ಉದ್ಯೋಗ ನೀಡಬೇಕು. ಕೆಲಸಗಳು ಇಲ್ಲದಿದ್ದಾಗ ಮನಸ್ಸು ಇಂತಹ ಕೃತ್ಯಗಳಲ್ಲಿ ತೊಡಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...